ನವದೆಹಲಿ: ಮಾರಕ ಕೊರೊನಾ ವೈರಸ್ ಹಾವಳಿ ತಡೆಗಟ್ಟುವ ನಿಟ್ಟಿನಲ್ಲಿ ಕಾಂಗ್ರೆಸ್ ನೀಡಿದ್ದ ಸಲಹೆಗಳಿಗೆ ಸಕಾರಾತ್ಮಕವಾಗಿ ಸ್ಪಂದಿಸಿಲ್ಲ ಎಂದು ಪಕ್ಷದ ಅಧಿನಾಯಕಿ ಸೋನಿಯಾ ಗಾಂಧಿ ಆರೋಪಿಸಿದ್ದಾರೆ. ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಮಾತನಾಡಿದ ಸೋನಿಯಾ ಗಾಂಧಿ, ಮಾರಕ ವೈರಸ್ ಹಾವಳಿಯನ್ನು ನಿಯಂತ್ರಿಸಲು ನಾವು ನೀಡಿದ ಸಲಹೆಯನ್ನು ಕೇಂದ್ರ ಗಂಭೀರವಾಗಿ ಪರಿಗಣಿಸಿಲ್ಲ ಎಂದು ಹರಿಹಾಯ್ದಿದ್ದಾರೆ. ಕೊರೊನಾ ವೈರಸ್ ಹಾವಳಿ ನಿಯಂತ್ರಣಕ್ಕೆ ಸಲಹೆ ನೀಡಿ ತಾವು ಅನೇಕ ಬಾರಿ ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದಿದ್ದು, ಈ ಕುರಿತು ಸರ್ಕಾರದಿಂದ ಯಾವುದೇ ಸಕಾರಾತ್ಮಕ ಪ್ರತಿಕ್ರಿಯೆ ಬಂದಿಲ್ಲ ಎಂದು ಸೋನಿಯಾ ಹೇಳಿದ್ದಾರೆ. ಕೇವಲ ನೆಪ ಮಾತ್ರಕ್ಕೆ ವಿರೋಧ ಪಕ್ಷಗಳ ಅನಿಸಿಕೆ ಕೇಳುವ ಕೇಂದ್ರ ಸರ್ಕಾರ, ಈ ನಿಟ್ಟಿನಲ್ಲಿ ನೀಡಿದ ಸಲಹೆಗಳನ್ನು ಅಳವಡಿಸಿಕೊಳ್ಳದಿರುವುದು ಸ್ಪಷ್ಟವಾಗಿ ಗೋಚರವಾಗುತ್ತಿದೆ ಎಂದು ಸೋನಿಯಾ ಗಾಂಧಿ ಕಿಡಿಕಾರಿದ್ದಾರೆ. ಕೇಂದ್ರ ಸರ್ಕಾರ ಹೇರಿಕೆ ಬಳಿಕ ಬಡವರ ಪರ ಸಹಾನುಭೂತಿಯನ್ನೇ ತೋರುತ್ತಿಲ್ಲ ಎಂದು ಆರೋಪಿಸಿರುವ ಸೋನಿಯಾ, ಸಂಕಷ್ಟದಲ್ಲಿರುವ ಜನತೆಯ ನೆರವಿಗೆ ಧಾವಿಸುವಂತೆ ಒತ್ತಾಯಿಸಿದ್ದಾರೆ. ಕೊರೊನಾ ವೈರಸ್ ದಾಳಿಯ ನಡುವೆಯೂ ಬಿಜೆಪಿ ದೇಶದಾದ್ಯಂತ ಕೋಮು ಭಾವನೆ ಕೆರಳಿಸುವ ಕೆಲಸದಲ್ಲಿ ನಿರತವಾಗಿದ್ದು, ದೇಶ ಒಗ್ಗಟ್ಟಾಗಿರುವಾಗ ಬಿಜೆಪಿ ಕೋಮು ವಿಭಜನೆಯ ವಿಷ ಬೀಜ ಬಿತ್ತುತ್ತಿದೆ ಎಂದು ಗಂಭೀರ ಆರೋಪ ಮಾಡಿದ್ದಾರೆ.
from India & World News in Kannada | VK Polls https://ift.tt/2Vthf0H