
ಚೀನಾದ ನಲ್ಲಿ ಮೊದಲು ಪತ್ತೆಯಾಗಿದ್ದ ವಿಶ್ವಾದ್ಯಂತ 50,000ಕ್ಕೂ ಹೆಚ್ಚು ಮಂದಿಯನ್ನು ಬಲಿ ಪಡೆದಿದೆ. ಭಾರತ ಸೇರಿ ಒಟ್ಟು 195ರಾಷ್ಟ್ರಗಳಿಗೂ ಹೆಚ್ಚು ಕಡೆ ವೈರಸ್ ಹರಡಿದೆ. ಭಾರತದಲ್ಲಿ 3100ಕ್ಕೂ ಹೆಚ್ಚು ಮಂದಿಗೆ ಕೊರೊನಾ ಇರುವುದು ದೃಢಪಟ್ಟಿದೆ. ಕರ್ನಾಟಕದಲ್ಲಿ 125ಕ್ಕೂ ಹೆಚ್ಚು ಪ್ರಕರಣ ಬೆಳಕಿಗೆ ಬಂದಿದೆ. -ಕೋವಿಡ್ -19 ಮಹಾಮಾರಿಗೆ ಭಾರತದಲ್ಲಿ ಈವರೆಗೆ 86 ಮಂದಿ ಸಾವನ್ನಪ್ಪಿದ್ದಾರೆ. ಒಟ್ಟು ದೇಶದಲ್ಲಿ 3108 ಪ್ರಕರಣ ಬೆಳಕಿಗೆ ಬಂದಿದ್ದು, 229 ಮಂದಿ ಗುಣಮುಖರಾಗಿದ್ದಾರೆ. ಸದ್ಯ 2793 ಸೋಂಕಿತ ಪ್ರಕರಣಗಳು ಚಾಲ್ತಿಯಲ್ಲಿದೆ. -ವಿಶ್ವದಾದ್ಯಂತ 59 ಸಾವಿರಕ್ಕೂ ಹೆಚ್ಚು ಜನರನ್ನು ಬಲಿ ಪಡೆದಿದೆ. 10 ಲಕ್ಷದ 98 ಸಾವಿರಕ್ಕೂ ಹೆಚ್ಚು ಜನರಲ್ಲಿ ಕೊರೊನಾ ಕೇಸುಗಳು ದಾಖಲಾಗಿದ್ದು, ಇದರಲ್ಲಿ 8 ಲಕ್ಷದ 10 ಸಾವಿರ ಪ್ರಕರಣಗಳು ಪ್ರಸ್ತುತ ಚಾಲ್ತಿಯಲ್ಲಿದೆ.
from India & World News in Kannada | VK Polls https://ift.tt/2wbpKna