ಕೊರೊನಾ ಲಾಕ್‌ಡೌನ್‌, ರಾಜ್ಯದ ಸಾರಿಗೆ ನಿಗಮಗಳಿಗೆ 816 ಕೋಟಿ ರೂ. ನಷ್ಟ; ಸಂಬಳಕ್ಕೂ ತತ್ವಾರ

ಬೆಂಗಳೂರು: ಹರಡುವಿಕೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ ದೇಶಾದ್ಯಂತ ಲಾಕ್‌ಡೌನ್‌ ಘೋಷಿಸಲಾಗಿದೆ. ಇದರಿಂದಾಗಿ ಬಸ್‌ಗಳ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದ್ದು ರಾಜ್ಯದ ನಾಲ್ಕು ಸಾರಿಗೆ ನಿಗಮಗಳಿಗೆ ಬರೋಬ್ಬರಿ 816.23 ಕೋಟಿ ರೂಪಾಯಿ ನಷ್ಟವಾಗಿದೆ ಎಂಬುದಾಗಿ ನಿಗಮಗಳು ಹೇಳಿಕೊಂಡಿವೆ. ಲಾಕ್‌ಡೌನ್‌ ಜಾರಿಯಾದಾಗಿನಿಂದ ಏಪ್ರಿಲ್‌ 20ರವರೆಗಿನ ಅವಧಿಯಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ () ಅತೀ ಹೆಚ್ಚಿನ ನಷ್ಟ ಅನುಭವಿಸಿದ್ದು, ಸಂಸ್ಥೆಗೆ 314.89 ಕೋಟಿ ರೂಪಾಯಿ ನಷ್ಟವಾಗಿದೆ. ಇದೇ ಅವಧಿಯಲ್ಲಿ ವಾಯವ್ಯ ಕರ್ನಾಟಕ ರಸ್ತೆ (ಎನ್‌ಡಬ್ಲ್ಯೂಕೆಆರ್‌ಟಿಸಿ) ಗೆ 172 ಕೋಟಿ ರೂಪಾಯಿ ನಷ್ಟವಾಗಿದೆ ಎಂಬುದಾಗಿ ಮುಖ್ಯ ಸಾರಿಗೆ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಇನ್ನು ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ (ಎನ್‌ಇಕೆಆರ್‌ಟಿಸಿ) ಗೆ 180 ಕೋಟಿ ರೂಪಾಯಿ ನಷ್ಟವಾಗಿದೆ. ರಾಜಧಾನಿ ಬೆಂಗಳೂರಿನಲ್ಲಿ ಸಮೂಹ ಸಾರಿಗೆ ಸೇವೆ ನೀಡುವ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ಗೆ 149.34 ಕೋಟಿ ರೂಪಾಯಿ ನಷ್ಟ ಅನುಭವಿಸಿದೆ.

ಭಾರಿ ನಷ್ಟದಿಂದಾಗಿ ಸಾರಿಗೆ ನಿಗಮಗಳು ನೌಕರರಿಗೆ ವೇತನ ನೀಡಲು ತೊಂದರೆ ಅನುಭವಿಸುತ್ತಿವೆ. ಮಾರ್ಚ್‌ ತಿಂಗಳ ವೇತನವನ್ನು ಹೇಗೋ ಸಂಸ್ಥೆಗಳು ಪಾವತಿಸಿವೆ. ಆದರೆ ತೀವ್ರ ಆರ್ಥಿಕ ಮುಗ್ಗಟ್ಟಿನಿಂದಾಗಿ ಏಪ್ರಿಲ್‌ ತಿಂಗಳ ವೇತನ ಪಾವತಿಗೆ ನೆರವು ನೀಡುವಂತೆ ಸರಕಾರಕ್ಕೆ ಸಂಸ್ಥೆಗಳು ಮನವಿ ಮಾಡಿಕೊಂಡಿವೆ. 'ಸರಕಾರ ನೆರವು ನೀಡಿದರೆ ಸಂಬಳ, ಇಲ್ಲದಿದ್ದರೆ ಇಲ್ಲ' ಎಂಬುದಾಗಿ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ರಾಜೇಂದ್ರ ಚೋಳನ್ ಬಹಿರಂಗವಾಗಿ‌ ಹೇಳಿದ್ದಾರೆ.


from India & World News in Kannada | VK Polls https://ift.tt/2RXUnEx

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...