ದೇವರ ಮೇಲೆ ಹಲ್ಲೆ ನಡೆದರೆ ನೋಡ್ಕೊಂಡು ಸುಮ್ಮನಿರಲು ಆಗಲ್ಲ: ಶ್ರೀರಾಮುಲು ಖಡಕ್‌ ವಾರ್ನಿಂಗ್‌

ಬೆಂಗಳೂರು: ನರ್ಸ್, ಆಶಾ ಕಾರ್ಯಕರ್ತೆಯರ ಮೇಲೆ ನಗರದ ಸಾಧಿಕ್‌ ಪಾಳ್ಯದಲ್ಲಿ ಹಲ್ಲೆಗೆ ಯತ್ನಿಸಿರುವ ಘಟನೆಗೆ ಆರೋಗ್ಯ ಸಚಿವ ಆಕ್ರೋಶ ವ್ಯಕ್ತಪಡಿಸಿದ್ದು, ಹಲ್ಲೆಗೆ ಯತ್ನಿಸಿದವರ ಮೇಲೆ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ. ಇಂತಹ ಕಷ್ಟದ ಸಮಯದಲ್ಲಿಯೂ ಅವರು ಹಗಲಿರುಳು ನಮಗಾಗಿ ದುಡಿಯುತ್ತಿದ್ದಾರೆ. ಅವರ ಮೇಲೆ ಹಲ್ಲೆ ನಡೆದರೆ ನೋಡಿಕೊಂಡು ಸುಮ್ಮನೆ ಕೂರಲಾಗುವುದಿಲ್ಲ ಎಂದು ಎಚ್ಚರಿಕೆ ನೀಡಿದ್ದಾರೆ. ಈ ಬಗ್ಗೆ ಟ್ವೀಟ್‌ ಮಾಡಿರುವ ಅವರು, ಇಲ್ಲಿ ಜಾತಿ, ಮತ, ಧರ್ಮ, ನಿಮ್ಮ ವೈಯಕ್ತಿಕ ಹಿತಾಸಕ್ತಿ ಮುಖ್ಯವಲ್ಲ. ಕೋಟ್ಯಂತರ ಕನ್ನಡಿಗರು, ಭಾರತೀಯರ ಆರೋಗ್ಯ ಮುಖ್ಯವಾಗಿದೆ. ಬೆಂಗಳೂರಿನ ಸಾಧಿಕ್ ಪಾಳ್ಯದಲ್ಲಿ ಕೆಲವು ಕಿಡಿಗೇಡಿಗಳು ಸೇರಿ ನರ್ಸ್ ಮೇಲೆ ಹಲ್ಲೆ ಮಾಡಿರುವುದು ಅತ್ಯಂತ ಹೇಯ ಕೃತ್ಯ. ಅವರು ಯಾರೇ ಆಗಲಿ, ಅವರ ಮೇಲೆ ನಿರ್ದಾಕ್ಷಿಣ್ಯವಾಗಿ ಕಾನೂನುರೀತ್ಯ ಕ್ರಮ ಕೈಗೊಳ್ಳಲಿದ್ದೇವೆ ಎಂದು ತಿಳಿಸಿದ್ದಾರೆ. ಇಂತಹ ಕಷ್ಟದ ಸಮಯದಲ್ಲೂ ಮನೆ ಬಾಗಿಲಿಗೆ ಬಂದು ಕೋವಿಡ್‌-19 ಬಗ್ಗೆ ಜಾಗೃತಿ ಮೂಡಿಸುತ್ತಿದ್ದಾರೆ. ವೈದ್ಯರು, ನರ್ಸ್‌ಗಳು, ಆಶಾ ಕಾರ್ಯಕರ್ತೆಯರು ನಮಗಾಗಿ ಈ ಸಂಕಷ್ಟದ ಸನ್ನಿವೇಶದಲ್ಲಿ ಹಗಲಿರುಳು ದುಡಿಯುತ್ತಿದ್ದಾರೆ. ಅವರು ದೇವರ ಸಮಾನ. ಅವರನ್ನು ಗೌರವದಿಂದ ನೋಡಿ ಎಂದು ಹೇಳಿರುವ ಸಚಿವರು, ಅವರ ಮೇಲೆ ಹಲ್ಲೆ ನಡೆದರೆ ನೋಡಿಕೊಂಡು ಸುಮ್ಮನೆ ಕೂರಲಾಗುವುದಿಲ್ಲ. ಎಚ್ಚರವಿರಲಿ ಎಂದು ಕಡಕ್‌ ವಾರ್ನಿಂಗ್‌ನ್ನು ನೀಡಿದ್ದಾರೆ. ಇನ್ನು, ಹಲ್ಲೆಗೊಳಗಾದ ಆಶಾ ಕಾರ್ಯಕರ್ತೆ ಹೆಗಡೆ ನಗರದ ಕೃಷ್ಣವೇಣಿ ಅವರನ್ನು ಉಪ ಮುಖ್ಯಮಂತ್ರಿ ಡಾ.ಸಿ.ಎನ್‌.ಅಶ್ವತ್ಥನಾರಾಯಣ ಅವರು ಭೇಟಿ ಮಾಡಿ ಸಾಂತ್ವಾನ ಹೇಳಿದರು. ಕಳೆದ 15 ದಿನಗಳಿಂದ ನರ್ಸ್, ಆಶಾ ಕಾರ್ಯಕರ್ತೆಯರು ನೆಗಡಿ, ಕೆಮ್ಮು, ಜ್ವರದ ಕುರಿತು ಜನರಿಂದ ಮಾಹಿತಿ ಸಂಗ್ರಹಿಸುತ್ತಿದ್ದರು. ಬುಧವಾರಸಾಧಿಕ್ ಲೇಔಟ್‌ಗೆ ತೆರಳಿದಾಗ ಆಶಾ ಕಾರ್ಯಕರ್ತೆಯರ ಮೇಲೆ ದುಷ್ಕರ್ಮಿಗಳು ಹಲ್ಲೆಗೆ ಯತ್ನಿಸಿದ್ದು, ಅವರ ಬಳಿಯಿದ್ದ ವರದಿಯನ್ನು ದುಷ್ಕರ್ಮಿಗಳು ಹರಿದು ಹಾಕಿದ್ದಾರೆ ಎನ್ನಲಾಗಿದೆ.


from India & World News in Kannada | VK Polls https://ift.tt/2Uy8eD4

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...