ರಾಮನಗರ ಜೈಲಲ್ಲಿ ಪಾದರಾಯನಪುರದ ಪುಂಡರು, ರಾಜಕೀಯ ಚರ್ಚೆಗೆ ಗ್ರಾಸವಾಗಿದೆ ಸರ್ಕಾರದ ನಡೆ

ಬೆಂಗಳೂರು: ವೈದ್ಯಕೀಯ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ ಗಲಭೆ ಪ್ರಕರಣದ ಆರೋಪಿಗಳನ್ನು ರಾಮನಗರ ಜಿಲ್ಲಾ ಕಾರಾಗೃಹಕ್ಕೆ ಸ್ಥಳಾಂತರ ಮಾಡಿರುವ ಸರ್ಕಾರದ ನಡೆ ರಾಜಕೀಯ ಆರೋಪ ಪ್ರತ್ಯಾರೋಪಕ್ಕೆ ಗ್ರಾಸವಾಗಿದೆ. ರಾಮನಗರ ಕಾರಾಗೃಹದಲ್ಲಿ ಇರಿಸಲಾಗಿದ್ದ ಪಾದರಾಯನಪುರದ ಗಲಭೆಕೋರರ ಪೈಕಿ ಐವರಲ್ಲಿ ಕೊರೋನಾ ವೈರಸ್ ತಗುಲಿರುವ ವರದಿ ಬಂದಿದೆ. ರಾಮನಗರ ಜೈಲಿನಲ್ಲಿ ಇರಿಸಲಾಗಿರುವ ಕೈದಿಗಳನ್ನು ಸಕಲ ಮುನ್ನೆಚ್ಚರಿಕೆ ಕ್ರಮಗಳೊಂದಿಗೆ ತಕ್ಷಣವೇ ಸ್ಥಳಾಂತರಿಸದಿದ್ದರೆ ಉಗ್ರ ಪ್ರತಿಭಟನೆ ಮಾಡುತ್ತೇನೆ ಎಂದು ಮಾಜಿ ಸಿಎಂ ಎಚ್ಚರಿಕೆ ನೀಡಿದ್ದರು. ಇದಕ್ಕೆ ಪ್ರತಿಕ್ರಿಯೆ ನೀಡಿರುವ ಡಿಸಿಎಂ ಡಾ. ಅಶ್ವತ್ಥನಾರಾಯಣ ಇದರಲ್ಲಿ ರಾಜಕೀಯ ಮಾಡುವುದು ಸರಿಯಲ್ಲ ಎಂದಿದ್ದಾರೆ. ಬೆಂಗಳೂರಿನಲ್ಲಿ ಈ ಕುರಿತಾಗಿ ಮಾತನಾಡಿದ ಅವರು, ಬಂಧಿತ ಆರೋಪಿಗಳನ್ನು ಪರಪ್ಪನ ಅಗ್ರಹಾರದಲ್ಲಿ ಇಡಲು ಸಾಧ್ಯವಿಲ್ಲ. ಅಲ್ಲಿ ಹೆಚ್ಚಿನ ಸಂಖ್ಯೆಯ ಕೈದಿಗಳು ಇರುವುದರಿಂದ ಅಪಾಯಕಾರಿಯಾಗಿದೆ. ಈ ನಿಟ್ಟಿನಲ್ಲಿ ರಾಮನಗರ ಜೈಲಿನಲ್ಲಿ ಆರೋಪಿಗಳನ್ನು ಇಡಲಾಗಿದೆ. ರಾಮನಗರ ಜಿಲ್ಲಾ ಕಾರಾಗೃಹ ಚಿಕ್ಕದು ಎಂಬ ಕಾರಣಕ್ಕಾಗಿ ಇಡಲಾಗಿದೆಯೇ ಹೊರತಾಗಿ ಬೇರೆ ಯಾವುದೇ ಉದ್ದೇಶವಿಲ್ಲ. ಈ ಸಂದರ್ಭದಲ್ಲಿ ಕೈಗೊಳ್ಳಬೇಕಾಗಿರುವ ಎಲ್ಲಾ ಮುನ್ನೆಚ್ಚರಿಕೆಗಳನ್ನು ವಹಿಸಲಾಗಿದೆ. ಆರೋಪಿಗಳ ಸ್ಕ್ರೀನಿಂಗ್ ಮಾಡಿದಾಗ ಅವರಲ್ಲಿ ಐದು ಮಂದಿಗೆ ಪಾಸಿಟಿವ್ ಇರುವುದು ದೃಢಪಟ್ಟಿದೆ ಎಂದರು. ಈ ನಿಟ್ಟಿನಲ್ಲಿ ಐವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಉಳಿದವರನ್ನು ಹಜ್ ಭವನಕ್ಕೆ ವರ್ಗಾವಣೆ ಮಾಡಲಾಗುತ್ತದೆ. ಅಲ್ಲದೆ ಜೈಲಿನಲ್ಲಿದ್ದ ಇತರ 18 ಕೈದಿಗಳು ಹಾಗೂ ಜೈಲು ಸಿಬ್ಬಂದಿಯನ್ನು ಕ್ವಾರಂಟೈನ್‌ ಮಾಡಲಾಗುತ್ತದೆ ಎಂದರು. ಕೈದಿಗಳನ್ನು ರಾಮನಗರ ಜಿಲ್ಲಾ ಕಾರಾಗೃಹದಲ್ಲಿ ಇಟ್ಟಿರುವ ಹಿಂದೆ ಯಾವುದೇ ದುರುದ್ದೇಶವಿಲ್ಲ. ಆದರೆ ವಿರೋಧ ಪಕ್ಷಗಳು ಮೊಸರಲ್ಲಿ ಕಲ್ಲು ಹುಡುಕುವ ಕೆಲಸ ಮಾಡುತ್ತಿರುವುದು ಸರಿಯಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.


from India & World News in Kannada | VK Polls https://ift.tt/2VxK3oB

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...