3 ಸಾವಿರ ಗಡಿಯತ್ತ ಕೊರೊನಾ ಸೋಂಕಿತರು: ತಬ್ಲಿಘಿ ಜಮಾತ್ ಕೊಡುಗೆ 1023

ಹೊಸದಿಲ್ಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 3 ಸಾವಿರ ಗಡಿ ಸಮೀಪಿಸಿದೆ. ತೀವ್ರ ಆತಂಕಕಾರಿ ವಿಷಯ ಎಂದರೆ ಹೊಸದಿಲ್ಲಿಯ ನಿಜಾಮುದ್ದೀನ್ ತಬ್ಲಿಘಿ ಜಮಾತ್‌ನಲ್ಲಿ ಭಾಗವಹಿಸಿದ್ದವರೇ 1023 ಮಂದಿ ಇದ್ದಾರೆ. ನಂಜು ಈಗ 17 ರಾಜ್ಯಗಳಲ್ಲಿ ವ್ಯಾಪಿಸಿದೆ. ತಬ್ಲಿಘಿ ಜಮಾತ್ ಸಭೆಯಲ್ಲಿ ಭಾಗವಹಿಸಿದ 17 ರಾಜ್ಯಗಳ 1023 ಮಂದಿಗೆ ಕೊರೋನಾ ವೈರಸ್ ಪಾಸಿಟಿವ್ ದೃಢಪಟ್ಟಿದೆ ಎಂದು ಕೇಂದ್ರ ಸರಕಾರ ಶನಿವಾರ ಮಾಹಿತಿ ನೀಡಿದೆ. ದೇಶದಲ್ಲಿ ಇದುವರೆಗೆ 3 ಸಾವಿರಕ್ಕೂ ಹೆಚ್ಚು ಮಂದಿಯಲ್ಲಿ ಕೊವಿಡ್-19 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, ದೇಶಾದ್ಯಂತ 60ಕ್ಕೂ ಹೆಚ್ಚು ಮಂದಿ ಮಹಾಮಾರಿಗೆ ಬಲಿಯಾಗಿದ್ದಾರೆ. ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ. ಆತಂಕಕಾರಿ ವಿಷಯ ಎಂದರೆ ಶೇಕಡ 30 ಕೊರೊನಾ ಸೋಂಕಿತರ ತಬ್ಲಿಘಿ ಜಮಾತ್‌ನಲ್ಲಿ ಭಾಗವಹಿಸಿದ್ದವರೇ ಆಗಿದ್ದಾರೆ. ಜಮಾತ್ ಸಭೆಯಲ್ಲಿ ದೇಶದ ವಿವಿಧ ರಾಜ್ಯಗಳಿಂದ ಸಾವಿರಾರು ಜನರು ಪಾಲ್ಗೊಂಡಿದ್ದರು. ಮಾ. 13ರಿಂದ 15ರವರೆಗೆ ಈ ಸಭೆ ನಡೆದಿತ್ತು. ಇದೀಗ ಸಭೆಯಲ್ಲಿ ಭಾಗವಹಿಸಿದ್ದ ಬಹುತೇಕರಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. ಕರ್ನಾಟಕ ಸೇರಿದಂತೆ ದೇಶದ 17 ರಾಜ್ಯಗಳಿಂದ ಸಾವಿರಾರು ಮಂದಿ ಈ ಧಾರ್ಮಿಕ ಸಭೆಯಲ್ಲಿ ಭಾಗವಹಿಸಿದ್ದರು. ಮಲೇಷ್ಯಾ, ಇಂಡೊನೇಷ್ಯಾ ಸೇರಿದಂತೆ 10 ಕ್ಕೂ ಹೆಚ್ಚು ವಿದೇಶಗಳಿಂದ ನೂರಾರು ಮಂದಿ ಧರ್ಮ ಪ್ರಚಾರಕರು ಈ ಸಭೆಗೆ ಆಗಮಿಸಿದ್ದರು.


from India & World News in Kannada | VK Polls https://ift.tt/2x1AkO3

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...