ಹೊಸ ದಿಲ್ಲಿ: ದೇಶದಲ್ಲಿ ಆರ್ಭಟ ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ, ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳ ಜೊತೆಗೆ ನಡೆಸಿದರು. ಪ್ರಧಾನಿ ಜೊತೆಗೆ ಗೃಹ ಸಚಿವ ಅಮಿತ್ ಶಾ ಹಾಗೂ ರಕ್ಷಣಾ ಸಚಿವ ರಾಜ್ನಾಥ್ ಸಿಂಗ್ ಕೂಡಾ ವಿಡಿಯೋ ಕಾನ್ಫರೆನ್ಸ್ನಲ್ಲಿ ಭಾಗಿಯಾಗಿದ್ದರು. ಸಿಎಂಗಳ ಜೊತೆಗಿನ ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಕೊರೊನಾ ವೈರಸ್ ಪತ್ತೆ ಕಾರ್ಯ, ಲಾಕ್ಡೌನ್ ಸ್ಥಿತಿಗತಿ, ಅಗತ್ಯ ವಸ್ತುಗಳ ಪೂರೈಕೆ, ಕಾನೂನು ಸುವ್ಯವಸ್ಥೆ ಸೇರಿದಂತೆ ಹಲವು ವಿಚಾರಗಳ ಬಗ್ಗೆ ಮಾಹಿತಿ ವಿನಿಮಯ ಮಾಡಿಕೊಂಡಿದ್ಧಾರೆ ಎನ್ನಲಾಗಿದೆ. ಕೊರೊನಾ ವೈರಸ್ ಸೋಂಕು ಕೆಲವೇ ದಿನಗಳಲ್ಲಿ ಭಾರೀ ಪ್ರಮಾಣದ ಏರಿಕೆ ಕಂಡಿರುವ ಹಿನ್ನೆಲೆಯಲ್ಲಿ, ಸಿಎಂಗಳ ಜೊತೆಗಿನ ಪ್ರಧಾನಿ ನರೇಂದ್ರ ಮೋದಿ ಅವರ ಪ್ರಾಮುಖ್ಯತೆ ಪಡೆದುಕೊಂಡಿದೆ. ಇದೀಗ ದೇಶಾದ್ಯಂತ ಪತ್ತೆಯಾಗಿರುವ ಕೊರೊನಾ ವೈರಸ್ ಸೋಂಕಿತರ ಸಂಖ್ಯೆ 2 ಸಾವಿರದ ಗಡಿ ಮುಟ್ಟುತ್ತಿದೆ. ಕಳೆದ ನಾಲ್ಕು ದಿನಗಳಲ್ಲಿ ಸೋಂಕಿತರ ಸಂಖ್ಯೆಯಲ್ಲಿ ದಿಢೀರ್ ಏರಿಕೆ ಕಂಡುಬಂದಿದೆ. ತಬ್ಲಿಘಿ ಜಮಾತ್ ಸಭೆಯಲ್ಲಿ ಭಾಗಿಯಾಗಿದ್ದವರು ಕೊರೊನಾ ವೈರಸ್ ಸೋಂಕಿಗೆ ತುತ್ತಾದ ಪ್ರಕರಣ ಬಯಲಾದ ಬೆನ್ನಲ್ಲೇ, ದೇಶಾದ್ಯಂತ ಹೊಸದೊಂದು ಕೊರೊನಾ ವೈರಸ್ ಹಾಟ್ಸ್ಪಾಟ್ ಪತ್ತೆ ಆದಂತಿದೆ. ಹೀಗಾಗಿ, ಇದೊಂದೇ ಮೂಲದಿಂದ ನೂರಾರು ಮಂದಿ ಕೊರೊನಾ ವೈರಸ್ ಸೋಂಕಿಗೆ ತುತ್ತಾಗಿದ್ದಾರೆ. ಹೀಗಾಗಿ, ದಿಲ್ಲಿ ಸೇರಿದಂತೆ ದೇಶಾದ್ಯಂತ ತಬ್ಲಿಘಿ ಕಾರ್ಯಕರ್ತರು ಸಂಚರಿಸಿದ ಪ್ರದೇಶದಲ್ಲಿ ಸರ್ಕಾರ ಕಾರ್ಯಾಚರಣೆ ನಡೆಸುತ್ತಿದೆ.
from India & World News in Kannada | VK Polls https://ift.tt/39Fz1Bv