ಲಾಕ್‌ಡೌನ್‌ ಮುಂದುವರಿಯಬೇಕೆ? ಬೇಡವೇ? ಜಿಲ್ಲಾಧಿಕಾರಿಗಳ ಜತೆ ಬಿಎಸ್‌ವೈ ಸಭೆ?

ಬೆಂಗಳೂರು: ಲಾಕ್‌ಡೌನ್‌ ವಿಸ್ತರಿಸಬೇಕೆ? ಬೇಡವೇ? ಒಂದು ವಿಸ್ತರಣೆಯಾದರೆ, ಯಾವ ಕ್ಷೇತ್ರಗಳಿಗೆ ವಿನಾಯಿತಿ ನೀಡಬೇಕು ಎಂಬೆಲ್ಲ ವಿಚಾರಗಳ ಕುರಿತು ಚರ್ಚೆ ನಡೆಸುವ ಸಲುವಾಗಿ ಸೋಮವಾರ ಸಂಜೆ 4:30ಕ್ಕೆ ರಾಜ್ಯದ ಎಲ್ಲ ಜಿಲ್ಲಾಧಿಕಾರಿಗಳ ಜತೆಗೆ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರು ಸಭೆ ನಡೆಸಲಿದ್ದಾರೆ. ಇಂದು ಬೆಳಗ್ಗೆಯಿಂದಲೂ ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಎಲ್ಲ ರಾಜ್ಯಗಳ ಮುಂಖ್ಯಮಂತ್ರಿಗಳ ಜತೆ ಚರ್ಚೆ ನಡೆಸಿದರು. ವಿಡಿಯೋ ಕಾನ್ಫರೆನ್ಸ್‌ನಲ್ಲಿ ಬಿ.ಎಸ್‌. ಯಡಿಯೂರಪ್ಪ ಅವರು ರಾಜ್ಯದಲ್ಲಿ ಮೇ 15ರವರೆಗೆ ಲಾಕ್‌ಡೌನ್‌ ವಿಸ್ತರಿಸುವ ಅನಿವಾರ್ಯತೆ ಇದೆ ಎಂಬ ಅಭಿಲಪ್ರಾಯ ವ್ಯಕ್ತಪಡಿಸಿದ್ದರು. ಜತೆಗೆ ಗ್ರೀನ್‌ ಜೋನ್‌ ಜಿಲ್ಲೆಗಳಲ್ಲಿ ಕೆಲವು ಲಾಕ್‌ಡೌನ್‌ ವಿನಾಯಿತಿ ನೀಡಲು ಅವಕಾಶ ನೀಡಬೇಕು ಎಂದು ಕೇಳಿಕೊಂಡಿದ್ದರು. ಈ ಹಿನ್ನೆಲೆಯಲ್ಲಿ ಇಂದು ಸಂಜೆ ಯಡಿಯೂರಪ್ಪ ಅವರು ಜಿಲ್ಲಾಧಿಕಾರಿಗಳ ಜತೆಗೆ ಸಭೆ ನಡೆಸಲಿದ್ದಾರೆ. ಪ್ರಸ್ತುತ ರಾಜ್ಯದ 11 ಜಿಲ್ಲೆಗಳು ಗ್ರೀನ್‌ಝೋನ್‌ ವ್ಯಾಪ್ತಿಯಲ್ಲಿವೆ. ಈ ಜಿಲ್ಲೆಗಳಲ್ಲಿ ಲಾಕ್‌ಡೌನ್‌ ವಿನಾಯಿತಿ ದೊರೆಯಬಹುದಾದ ಸಾಧ್ಯತೆ ಇದೆ. ಮೇ.3ರ ನಂತರ ಎಷ್ಟು ದಿನಗಳ ಲಾಕ್‌ ಮುಂದುವರಿಯುತ್ತೆ ಎಂಬುದನ್ನು ಕೇಂದ್ರ ಸರಕಾರ ಘೋಷಣೆ ಮಾಡಬೇಕಿದೆ. ಮುಂದೆ ಏನು ಮಾಡಬೇಕು ಎಂಬುದನ್ನು ಮೇ.3ರ ನಂತರವೇ ಪ್ರಧಾನಿ ಮೋದಿ ಘೋಷಣೆ ಮಾಡಲಿದ್ದಾರೆ.


from India & World News in Kannada | VK Polls https://ift.tt/2VEYvez

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...