ಕೊರೊನಾ ನಿಯಂತ್ರಣ: ಮುಸ್ಲಿಂ ಮುಖಂಡರಿಗೆ ಬಿಎಸ್‌ವೈ ಮಾಡಿದ ಮನವಿ ಏನು?

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ನಿಯಂತ್ರಣ ಮಾಡುವ ನಿಟ್ಟಿನಲ್ಲಿ ಮುಖ್ಯಮಂತ್ರಿ ಬಿ.ಎಸ್‌ ಯಡಿಯೂರಪ್ಪ ಶುಕ್ರವಾರ ಮುಸ್ಲಿಂ ಸಮುದಾಯದ ಮುಖಂಡರುಗಳ ಜೊತೆಗೆ ಸಭೆ ನಡೆಸಿದರು. ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ಸಭೆಯಲ್ಲಿ ಮುಸ್ಲಿಂ ಸಮುದಾಯದ ಶಾಸಕರು ಹಾಗೂ ಮುಖಂಡರು ಭಾಗಿಯಾದರು. ದೆಹಲಿಯ ನಿಜಾಮುದ್ದೀನ್‌ ಪ್ರದೇಶದಲ್ಲಿರುವ ತಬ್ಲೀಘಿ ಜಮಾತ್ ಧಾರ್ಮಿಕ ಸಭೆಯಲ್ಲಿ ಭಾಗಿಯಾದವರಲ್ಲಿ ಕೊರೊನಾ ಸೋಂಕು ಕಂಡುಬಂದ ಹಿನ್ನೆಲೆಯಲ್ಲಿ ಸಾಕಷ್ಟು ಚರ್ಚೆಗಳು ನಡೆಯುತ್ತಿವೆ. ರಾಜ್ಯದಲ್ಲೂ ಜಮಾತ್‌ ಇಜ್ತಿಮಾ ಸಮಾವೇಶದಲ್ಲಿ ಭಾಗಿಯಾದ ಜನರನ್ನು ಗುರುತಿಸಲಾಗಿದ್ದು ಅವರನ್ನೆಲ್ಲಾ ಕ್ವಾರಂಟೈನ್‌ನಲ್ಲಿಡಲಾಗಿದೆ. ಈ ನಿಟ್ಟಿನಲ್ಲಿ ಜನರು ಸಹಕಾರ ನೀಡಬೇಕು ಎಂದು ಸಿಎಂ ಮನವಿ ಮಾಡಿಕೊಂಡಿದ್ದಾರೆ. ಸಮುದಾಯದ ಜನರಲ್ಲಿ ಕೊರೊನಾ ಅರಿವು ಮೂಡಿಸುವ ನಿಟ್ಟಿನಲ್ಲಿ ಮುಸ್ಲಿಂ ಸಮುದಾಯದ ಶಾಸಕರು ಹಾಗೂ ಮುಖಂಡರ ಜೊತೆಗೆ ಬಿಎಸ್‌ವೈ ಸಭೆ ನಡೆಸಿದರು. ಸಭೆಯಲ್ಲಿ ಕಾಂಗ್ರೆಸ್ ಶಾಸಕರಾದ ಜಮೀರ್‌ ಅಹಮ್ಮದ್ ಖಾನ್, ಎನ್‌ಎ ಹ್ಯಾರಿಸ್‌, ರಿಜ್ವಾನ್‌ ಅರ್ಷದ್‌, ಸಿಎಂ ಇಬ್ರಾಹೀಂ ಸೇರಿದಂತೆ ಪ್ರಮುಖ ಮುಖಂಡರು ಭಾಗಿಯಾಗಿದರು. ಕೊರೊನಾ ಕುರಿತಾಗಿ ಜಾಗೃತಿ ಮೂಡಿಸಲು ಹೋಗಿದ್ದ ಆಶಾ ಕಾರ್ಯಕರ್ತೆಯರ ಮೇಲೆ ಬೆಂಗಳೂರಿನ ಸಾದಿಕ್ ಲೇಔಟ್‌ನಲ್ಲಿ ನಡೆದ ಹಲ್ಲೆ ಪ್ರಕರಣವೂ ಸಭೆಯಲ್ಲಿ ಚರ್ಚೆಯಾಯಿತು ಎನ್ನಲಾಗಿದೆ. ಕೊರೊನಾ ನಿಯಂತ್ರಣ ಮಾಡುವ ನಿಟ್ಟಿನಲ್ಲಿ ಮುಸ್ಲಿಂ ಸಮುದಾಯದ ಜನರಲ್ಲಿ ಮುಖಂಡರು ಅರಿವು ಮೂಡಿಸಬೇಕು ಹಾಗೂ ಸರ್ಕಾರದ ಜೊತೆಗೆ ಎಲ್ಲಾ ರೀತಿಯ ಸಹಕಾರವನ್ನು ನೀಡಬೇಕು ಎಂದು ಸಿಎಂ ಮನವಿ ಮಾಡಿಕೊಂಡಿದ್ದಾರೆ.


from India & World News in Kannada | VK Polls https://ift.tt/2R7Hyah

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...