ಕೊರೊನಾ ಲಾಕ್‌ಡೌನ್: ರೈತರ ಸ್ಥಿತಿಗತಿ ಅವಲೋಕನಕ್ಕೆ ಬಿ.ಸಿ.ಪಾಟೀಲ್ ಜಿಲ್ಲಾ ಪ್ರವಾಸ

ಬೆಂಗಳೂರು: ಕೋವಿಡ್-19 ಲಾಕ್‌ಡೌನ್ ನಿಂದ ರೈತರಿಗೆ ಆಗುತ್ತಿರುವ ಸಮಸ್ಯೆ ಪರಿಶೀಲನೆ ನಡೆಸಲು ಕೃಷಿ ಸಚಿವ ಬಿ.ಸಿ ಪಾಟೀಲ್‌ ಆರು ದಿನಗಳ ಕಾಲ ಜಿಲ್ಲಾವಾರು ಪ್ರವಾಸ ಕೈಗೊಳ್ಳಲಿದ್ದಾರೆ. ರೈತರಿಗೆ ಸಮಸ್ಯೆಯಾಗದಂತಹ ನಿಟ್ಟಿನಲ್ಲಿ ಕೃಷಿ ಇಲಾಖೆ ಕೆಲವೊಂದು ಕ್ರಮಗಳನ್ನು ಕೈಗೊಂಡಿದೆ. ಈ ಬಗ್ಗೆ ಜಿಲ್ಲೆಗಳಲ್ಲಿ ಯಾವ ರೀತಿಯ ಹೆಜ್ಜೆ ಇಡಲಾಗಿದೆ. ರೈತರ ಸ್ಥಿತಿಗತಿಗಳೇನು ಎಂಬುದನ್ನು ಅವಲೋಕಿಸಲು ಕೃಷಿ ಸಚಿವ ಬಿ.ಸಿ.ಪಾಟೀಲ್ ಸ್ವತಃ ಜಿಲ್ಲೆಗಳಲ್ಲಿ ಪ್ರವಾಸ ಕೈಗೊಂಡಿದ್ದಾರೆ. ಏಪ್ರಿಲ್ .6 ರಿಂದ 11 ರವರೆಗೆ ಜಿಲ್ಲಾ ಪ್ರವಾಸ ಹಮ್ಮಿಕೊಂಡಿದ್ದು, ಆಯಾ ಜಿಲ್ಲಾ ಕಚೇರಿಗಳಲ್ಲಿ ಜಿಲ್ಲಾ‌ಮಟ್ಟದ ಸಭೆಗಳು ನಡೆಯಲಿವೆ. ಸಚಿವರು ಏ.6 ರ ಸೋಮವಾರದಂದು ಧಾರವಾಡ, ಬೆಳಗಾವಿ, ಬಾಗಲಕೋಟೆ 7ರಂದು ಬಿಜಾಪುರ, ಕಲಬುರಗಿ,ಬೀದರ್ ಪ್ರವಾಸ ನಡೆಸಲಿದ್ದಾರೆ. ಏಪ್ರಿಲ್ 8ರಂದು ಯಾದಗಿರಿ,ರಾಯಚೂರು,ಬಳ್ಳಾರಿ,ಕೊಪ್ಪಳ ಹಾಗೂ 9ರಂದು ಗದಗ್, ಹಾವೇರಿ ಏ.10ರಂದು ಶಿವಮೊಗ್ಗ, ಚಿಕ್ಕಮಗಳೂರು,ಹಾಸನ 11 ರಂದು ಮೈಸೂರು, ಚಾಮರಾಜನಗರ, ಮಂಡ್ಯ,ರಾಮನಗರ ಈ ಜಿಲ್ಲೆಗಳಿಗೆ ಪ್ರವಾಸ ಕೈಗೊಂಡಿದ್ದಾರೆ. ಜಿಲ್ಲೆಯ ಜಿಲ್ಲಾಧಿಕಾರಿಗಳ‌ ಕಚೇರಿಯಲ್ಲಿ ಜಿಲ್ಲಾಧಿಕಾರಿಗಳೊಂದಿಗೆ ಹಾಗೂ ಪೊಲೀಸ್, ಕೃಷಿ,‌ ತೋಟಗಾರಿಕಾ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮತ್ತು ಎಲ್ಲಾ‌ಇಲಾಖೆಗಳ ಜೊತೆ ಸಭೆ ನಡೆಸಲಿದ್ದಾರೆ.ಸಭೆಯಲ್ಲಿ ರೈತರು‌,‌ಕೃಷಿ‌ ಉತ್ಪನ್ನಗಳ ಸರಕು ಸಾಗಾಣಿಕೆ,ಬೀಜ‌ ಗೊಬ್ಬರಗಳ ಸರಬರಾಜು ಹಾಗೂ ಉಳಿದಂತಹ ಕೃಷಿ ಚಟುವಟಿಕೆಗಳ ಕುರಿತು ಚರ್ಚೆ ನಡೆಸಲಿದ್ದಾರೆ.


from India & World News in Kannada | VK Polls https://ift.tt/2UJIZ0x

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...