ವಲಸೆ ಕಾರ್ಮಿಕರನ್ನು ಕರೆ ತರಲು ಕೇಂದ್ರ ಸಹಾಯ ಕೋರಿದ ಮಯಾವತಿ

ಲಕ್ನೋ (): ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ದೇಶದಲ್ಲಿ ಲಾಕ್‌ಡೌನ್ ಅವಧಿಯನ್ನು ಮೇ 3 ವರೆಗೆ ವಿಸ್ತರಿಸಲಾಗಿದೆ. ಇದರಿಂದಾಗಿ ವಲಸೆ ಕಾರ್ಮಿಕರು ಅತಿ ಹೆಚ್ಚು ತೊಂದರೆಯನ್ನು ಅನುಭವಿಸುವಂತಾಗಿದೆ. ಈ ನಡುವೆ ವಲಸೆ ಕಾರ್ಮಿಕರು ಸುರಕ್ಷಿತವಾಗಿ ರಾಜ್ಯಕ್ಕೆ ಮರಳಲು ಕೇಂದ್ರ ಸರಕಾರ ಸೂಕ್ತ ವ್ಯವಸ್ಥೆ ಮಾಡಿಕೊಡಬೇಕು ಎಂದು ಬಹುಜನ ಸಮಾಜ ಪಕ್ಷದ () ಅಧ್ಯಕ್ಷೆ ಹಾಗೂ ಉತ್ತರ ಪ್ರದೇಶ ಮಾಜಿ ಮುಖ್ಯಮಂತ್ರಿ ಆಗ್ರಹಿಸಿದ್ದಾರೆ. "ಕೊರೊನಾ ವೈರಸ್ ಲಾಕ್‌ಡೌನ್ ಹಿನ್ನೆಲೆಯಲ್ಲಿ ಲಕ್ಷಾಂತರ ವಲಸೆ ಕಾರ್ಮಿಕರು ಮಹಾರಾಷ್ಟ್ರ, ದಿಲ್ಲಿ, ಹರಿಯಾಣ ಸೇರಿದಂತೆ ಇತರೆ ರಾಜ್ಯಗಳಲ್ಲಿ ಸಿಕ್ಕಿಹಾಕಿಕೊಂಡಿದ್ದಾರೆ. ಅವರೆಲ್ಲರೂ ನಿರುದ್ಯೋಗ ಹಾಗೂ ಹಸಿವಿನ ತೊಂದರೆಯನ್ನು ಎದುರಿಸುತ್ತಿದ್ದಾರೆ. ಅವರಿಗೆ ಒಂದು ಹೊತ್ತಿನ ಊಟವು ಸರಿಯಾಗಿ ಸಿಗುತ್ತಿಲ್ಲ. ಅಲ್ಲದೆ ರಾಜ್ಯಕ್ಕೆ ಮರಳಲು ಬಯಸುತ್ತಿದ್ದಾರೆ" ಎಂದು ಮಾಯಾವತಿ ಟ್ವೀಟ್ ಮೂಲಕ ತಿಳಿಸಿದ್ದಾರೆ. ಈ ಬಿಕ್ಕಟ್ಟಿನ ಪರಿಸ್ಥಿತಿಯಲ್ಲಿ ಕೇಂದ್ರ ಸರಕಾರ ಸಹಾನುಭೂತಿಯಿಂದ ಮನವಿಯನ್ನು ಪರಿಗಣಿಸುವಂತೆ ಮಾಯಾವತಿ ಆಗ್ರಹಿಸಿದ್ದಾರೆ. ಲಾಕ್‌ಡೌನ್ ನಿಯಮಗಳನ್ನು ಸರಿಯಾಗಿ ಪಾಲನೆ ಮಾಡಿಕೊಂಡು ಕೋಟಾದಿಂದ ವಿದ್ಯಾರ್ಥಿಗಳನ್ನು ಕಳುಹಿಸಿದಂತೆ ಬಸ್ ಹಾಗೂ ರೈಲುಗಳ ಮೂಲಕ ಮನೆಗಳಿಗೆ ಕಳುಹಿಸಲು ವ್ಯವಸ್ಥೆ ಮಾಡುವಂತೆ ಕೇಂದ್ರ ಸರಕಾರವನ್ನು ಮಾಯಾವತಿ ಕೋರಿದರು. ಕೊರೊನಾ ವೈರಸ್ ಲಾಕ್‌ಡೌನ್ ಹಿನ್ನೆಲೆಯಲ್ಲಿ ವಿವಿಧ ರಾಜ್ಯಗಳಲ್ಲಿ ಕೆಲಸ ಮಾಡುತ್ತಿರುವ ವಲಸೆ ಕಾರ್ಮಿಕರು ಅತಿ ಹೆಚ್ಚಿನ ತೊಂದರೆಯನ್ನು ಎದುರಿಸುವಂತಾಗಿದೆ. ಉತ್ತರ ಭಾರತದಲ್ಲಿ ಲಾಕ್‌ಡೌನ್ ಘೋಷಣೆಯಾದ ಬೆನ್ನಲ್ಲೇ ನೂರಾರು ಕೀ.ಮೀ. ನಡಿಗೆಯ ಮೂಲಕ ತಮ್ಮ ಸ್ವಂತ ಊರುಗಳಿಗೆ ಸಾಗುತ್ತಿರುವ ಸಾಗುವ ದೃಶ್ಯ ಸಾಮಾನ್ಯವಾಗಿತ್ತು. ಕೊರೊನಾ ವೈರಸ್ ನಿಯಂತ್ರಣ ಸಾಧಿಸಲು ವಿಫಲವಾಗಿರುವ ಹಿನ್ನೆಲೆಯಲ್ಲಿ ದೇಶದಲ್ಲಿ ಲಾಕ್‌ಡೌನ್ ಅವಧಿಯನ್ನು ಮೇ 3ರ ವರೆಗೆ ವಿಸ್ತರಿಸಲಾಗಿದೆ. ಇನ್ನೊಂದೆಡೆ ವಲಸೆ ಕಾರ್ಮಿಕರು ಒಂದು ಹೊತ್ತಿನ ಊಟಕ್ಕಾಗಿ ಪರದಾಡುವಂತಾಗಿದೆ.


from India & World News in Kannada | VK Polls https://ift.tt/3boKgA9

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...