ಸಿಎಂಗಳೊಂದಿಗೆ ಮೋದಿ ವಿಡಿಯೋ ಸಂವಾದ, ನಿರ್ಧಾರವಾಗುತ್ತಾ ಲಾಕ್‌ಡೌನ್ ಭವಿಷ್ಯ?

ಬೆಂಗಳೂರು: ಪ್ರಧಾನ ಮಂತ್ರಿ ಸೋಮವಾರ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳ ಜೊತೆಗೆ ವಿಡಿಯೋ ಸಂವಾದ ನಡೆಸಲಿದ್ದಾರೆ. ಸೋಮವಾರ ಬೆಳಗ್ಗೆ 10 ಗಂಟೆಗೆ ಸಂವಾದ ಆರಂಭವಾಗಲಿದೆ. ರಾಜ್ಯಗಳಲ್ಲಿ ಕೊರೊನಾ ಪರಿಸ್ಥಿತಿ ಹಾಗೂ ಲಾಕ್‌ಡೌನ್‌ ಪಾಲನೆ ಸೇರಿದಂತೆ ಮಹತ್ವದ ವಿಚಾರಗಳ ಕುರಿತಾಗಿ ಚರ್ಚೆ ನಡೆಸುವ ಸಾಧ್ಯತೆ ಇದೆ. ಈ ಹಿಂದೆಯೂ ಪ್ರಧಾನಿ ಮೋದಿ ವಿವಿಧ ರಾಜ್ಯಗಳ ಸಿಎಂಗಳ ಜೊತೆಗೆ ವಿಡಿಯೋ ಸಂವಾದ ನಡೆಸಿ ಮಾಹಿತಿ ಪಡೆದುಕೊಂಡಿದ್ದರು. ಕಳೆದ ಅವಧಿಯ ಲಾಕ್‌ಡೌನ್ ವಿಸ್ತರಣೆಯ ಸಂದರ್ಭದಲ್ಲೂ ಮುಖ್ಯಮಂತ್ರಿಗಳ ಜೊತೆಗೆ ಸಂವಾದ ನಡೆಸಿ ಅಭಿಪ್ರಾಯ ಪಡೆದುಕೊಂಡಿದ್ದರು. ಇದು ಪ್ರಧಾನಿ ನಡೆಸುವ ಮೂರನೇ ವಿಡಿಯೋ ಸಂವಾದವಾಗಿದೆ. ಮೇ 3 ಕ್ಕೆ ಲಾಕ್‌ಡೌನ್ ಅವಧಿ ಮುಕ್ತಾಯಗೊಳ್ಳಲಿದ್ದು ಈ ನಿಟ್ಟಿನಲ್ಲಿ ಮೋದಿ ವಿಡಿಯೋ ಸಂವಾದ ಮಹತ್ವದ ಪಡೆದುಕೊಂಡಿದೆ. ದೇಶದಲ್ಲಿ ಲಾಕ್‌ಡೌನ್ ಮತ್ತೆ ವಿಸ್ತರಣೆಯಾಗುತ್ತಾ ಅಥವಾ ತೆರವುಗೊಳಿಸಲಾಗುತ್ತಾಎಂಬುವುದು ನಿರ್ಧಾರವಾಗಿಲಿದೆ. ಲಾಕ್‌ಡೌನ್ ತೆರವು ಕುರಿತಂತೆ ವಿವಿಧ ರಾಜ್ಯಗಳು ತಮ್ಮದೇ ಆದ ಅಭಿಪ್ರಾಯವನ್ನು ವ್ಯಕ್ತಪಡಿಸಿವೆ. ಕೆಲವು ರಾಜ್ಯಗಳಲ್ಲಿ ಲಾಕ್‌ಡೌನ್ ಅನಿವಾರ್ಯವಾಗಿದೆ. ಆದರೆ ಲಾಕ್‌ಡೌನ್‌ನಿಂದಾಗಿ ಆರ್ಥಿಕ ಸಮಸ್ಯೆಯನ್ನು ಸರಿದೂಗಿಸುವುದು ಸರ್ಕಾರದ ಪಾಲಿಗೆ ಸವಾಲಾಗಿ ಪರಿಣಮಿಸಿದೆ. ಈ ನಿಟ್ಟಿನಲ್ಲಿ ಲಾಕ್‌ಡೌನ್ ಹಂತಹಂತವಾಗಿ ತೆರವುಗೊಳಿಸುವ ನಿಟ್ಟಿನಲ್ಲೂ ಚರ್ಚೆಗಳು ನಡೆಯುತ್ತಿವೆ. ಈ ಎಲ್ಲಾ ವಿಚಾರಗಳ ಕುರಿತಾಗಿ ಪ್ರಧಾನಿ ಮೋದಿ ರಾಜ್ಯಗಳ ಮುಖ್ಯಮಂತ್ರಿಗಳ ಜೊತೆಗೆ ಸಂವಾದದಲ್ಲಿ ಮಾಹಿತಿ ಪಡೆದುಕೊಳ್ಳಲಿದ್ದಾರೆ ಎಂದು ತಿಳಿದುಬಂದಿದೆ. ಸದ್ಯ ದೇಶದಲ್ಲಿ 27,856 ಮಂದಿಯಲ್ಲಿ ಕೊರೊನಾ ಸೋಂಕು ಕಂಡುಬಂದಿದೆ. ಈ ಪೈಕಿ 6525 ಮಂದಿ ಗುಣಮುಖರಾಗಿದ್ದರೆ 883 ಮಂದಿ ಮೃತಪಟ್ಟಿದ್ದಾರೆ.


from India & World News in Kannada | VK Polls https://ift.tt/2W2hIWx

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...