ವೈದ್ಯರಿಗೆ ಅಗತ್ಯ ರಕ್ಷಣೆಯ ಭರವಸೆ ನೀಡಿದ ಕೇಂದ್ರ ಗೃಹ ಸಚಿವ ಅಮಿತ್ ಶಾ

ನವದೆಹಲಿ: ದೇಶದ ವಿವಿಧ ಭಾಗಗಳಲ್ಲಿ ವೈದ್ಯರು ಮತ್ತು ಆರೋಗ್ಯ ಕಾರ್ಯಕರ್ತರ ಮೇಲೆ ನಡೆಯುತ್ತಿರುವ ಹಲ್ಲೆ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿರುವುದಾಗಿ ಅಮಿತ್ ಶಾ ಹೇಳಿದ್ದಾರೆ. ಈ ಕುರಿತು ಭಾರತೀಯ ವೈದ್ಯಕೀಯ ಸಂಘ(IMA)ದ ಸದಸ್ಯರೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿದೆ ಅಮಿತ್ ಶಾ, ವೈದ್ಯರ ಮೇಲಿನ ಹಲ್ಲೆ ಖಂಡಿಸಿ ನಡೆಸುತ್ತಿರುವ ಸಾಂಕೇತಿಕ ಪ್ರತಿಭಟನೆಯನ್ನು ಕೈಬಿಡುವಂತೆ ಮನವಿ ಮಾಡಿದ್ದಾರೆ. ಕೊರೊನಾ ವೈರಸ್ ವಿರುದ್ಧದ ಹೋರಾಟದಲ್ಲಿ ಅತ್ಯಂತ ಮುಂಚೂಣಿಯಲ್ಲಿರುವ ವೈದ್ಯ ಸಮುದಾಯದ ಕಾರ್ಯವನ್ನು ಸರ್ಕಾರ ಶ್ಲಾಘಿಸುತ್ತದೆ ಎಂದು ಸ್ಪಷ್ಟಪಡಿಸಿದರು. ವೈದ್ಯರ ನಿಸ್ವಾರ್ಥ ಸೇವೆಯನ್ನು ನಾವು ಎಂದೂ ಮರೆಯುವದಿಲ್ಲ ಎಂದಿರುವ ಅಮಿತ್ ಶಾ, ವೈದ್ಯರು ಮತ್ತು ಆರೋಗ್ಯ ಕಾರ್ಯಕರ್ತರ ಸುರಕ್ಷತೆ ಸರ್ಕಾರದ ಜವಾಬ್ದಾರಿ ಎಂದು ಭರವಸೆ ನೀಡಿದ್ದಾರೆ. ವೈದ್ಯರು ಮತ್ತು ಆರೋಗ್ಯ ಕಾರ್ಯಕರ್ತರ ಸುರಕ್ಷತೆಗೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದಿರುವ ಅಮಿತ್ ಶಾ, ಸಾಂಕೇತಿಕ ಪ್ರತಿಭಟನೆಯನ್ನು ಕೈಬಿಡುವಂತೆ ಮನವಿ ಮಾಡಿದರು. ಈ ವೇಳೆ ಕೇಂದ್ರ ಆರೋಗ್ಯ ಸಚಿವ ಡಾ. ಹರ್ಷವರ್ಧನ್ ಕೂಡ ಉಪಸ್ಥಿತರಿದ್ದರು. ದೇಶದ ವಿವಿಧ ಭಾಗಗಳಲ್ಲಿ ವೈದ್ಯರು ಮತ್ತು ಆರೋಗ್ಯ ಕಾರ್ಯಕರ್ತರ ಮೇಲೆ ನಡೆದ ಹಲ್ಲೆಯನ್ನು ಖಂಡಿಸಿ ಇಂದು ಮೇಣದ ಬತ್ತಿ ಬೆಳಗುವ ಮೂಲಕ ಸಾಂಕೇತಿಕ ಪ್ರತಿಭಟನೆ ನಡೆಸುವಂತೆ ಭಾರತೀಯ ವೈದ್ಯಕೀಯ ಸಂಘ ಕರೆ ನೀಡಿತ್ತು.


from India & World News in Kannada | VK Polls https://ift.tt/34UrwWN

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...