ಕೊರೊನಾ ಎಫೆಕ್ಟ್‌:ಅಪಾರ್ಟ್ಮೆಂಟ್‌ಗಳಿಗೆ ಹಣ್ಣು, ತರಕಾರಿ ಸರಬರಾಜು ಮಾಡಲು ಪ್ಲಾನ್

ಬೆಂಗಳೂರು: ಕೊರೊನಾ ನಿಯಂತ್ರಣ ಮಾಡುವ ನಿಟ್ಟಿನಲ್ಲಿ ರಾಜ್ಯಾದ್ಯಂತ ಸಂಪೂರ್ಣ ಲಾಕ್‌ಡೌನ್‌ ಜಾರಿಯಲ್ಲಿದ್ದು ಜನರು ಹಣ್ಣು-ತರಕಾರಿಗಳ ಖರೀದಿಗೆ ತೊಂದರೆ ಉಂಟಾಗುತ್ತಿದೆ. ಸಾಮಾಜಿಕ ಅಂತರ ಕಾಯ್ದುಕೊಳ್ಳುವ ನಿಟ್ಟಿನಲ್ಲಿ ಜನರು ಮನೆಯಿಂದ ಹೊರಬಾರದಂತೆ ಪೊಲೀಸರು ಸೂಚನೆ ನೀಡಿದ್ದಾರೆ. ಇಂತಹ ಸಂದರ್ಭದಲ್ಲಿ ಜನರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಹಣ್ಣು-ತರಕಾರಿಗಳನ್ನು ಅಪಾರ್ಟ್ಮೆಂಟ್‌ಗಳಿಗೆ ಸರಬರಾಜು ಮಾಡಲು ಸರ್ಕಾರ ಚಿಂತನೆ ನಡೆಸುತ್ತಿದೆ. ಬೆಂಗಳೂರಿನಲ್ಲಿ ಹಾಪ್ ಕಾಮ್ಸ್ ವತಿಯಿಂದ ಹಣ್ಣು, ತರಕಾರಿಯನ್ನು ಅಪಾರ್ಟ್ಮೆಂಟ್ ಗಳಿಗೆ ಸರಬರಾಜು ಮಾಡುವ ನಿಟ್ಟಿನಲ್ಲಿ ಏನೆಲ್ಲಾ ಕ್ರಮಗಳನ್ನು ಕೈಗೊಳ್ಳಬಹುದು ಎಂಬ ನಿಟ್ಟಿನಲ್ಲಿ ಸಭೆ ನಡೆಸಲಾಯಿತು. ಬಿಬಿಎಂಪಿಯಲ್ಲಿ ನಡೆದ ಸಭೆಯಲ್ಲಿ ಸಚಿವರಾದ ಡಾ. ನಾರಾಯಣಗೌಡ, ಎಸ್ ಟಿ ಸೋಮಶೇಖರ್, ಬಿ ಸಿಪಾಟೀಲ್, ಮೇಯರ್ ಗೌತಮ್ ಹಾಗೂ ಹಿರಿಯ ಅಧಿಕಾರಿಗಳು ಪಾಲ್ಗೊಂಡಿದ್ದರು. ಅಪಾರ್ಟ್ಮೆಂಟ್ ಅಸೋಸಿಯೇಷನ್ ಜೊತೆ ಮಾತುಕತೆ ನಡೆಸಿ ಹಣ್ಣು ತರಕಾರಿ ಸರಬರಾಜು ಆರಂಭಿಸಲು ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ. ಅಲ್ಲದೆ ನಂದಿನಿ ಬೂತ್ ಗಳಲ್ಲೂ ಹಣ್ಣು ತರಕಾರಿ ಮಾರಾಟಕ್ಕೆ ಅವಕಾಶ ಕಲ್ಪಿಸುವ ಬಗ್ಗೆ ಚರ್ಚಿಸಲಾಗಿದೆ. ಆದ್ರೆ ಮಾರಾಟದ ವೇಳೆ ಹಣ್ಣುಗಳನ್ನು ಕತ್ತರಿಸಿ ಮಾರಾಟ ಮಾಡಲು ಅವಕಾಶ ಇಲ್ಲ. 198 ಬಿಬಿಎಂಪಿ ವಾರ್ಡ್ ಗಳಲ್ಲಿ ಎಲ್ಲೆಲ್ಲಿ ಹಣ್ಣು, ತರಕಾರಿ ಮಾರಾಟ ಮಾಡಬೇಕು ಎಂದು ಸ್ಥಳ ಗುರುತಿಸಿ, ಜನರಿಗೆ ತಿಳಿಸಲು ಸಭೆಯಲ್ಲಿ ತೀರ್ಮಾನಿಸಲಾಗಿದೆ. ಅಲ್ಲದೆ ಈ ಸಂಬಂಧ ಅಪಾರ್ಟ್ಮೆಂಟ್ ಅಸೋಸಿಯೇಶನ್ ಜೊತೆ ವಿಡಿಯೊ ಕಾನ್ಫರೆನ್ಸ್ ಮಾಡಲು ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ.


from India & World News in Kannada | VK Polls https://ift.tt/39FexsO

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...