ಕರ್ನಾಟಕ ಲಾಕ್‌ಡೌನ್: ರೈತರಿಗೆ ವಿಶೇಷ ಪ್ಯಾಕೇಜ್ ಒತ್ತಾಯಿಸಿ ಬಿಎಸ್‌ವೈಗೆ ದೇವೇಗೌಡರ ಪತ್ರ

ಬೆಂಗಳೂರು: ಕೊರೊನಾ ಲಾಕ್‌ಡೌನ್‌ನಿಂದಾಗಿ ರೈತರು ಸಂಕಷ್ಟದಲ್ಲಿದ್ದು ಅವರಿಗೆ ವಿಶೇಷ ಪ್ಯಾಕೇಜ್ ನೀಡುವಂತೆ ಒತ್ತಾಯಿಸಿ ಮಾಜಿ ಪ್ರಧಾನಿ ಎಚ್‌. ಡಿ. ದೇವೇಗೌಡರು ಸಿಎಂ ಅವರಿಗೆ ಪತ್ರವನ್ನು ಬರೆದಿದ್ದಾರೆ. ಲಾಕ್‌ಡೌನ್‌ನಿಂದ ರೈತಾಪಿ ಸಮುದಾಯ ಸಂಷಕ್ಟಕ್ಕೆ ಸಿಲುಕಿದೆ ಹಣ್ಣು, ತರಕಾರಿ, ಹೂವು ಬೆಳೆದವರು ಕಣ್ಣೀರಿಡುವಂತಾಗಿದೆ. ಇತ್ತ ಸ್ಥಳೀಯ ಮಾರುಕಟ್ಟೆಯೂ ಇಲ್ಲ, ಅತ್ತ ಬೇರೆ ರಾಜ್ಯ ಹಾಗೂ ದೇಶಗಳಿಗೆ ರಫ್ತು ಸಾಧ್ಯವಾಗುತ್ತಿಲ್ಲ. ಹಳೆ ಮೈಸೂರು, ಹೈದರಾಬಾದ್ ಕರ್ನಾಟಕ, ಮುಂಬೈ ಕರ್ನಾಟಕ ಭಾಗದಲ್ಲಿ ಲಕ್ಷಾಂತರ ಎಕರೆ ಪ್ರದೇಶದಲ್ಲಿ ಬೆಳೆದಿದ್ದ ಹಣ್ಣು, ತರಕಾರಿ ಹೂವು ಬೇಡಿಕೆ ಇಲ್ಲದೆ ಲಕ್ಷಾಂತರ ರೂಪಾಯಿ ವೆಚ್ಚ ಮಾಡಿ ಬೆಳೆದ ರೈತರು ಸಾಲಗಾರರಾಗಿದ್ದಾರೆ. ಸಾವಿರಾರು ಹೆಕ್ಟೇರ್‌ ಪ್ರದೇಶದಲ್ಲಿ ಕಲ್ಲಂಗಡಿ, ಕರ್ಬೂಜ, ಬಾಳೆಹಣ್ಣು, ದ್ರಾಕ್ಷಿ, ದಾಳಿಂಬೆ, ಪಪ್ಪಾಯ, ಸೀಬೆ ಬೆಳೆದವವರು ಕಠಾವು ಮಾಡಿ ಬೇಡಿಕೆ ಇಲ್ಲದೆ ಲಕ್ಷಾಂತರ ಟನ್ ಹೊಲ ತೋಟಗಳಲ್ಲೇ ಬಿಟ್ಟು ಕೊಳೆಯುವಂತಾಗಿದೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ. ಕೆಲವೆಡೆ ಅಲ್ಪ ಸ್ವಲ್ಪ ಅನಿವಾರ್ಯವಾಗಿ ಅತ್ಯಂತ ಕಡಿಮೆ ಬೆಲೆಗೆ ಮಾರಾಟ ಮಾಡಿ ಬೆಳೆ ಬೆಳೆಯಲು ಮಾಡಿದ ವೆಚ್ಚವೂ ಸಿಗುತ್ತಿಲ್ಲ. ಈ ಕುರಿತಾಗಿ ಮಾಧ್ಯಮಗಳಲ್ಲಿ ವರದಿಗಳು ಬಂದಿವೆ. ರೈತರು ಅನುಭವಿಸುತ್ತಿರುವ ಸಂಕಷ್ಟಗಳನ್ನು ತಿಳಿಸಲಾಗಿದೆ. ಈ ನಿಟ್ಟಿನಲ್ಲಿ ಲಾಕ್‌ಡೌನ್ ಅವಧಿಯಲ್ಲಿ ಸಂಕಷ್ಟಕ್ಕೊಳಗಾಗಿರುವ ರೈತರಿಗೆ ವಿಶೇಷ ಪ್ಯಾಕೇಜ್ ಘೋಷಿಸಬೇಕು ಎಂದು ಮುಖ್ಯಮಂತ್ರಿ ಬಿಎಸ್‌ವೈ ಅವರನ್ನು ದೇವೇಗೌಡರು ಒತ್ತಾಯಿಸಿದ್ದಾರೆ.


from India & World News in Kannada | VK Polls https://ift.tt/2VFSG0F

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...