ಲಕ್ನೋ: ಮಹತ್ವದ ಬೆಳವಣಿಗೆಯೊಂದರಲ್ಲಿ ಧಾರ್ಮಿಕ ಸಭೆಯಲ್ಲಿ ಭಾಗವಹಿಸಿದ ಸದಸ್ಯರಿಂದ ದೇಶದಲ್ಲಿ ಕೊರೊನಾ ವೈರಸ್ ಪ್ರಕರಣ ಹೆಚ್ಚುತ್ತಿದೆ ಎಂದು ಆರೋಪಿಸಿದ್ದ ಯುವಕನೋರ್ವನನ್ನು ಅಪರಿಚಿತರು ಗುಂಡಿಟ್ಟು ಹತ್ಯೆ ಮಾಡಿದ ಘಟನೆ ಉತ್ತರಪ್ರದೇಶದಲ್ಲಿ ನಡೆದಿದೆ. ಇಲ್ಲಿನ ಪ್ರಯಾಗ್‌ರಾಜ್‌ನ ಕರೇಲಿ ಬಳಿಯ 29 ವರ್ಷದ ಯುವಕನೋರ್ವ ತಬ್ಲಿಘಿಗಳಿಂದಾಗಿ ದೇಶದಲ್ಲಿ ಕೊರೊನಾ ವೈರಸ್ ಪ್ರಕರಣಗಳು ಹೆಚ್ಚುತ್ತಿವೆ ಎಂದು ಆರೋಪಿಸಿದ್ದ. ಅಲ್ಲದೇ ಈ ಕುರಿತು ಸಾಮಾಜಿಕ ಜಾಲತಾಣಗಳಲ್ಲೂ ತನ್ನ ಅಭಿಪ್ರಾಯ ಪ್ರಕಟಿಸಿದ್ದ. ಆದರೆ ಈ ಆರೋಪ ಮಾಡಿದ ಯುವಕನನ್ನು ಆತನ ಮನೆಯ ಆವರಣದಲ್ಲೇ ಅಪರಿಚಿತರ ಗುಂಪೊಂದು ಗುಂಡಿಟ್ಟು ಹತ್ಯೆ ಮಾಡಿ ಪರಾರಿಯಾಗಿದೆ. ತಬ್ಲಿಘಿ ಹಾಗೂ ಮುಸ್ಲಿಂ ಸಮುದಾಯದ ವಿರುದ್ಧ ಅವಹೇಳನಾಕರಿಯಾಗಿ ಮಾತನಾಡಿದ ಎಂಬ ಕಾರಣಕ್ಕೆ ಯುವಕನನ್ನು ಹತ್ಯೆ ಮಾಡಲಾಗಿದೆ ಎನ್ನಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಬಂಧಿಸಿರುವ ಪೊಲೀಸರು, ತೀವ್ರ ವಿಚಾರಣೆ ನಡೆಸುತ್ತಿದ್ದಾರೆ. ಅಲ್ಲದೇ ಹತ್ಯೆ ಪ್ರಕರಣದಲ್ಲಿ ಭಾಗಿಯಾದ ಇತರರ ಶೋಧಕ್ಕೆ ಬಲೆ ಬೀಸಿದ್ದಾರೆ. ಇನ್ನು ಘಟನೆ ಕುರಿತು ತೀವ್ರ ಖೇದ ವ್ಯಕ್ತಪಡಿಸಿರುವ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ರಾಷ್ಟ್ರೀಯ ಭದ್ರತೆ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುವಂತೆ ಪೊಲೀಸರಿಗೆ ಆದೇಶ ನೀಡಿದ್ದಾರೆ. ಅಲ್ಲದೇ ಮೃತ ಯುವಕನ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ.
from India & World News in Kannada | VK Polls https://ift.tt/34c7E0U