ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಲಾಕ್ಡೌನ್ನಿಂದಾಗಿ ಜನರು ಸಂಕಷ್ಟದಲ್ಲಿದ್ದಾರೆ. ನಿತ್ಯದ ದುಡಿಮೆಯನ್ನು ಆಧರಿಸಿ ಬದುಕುತ್ತಿದ್ದ ಹಾಗೂ ಸಾಂಪ್ರದಾಯಿಕ ವೃತ್ತಿಯನ್ನು ಅವಲಂಬಿಸಿದವರ ಜೀವನ ದುಸ್ತರವಾಗಿದೆ. ಈ ನಿಟ್ಟಿನಲ್ಲಿ ವಿರೋಧ ಪಕ್ಷದ ನಾಯಕ ಸಮುದಾಯ ಸಂಘಟನೆಗಳ ಮುಖಂಡರ ಜೊತೆಗೆ ಮಂಗಳವಾರ ವಿಧಾನಸೌಧದಲ್ಲಿ ಸಭೆ ನಡೆಸಿದರು. ವಿಧಾನಸೌಧದ ತಮ್ಮ ಕಚೇರಿಯಲ್ಲಿ ಸವಿತಾ ಸಮಾಜದವರು, ಮಡಿವಾಳರು, ನೇಕಾರರು, ಕುಂಬಾರರು, ಕಮ್ಮಾರರು, ಚಮ್ಮಾರರು ಹಾಗೂ ಅಟೋ, ಟ್ಯಾಕ್ಸಿ ಚಾಲಕರು ಮತ್ತು ಬೀದಿ ಬದಿಯ ವ್ಯಾಪಾರಿಗಳ ಸಂಘಟನೆಯ ಮುಖಂಡರ ಸಭೆ ನಡೆಸಿದರು. ಸಭೆಯಲ್ಲಿ ಕೊರೊನಾ ಲಾಕ್ಡೌನ್ನಿಂದಾಗಿ ದಿನನಿತ್ಯದ ವ್ಯಾಪಾರವನ್ನು ನಂಬಿಕೊಂಡು ಬದುಕುತ್ತಿರುವ ಜನರ ಸಮಸ್ಯೆಗಳ ಕುರಿತಾಗಿ ಮಾಹಿತಿಯನ್ನು ಪಡೆದುಕೊಂಡರು. ವಿವಿಧ ಸಮುದಾಯ ಸಂಘಟನೆಗಳ ಪ್ರತಿನಿಧಿಗಳು ಸಭೆಯಲ್ಲಿ ಭಾಗಿಯಾಗಿ ಜನರು ಎದುರಿಸುತ್ತಿರುವ ತೊಂದರೆಗಳನ್ನು ಸಿದ್ದರಾಮಯ್ಯ ಅವರ ಗಮನಕ್ಕೆ ತಂದರು. ಲಾಕ್ಡೌನ್ ಅವಧಿಯಲ್ಲಿ ರೈತರ ಸಮಸ್ಯೆಗಳು ಹೆಚ್ಚಾಗಿ ಚರ್ಚೆಗೆ ಒಳಗಾಗುತ್ತಿದೆ. ಆದರೆ ಅದೇ ರೀತಿ ದಿನ ನಿತ್ಯದ ವ್ಯಾಪಾರ ನಂಬಿಕೊಂಡು ಬದುಕುತ್ತಿರುವ ಜನರು ಸಂಕಷ್ಟದಲ್ಲಿದ್ದಾರೆ. ಈ ವರ್ಗದವರು ಎದುರಿಸುತ್ತಿರುವ ಸಮಸ್ಯೆಗಳು, ಅವರಿಗೆ ನೆರವು ಒದಗಿಸುವಂತೆ ಸರ್ಕಾರದ ಮೇಲೆ ಒತ್ತಡ ಹೇರುವುದಾಗಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ. ಸಭೆಯಲ್ಲಿ ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್, ವಿಧಾನ ಪರಿಷತ್ ಸದಸ್ಯರಾದ ಎಚ್.ಎಂ.ರೇವಣ್ಣ, ಎಂ.ಸಿ. ವೇಣುಗೋಪಾಲ್, ಮಾಜಿ ಸದಸ್ಯರಾದ ಎಂ.ಡಿ.ಲಕ್ಷ್ಮಿನಾರಾಯಣ ಮತ್ತಿತರರು ಭಾಗವಹಿಸಿದ್ದರು.
from India & World News in Kannada | VK Polls https://ift.tt/3cLUlHI