ರಾಜ್ಯದಲ್ಲಿ ಪಾಲನೆಯಾಗ್ತಿಲ್ಲ ಕಟ್ಟುನಿಟ್ಟಿನ ಲಾಕ್‌ಡೌನ್ ! ಬಿಎಸ್‌ವೈ ಅಸಮಾಧಾನ

ಬೆಂಗಳೂರು: ಕೊರೊನಾ ನಿಯಂತ್ರಣ ಮಾಡುವ ನಿಟ್ಟಿನಲ್ಲಿ ರಾಜ್ಯದಲ್ಲಿ ಸಂಪೂರ್ಣ ಲಾಕ್‌ಡೌನ್‌ ಜಾರಿಯಲ್ಲಿದ್ದರೂ ಕಟ್ಟುನಿಟ್ಟಾಗಿ ಪಾಲನೆಯಾಗದೇ ಇರುವ ಬಗ್ಗೆ ಮುಖ್ಯಮಂತ್ರಿ ಬಿ.ಎಸ್‌ ಯಡಿಯೂರಪ್ಪ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಸರಣಿ ಟ್ವೀಟ್‌ಗಳ ಮೂಲಕ ಅಸಮಾಧಾನ ವ್ಯಕ್ತಪಡಿಸಿದ ಅವರು, ಜನರು ಲಾಕ್‌ಡೌನ್‌ ಆಶಯವನ್ನು ಪಾಲನೆ ಮಾಡಬೇಕು ಎಂದು ವಿನಂತಿಸಿದ್ದಾರೆ. “ಕಳೆದ ಕೆಲವು ದಿನಗಳಲ್ಲಿ ಕೋವಿಡ್‌ -19 ಪಾಸಿಟಿವ್ ಪ್ರಕರಣಗಳ ಸಂಖ್ಯೆ ತೀವ್ರವಾಗಿ ಏರಿಕೆಯಾಗುತ್ತಿರುವುದನ್ನು ನೋಡುತ್ತಿದ್ದೇವೆ. ಮನೆಯಲ್ಲೇ ಇದ್ದು, ಸುರಕ್ಷಿತವಾಗಿರುವುದು ಹಾಗೂ ಸೋಂಕು ಹರಡುವ ಸರಪಳಿಯನ್ನು ತುಂಡರಿಸುವುದು ಪ್ರಧಾನಮಂತ್ರಿಯವರು ಘೋಷಿಸಿದ ಲಾಕ್ ಡೌನ್ ನ ಆಶಯವಾಗಿತ್ತು. ಆದರೆ ನಾಗರಿಕರು ಲಾಕ್ ಡೌನನ್ನು ಕಟ್ಟುನಿಟ್ಟಾಗಿ ಪಾಲಿಸದಿರುವ ಬಗ್ಗೆ ದೂರುಗಳು ಬರುತ್ತಿವೆ. ಲಾಕ್ ಡೌನ್ ಸಡಿಲಗೊಳಿಸುವ ಕೀಲಿಕೈ ನಿಮ್ಮ ಬಳಿಯೇ ಇದೆ ಎಂಬುದನ್ನು ಮರೆಯದಿರಿ” ಎಂದಿದ್ದಾರೆ. ಕೊರೊನಾ ನಿಯಂತ್ರಣ ಮಾಡುವ ನಿಟ್ಟಿನಲ್ಲಿ ಚೆಂಡು ನಿಮ್ಮ ಅಂಗಳದಲ್ಲಿದೆ. ಲಾಕ್ ಡೌನನ್ನು ಕಟ್ಟುನಿಟ್ಟಾಗಿ ಪಾಲಿಸುವ ಮೂಲಕ ಕೊರೊನಾ ವೈರಸ್ ಹರಡುವಿಕೆ ತಡೆಗಟ್ಟಲು ನಿಮ್ಮಿಂದ ಮಾತ್ರ ಸಾಧ್ಯ ಎಂದಿರುವ ಬಿಎಸ್‌ವೈ, ಅನಗತ್ಯವಾಗಿ ಓಡಾಡಿ, ನಿಮ್ಮ ಹಾಗೂ ಇತರರ ಆರೋಗ್ಯವನ್ನು ಅಪಾಯಕ್ಕೆ ಸಿಲುಕಿಸಬೇಡಿ. ಕೊರೊನಾ ತಡೆಗಟ್ಟಲು ನಾವೆಲ್ಲರೂ ಸಾಮೂಹಿಕವಾಗಿ ನಮ್ಮ ಹೊಣೆಗಾರಿಕೆಯನ್ನು ನಿಭಾಯಿಸೋಣ. ಮನೆಯಲ್ಲೇ ಇರಿ. ಸುರಕ್ಷಿತವಾಗಿರಿ ಎಂದು ವಿನಂತಿಸಿದ್ದಾರೆ. ಕೊರೊನಾ ನಿಯಂತ್ರಣ ಮಾಡುವ ನಿಟ್ಟಿನಲ್ಲಿ ಸಂಪೂರ್ಣ ಲಾಕ್‌ಡೌನ್ ಜಾರಿಯಲ್ಲಿದ್ದು ಆರಂಭದಲ್ಲಿ ಜನರು ಇದನ್ನು ಪಾಲನೆ ಮಾಡುತ್ತಿದ್ದರು. ಆದರೆ ಇದೀಗ ಜನರೂ ಲಾಕ್‌ಡೌನ್‌ ಉಲ್ಲಂಘನೆ ಮಾಡುವ ಪ್ರಕರಣಗಳು ಹೆಚ್ಚಾಗುತ್ತಿವೆ. ಅನಗತ್ಯವಾಗಿ ಮನೆಯಿಂದ ಹೊರಬರುವುದು, ಬೇಕಾಬಿಟ್ಟಿ ಬೈಕ್‌ಗಳಲ್ಲಿ ಯುವಕರು ಸುತ್ತಾಡುವುದು ಮಾಡುತ್ತಿದ್ದಾರೆ. ಇದು ಹೀಗೆ ಮುಂದುವರಿದರೆ ಮುಂದಿನ ದಿನಗಳಲ್ಲಿ ಕೊರೊನಾ ಮತ್ತಷ್ಟು ತೀವ್ರವಾಗಿ ಹರಡುವ ಸಾಧ್ಯತೆ ಇದೆ. ಈ ನಿಟ್ಟಿನಲ್ಲಿ ಜನರು ಲಾಕ್‌ಡೌನ್‌ನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡಬೇಕಾಗಿದೆ.


from India & World News in Kannada | VK Polls https://ift.tt/3e1BKJh

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...