ಲಾಕ್‌ಡೌನ್ ಸಡಿಲ: ರಸ್ತೆಗಿಳಿಯುತ್ತಿವೆ ವಾಹನಗಳು, ಪೊಲೀಸರಿಗೆ ಶುರುವಾಯ್ತು ತಲೆನೋವು

ಬೆಂಗಳೂರು: ಕೊರೊನಾ ಅಟ್ಟಹಾಸದ ನಡುವೆಯೂ ರಾಜ್ಯದಲ್ಲಿ ಸಡಿಲಗೊಳಿಸಿ ಸರ್ಕಾರ ಬುಧವಾರ ಆದೇಶವನ್ನು ಹೊರಡಿಸಿದ್ದು ಕೆಲವೊಂದು ರಿಯಾಯಿತಿಗಳನ್ನು ನೀಡಿದೆ. ಆದರೆ ಇದರ ಬೆನ್ನಲ್ಲೇ ಬೆಂಗಳೂರು ನಗರದ ರಸ್ತೆಗಳಲ್ಲಿ ವಾಹನ ಸಂಚಾರ ಹೆಚ್ಚಾಗುತ್ತಿದೆ. ಬ್ಯಾಂಕಿಂಗ್ ಚಟುವಟಿಕೆಗಳು, ಕೊರಿಯರ್ ಸೇವೆಗಳು, ಮೆಟ್ರೋ ಕಾಮಗಾರಿ, ಗ್ರಾಮೀಣ ಪ್ರದೇಶಗಳಲ್ಲಿ ರಸ್ತೆ ನಿರ್ಮಾಣ ಕಾಮಗಾರಿ, ಕೃಷಿ ಸಂಬಂಧಿತ ಮಾರಾಟ ಮಳಿಗೆಗಳು ಸೇರಿದಂತೆ ಅಗತ್ಯ ವಾಣಿಜ್ಯ ಕ್ಷೇತ್ರಗಳಲ್ಲಿ ಲಾಕ್‌ಡೌನ್‌ ನಿರ್ಬಂಧವನ್ನು ಸಡಿಲಿಸಿದೆ. ಇದರ ಬೆನ್ನಲ್ಲೇ ಬೆಂಗಳೂರು ನಗರದ ಸೇರಿದಂತೆ ಹಲವು ಕಡೆಗಳಲ್ಲಿ ವಾಹನ ಸಂಚಾರ ಹೆಚ್ಚಾಗುತ್ತಿದೆ. ಕಚೇರಿಗಳಿಗೆ, ಹಾಗೂ ಅಂಗಡಿಗಳಿಗೆ ತೆರಳಲು ಜನರು ವಾಹನಗಳ ಮೂಲಕ ಹೊರಬರುತ್ತಿದ್ದಾರೆ. ಬೆಂಗಳೂರಿನ ಕೆಲವಡೆ ರಸ್ತೆಗಳಲ್ಲಿ ವಾಹನ ಸಂಚಾರ ಹೆಚ್ಚಾಗುತ್ತಿದೆ. ಅನಗತ್ಯವಾಗಿ ಯಾರು ರಸ್ತೆಗಿಳಿಯಬಾರದು ಎಂದು ಸರ್ಕಾರ ಸೂಚನೆ ನೀಡಿದರೂ ಜನರು ಇದನ್ನು ಪಾಲನೆ ಮಾಡುತ್ತಿಲ್ಲ. ಪರಿಣಾಮ ಪೊಲೀಸರು ಹೆಚ್ಚಿನ ತಪಾಸಣೆಯನ್ನು ಕೈಗೊಂಡಿದ್ದಾರೆ. ನಗರದಲ್ಲಿ ಪ್ರತಿಯೊಂದು ವಾಹನಗಳನ್ನು ತಪಾಸಣೆ ಮಾಡಲಾಗುತ್ತಿದೆ. ಅನಗತ್ಯವಾಗಿ ತಿರುಗಾಡುವ ವಾಹನಗಳನ್ನು ಸೀಝ್ ಮಾಡಲಾಗುತ್ತಿದೆ. ಲಾಕ್‌ಡೌನ್ ಸಡಿಲಿಕೆಯಿಂದ ಜನರ ಓಡಾಟ ಹೆಚ್ಚಾಗುತ್ತಿದ್ದು ಅಗತ್ಯ ಮುನ್ನೆಚ್ಚರಿಕೆಗಳನ್ನು ಕೈಗೊಳ್ಳಲು ಸರ್ಕಾರ ಸೂಚನೆ ನೀಡಿದೆ. ಯಾವುದೇ ಕಾರಣಕ್ಕೂ ಲಾಕ್‌ಡೌನ್ ನಿಯಮಾವಳಿಗಳನ್ನು ಉಲ್ಲಂಘನೆ ಮಾಡದಂತೆ ಸೂಚನೆ ನೀಡಿದೆ. ಅಲ್ಲದೆ ಕೆಲಸದ ಸ್ಥಳಗಳಲ್ಲೂ ಸಾಮಾಜಿಕ ಅಂತರವನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡುವಂತೆ ಸೂಚನೆ ನೀಡಿದೆ. ಲಾಕ್‌ಡೌನ್ ಉಲ್ಲಂಘನೆ ಮಾಡಿದರೆ ಸೂಕ್ತ ಕಾನೂನು ಕ್ರಮಗಳನ್ನು ಕೈಗೊಳ್ಳುವ ಕುರಿತಾಗಿಯೂ ಎಚ್ಚರಿಕೆ ನೀಡಿದೆ.


from India & World News in Kannada | VK Polls https://ift.tt/2VNIYIk

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...