
ಬೆಂಗಳೂರು: ಕೊರೊನಾ ಸೋಂಕು ಹರಡುವುದನ್ನು ತಡೆಗಟ್ಟಲು ಜನರ ಪಾಲ್ಗೊಳ್ಳುವಿಕೆ ಕೂಡ ಮುಖ್ಯವಾಗಿದೆ. ಈ ನಿಟ್ಟಿನಲ್ಲಿ ಸರಕಾರ ಹಾಗೂ ಸಚಿವರು ಜನ ಜಾಗೃತಿ ಮೂಡಿಸುವಲ್ಲಿ ನಿರಂತರ ಪ್ರಯತ್ನದಲ್ಲಿ ತೊಡಗಿದ್ದಾರೆ. ಆರೋಗ್ಯ ಸಚಿವ ಈಗ ಜನರಿಗೆ ಮತ್ತೊಂದು ಜಾಗೃತಿ ಮೂಡಿಸಿದ್ದಾರೆ. ಉತ್ಪನ್ನಗಳನ್ನು ಸೇವಿಸುವುದರಿಂದ COVID-19 ಸೋಂಕು ತಗುಲುವ ಅವಕಾಶಗಳು ಹೆಚ್ಚಾಗುತ್ತವೆ. ತಂಬಾಕು ಸೇವನೆಯು ಶ್ವಾಸಕೋಶವನ್ನು ಹಾನಿಗೊಳಿಸುವುದಲ್ಲದೆ ರೋಗ ನಿರೋಧಕ ಶಕ್ತಿ ಕ್ಷೀಣಿಸುತ್ತದೆ ಎಂದು ಟ್ವೀಟ್ ಮೂಲಕ ಸಚಿವರು ತಿಳಿಸಿದ್ದಾರೆ. ಧೂಮಪಾನದಿಂದ ದೂರವಿರಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ ಇದು #Covid19 ವೈರಸ್ ಹರಡಲು ಗುಣಕಾರಿ ಆಗಲಿದೆ ಎಂದು ಶ್ರೀರಾಮುಲು ಟ್ವೀಟ್ ಮೂಲಕ ಮನವಿ ಮಾಡಿದ್ದಾರೆ. ಕೊರೊನಾ ವೈರಸ್ ಸೋಂಕು ಹರಡುವುದುನ್ನು ತಡೆಗಟ್ಟುವ ನಿಟ್ಟಿನಲ್ಲಿ ಆರೋಗ್ಯ ಸಚಿವ ಬಿ ಶ್ರೀರಾಮುಲು ಜನಜಾಗೃತಿ ಮೂಡಿಸುವಲ್ಲಿ ನಿರತರಾಗಿದ್ದಾರೆ.
from India & World News in Kannada | VK Polls https://ift.tt/2V0CrcX