ಪತ್ರಕರ್ತ ಹನುಮಂತು ಪತ್ನಿಗೆ ಎಚ್‌ಡಿಕೆ 5 ಲಕ್ಷ ರೂ. ಚೆಕ್ ವಿತರಣೆ

ಕನಕಪುರ: ರಸ್ತೆ ಅಪಘಾತದಲ್ಲಿ ಮಂಗಳವಾರ ಸಾವನ್ನಪ್ಪಿದ ರಾಮನಗರ ಜಿಲ್ಲೆ ವರದಿಗಾರ ಅವರ ಕುಟುಂಬದ ಸದಸ್ಯರನ್ನು ಭೇಟಿ ಮಾಡಿದ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಸಾಂತ್ವನ ಹೇಳಿದರು. ಮೃತ ಪತ್ರಕರ್ತ ಹನುಮಂತು ಅವರ ಪತ್ನಿ ಶಶಿಕಲಾ ಅವರಿಗೆ ಐದು ಲಕ್ಷ ರೂಪಾಯಿಗಳ ಚೆಕ್ ವಿತರಿಸಿದರು. ರಾಮನಗರ ವಿಧಾನಸಭಾ ಕ್ಷೇತ್ರದ ಹಾರೋಹಳ್ಳಿ ಹೋಬಳಿಯ ಹನುಮಂತು ಸ್ವಗ್ರಾಮ ಪಡುವಣಗೆರೆಗೆ ಭೇಟಿ ನೀಡಿ, ಅವರ ಕುಟುಂಬದ ಸದಸ್ಯರು ಹಾಗು ಹನುಮಂತು ಪತ್ನಿಗೆ ಧೈರ್ಯ ತುಂಬಿದರು. ನಿನ್ನೆ (ಮಂಗಳವಾರ) ಪಾದರಾಯನಪುರ ಗಲಭೆಯ ಆರೋಪಿಗಳನ್ನು ರಾಮನಗರದ ಕಾರಾಗೃಹಕ್ಕೆ ಕರೆತಂದಿದ್ದ ಸುದ್ದಿ ಮಾಡಿ ಬರುತ್ತಿದ್ದ ಸಂಧರ್ಭದಲ್ಲಿ ಹಿಂದಿನಿಂದ ಬಂದ ಎಟಿಎಂ ವಾಹನ ಡಿಕ್ಕಿ ಹೊಡೆದ ಪರಿಣಾಮ ಹನುಮಂತ ಸ್ಥಳದಲ್ಲೇ ಮೃತಪಟ್ಟಿದ್ದರು. "ಅಪಘಾತದಿಂದ ದುರ್ಮರಣಕ್ಕೀಡಾದ ರಾಮನಗರ ಜಿಲ್ಲೆಯ ಪಬ್ಲಿಕ್ ಟಿವಿ ವರದಿಗಾರ ಹನುಮಂತು ಅವರ ಅಕಾಲ ನಿಧನಕ್ಕೆ ತೀವ್ರ ಕಂಬನಿ ಮಿಡಿಯುತ್ತೇನೆ. ಅವರ ಕುಟುಂಬ ವರ್ಗದವರಿಗೆ ದುಃಖ ಭರಿಸುವ ಶಕ್ತಿಯನ್ನು ಕರುಣಿಸಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ" ಎಂದು ನಿನ್ನೆ ಮಾಜಿ ಮುಖ್ಯಮಂತ್ರಿ ಎಚ್‌.ಡಿ ಕುಮಾರಸ್ವಾಮಿ ತೀವ್ರ ಸಂತಾಪ ಸೂಚಿಸಿದ್ದರು.


from India & World News in Kannada | VK Polls https://ift.tt/2yAxT5k

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...