ಕೊರೊನಾ ಎಫೆಕ್ಟ್: ಏ.30ರವರೆಗೆ ಟಿಕೆಟ್‌ ಬುಕಿಂಗ್ ನಿಷೇಧಿಸಿದ ಏರ್‌ ಇಂಡಿಯಾ!

ನವದೆಹಲಿ: ದೇಶೀಯ ಮತ್ತು ಅಂತಾರಾಷ್ಟ್ರೀಯ ವಿಮಾನಯಾನದ ಎಲ್ಲ ಟಿಕೆಟ್‌ ಬುಕಿಂಗ್‌ಗಳನ್ನು ಏರ್‌ ಇಂಡಿಯಾ ಏಪ್ರಿಲ್ 30ರ ವರೆಗೆ ರದ್ದುಗೊಳಿಸಿದೆ. ಕೊರೋನಾ ಹಿನ್ನೆಲೆಯಲ್ಲಿ ಏ.14ರವರೆಗಿನ ಎಲ್ಲಾ ದೇಶೀಯ ಮತ್ತು ಅಂತರಾಷ್ಟ್ರೀಯ ವಿಮಾನಯಾನ ಸೇವೆಗಳನ್ನು ನಿರ್ಬಂಧಿಸಲಾಗಿತ್ತು. ಇದೀಗ ಕೊರೋನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರಿ ಸ್ವಾಮ್ಯದ ಟಿಕೆಟ್ ಬುಕ್ಕಿಂಗ್ ನಿಷೇಧವನ್ನು ಏ.30ರವರೆಗೂ ವಿಸ್ತರಿಸಿದೆ. ಇದು ಲಾಕ್ ಲೌನ್ ಅವಧಿಯ ಬಳಿಕವೂ ಮತ್ತೆ ಒಂದು ವಾರದ ಅವಧಿಯಾಗಿದೆ. ಹೀಗಾಗಿ ಕೇಂದ್ರ ಸರ್ಕಾರ ಮತ್ತಷ್ಟು ದಿನಗಳ ಕಾಲ ಎಲ್ಲಾ ರೀತಿಯ ವಿಮಾನಯಾನ ಸೇವೆಗಳನ್ನು ನಿಷೇಧಿಸಬಹುದು ಎಂಬ ವದಂತಿಗಳು ಹರಡಲು ಆರಂಭವಾಗಿದೆ. ಈ ಕುರಿತು ಏರ್ ಇಂಡಿಯಾ ವಕ್ತಾರ ಮಾತನಾಡಿ, ಏಪ್ರಿಲ್ 3 ರಿಂದ ಏಪ್ರಿಲ್ 30 ರವರೆಗೂ ಎಲ್ಲಾ ವಿಮಾನ ಬುಕ್ಕಿಂಗ್ ಗಳನ್ನು ನಿಷೇಧಿಸಲಾಗಿದೆ ಎಂದು ಏರ್‌ ಇಂಡಿಯಾದ ಹಿರಿಯ ಅಧಿಕಾರಿಯೊಬ್ಬರು ಟೈಮ್ಸ್‌ ಆಫ್‌ ಇಂಡಿಯಾಗೆ ತಿಳಿಸಿದ್ದಾರೆ. ಮೇ 1ರಿಂದ ವಿಮಾನಯಾನ ಟಿಕೆಟ್‌ಗಳನ್ನು ಬುಕ್‌ ಮಾಡಿಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ. ಭಾರತದ ಇತರೆ ವಾಯುಯಾನ ಸಂಸ್ಥೆಗಳಾದ ಇಂಡಿಗೋ, ಸ್ಪೇಸ್‌ಜೆಟ್, ಮತ್ತು ಗೋ ಏರ್‌ ಸಂಸ್ಥೆಗಳು ಏಪ್ರಿಲ್‌ 15 ರಿಂದಲೇ ಏರ್‌ ಟೆಕೆಟ್‌ಗಳನ್ನು ಬುಕ್‌ ಮಾಡಿಕೊಳ್ಳುತ್ತಿವೆ. ಏಪ್ರಿಲ್‌ 14ರಂದು ರಾತ್ರಿ 11:59 ಗಂಟೆಗೆ ಲಾಕ್‌ಡೌನ್ ಅವಧಿ ಮುಗಿಯಲಿದ್ದು, ಕೊರೊನಾ ಸೋಂಕಿನ ಪರಿಸ್ಥಿತಿಯನ್ನು ನೋಡಿಕೊಂಡು ವಾಯಯಾನ ಆರಂಭಗೊಳ್ಳಲಿದೆ.


from India & World News in Kannada | VK Polls https://ift.tt/3bTm9JR

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...