ಕೊರೊನಾ ಲಾಕ್‌ಡೌನ್: ನಂದಿನಿ ಮಳಿಗೆಗಳ ಪಕ್ಕದಲ್ಲಿ ತರಕಾರಿ, ಹಣ್ಣು ಮಾರಾಟಕ್ಕೆ ಅವಕಾಶ

ಬೆಂಗಳೂರು: ಕೊರೊನಾ ಲಾಕ್‌ಡೌನ್ ಹಿನ್ನೆಲೆಯಲ್ಲಿ ಸಂಕಷ್ಟದಲ್ಲಿರುವ ರೈತರಿಗೆ ನೆರವಾಗಲು ಮತ್ತೊಂದು ಯೋಜನೆ ರೂಪಿಸಲಾಗಿದೆ. ನಂದಿನಿ ಮಳಿಗೆಗಳ ಪಕ್ಕದಲ್ಲಿ ರೈತರಿಗೆ ತರಕಾರಿ, ಹಣ್ಣು ಮಾರಾಟಕ್ಕೆ ಅವಕಾಶ ಕಲ್ಪಿಸಲಾಗಿದೆ. ಈ ಕುರಿತಾಗಿ ತೋಟಗಾರಿಕೆ ಇಲಾಖೆಯಿಂದ ಕೆಎಂಎಫ್ ಗೆ ಈ ಕುರಿತಾಗಿ ಮನವಿ ಮಾಡಲಾಗಿತ್ತು. ಮನವಿಗೆ ಸ್ಪಂದಿಸಿರುವ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ, ನಂದಿನಿ ಮಳಿಗೆಗಳ ಬಳಿ ಹಣ್ಣು, ತರಕಾರಿ ಮಾರಾಟಕ್ಕೆ ಒಪ್ಪಿಗೆ ಸೂಚಿಸಿದ್ದಾರೆ. ಹಣ್ಣು , ತರಕಾರಿ ಮಾರಾಟ ಮಾಡಲು ಆಗದೆ ತೊಂದರೆಗೊಳಗಾಗಿದ್ದ ರೈತರಿಗೆ ಇದು ಅನುಕೂಲ ಆಗಲಿದೆ. ಸಾಕಷ್ಟು ರೈತರು ಸ್ವತಃ ತಾವೇ ಹಣ್ಣು, ತರಕಾರಿ ಮಾರಾಟ ಮಾಡುತ್ತೇವೆ, ಆದರೆ ಸ್ಥಳಾವಕಾಶ ಇಲ್ಲ ಎಂದು ಸಾಕಷ್ಟು ಬಾರಿ ಮನವಿ ಮಾಡಿದ್ದರು. ಈ ಹಿನ್ನೆಲೆಯಲ್ಲಿ ನಂದಿನಿ ಮಳಿಗೆಗಳ ಪಕ್ಕದಲ್ಲಿ ತರಕಾರಿ, ಹಣ್ಣು ಮಾರಾಟಕ್ಕೆ ಅವಕಾಶ ಕಲ್ಪಿಸಲು ನಿರ್ಧರಿಸಲಾಗಿತ್ತು. ಅದರಂತೆ ತೋಟಗಾರಿಕೆ ಇಲಾಖೆಯಿಂದ ಕೆಎಂಎಫ್ ಗೆ ಮನವಿ ಮಾಡಲಾಗಿತ್ತು. ಮನವಿಗೆ ಸ್ಪಂಧಿಸಿರುವ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ, ನಂದಿನಿ ಮಳಿಗೆಗಳ ಬಳಿ ಹಣ್ಣು, ತರಕಾರಿ ಮಾರಾಟಕ್ಕೆ ಒಪ್ಪಿಗೆ ಸೂಚಿಸಿದ್ದಾರೆ. ಕೆಲವು ನಂದಿನಿ ಮಳಿಗೆ ಪಕ್ಕದಲ್ಲಿ ಹಾಫ್ ಕಾಮ್ಸ್ ಮಳಿಗೆ ಇದೆ. ಅಂತಹ ಸ್ಥಳಗಳನ್ನು ಹೊರತುಪಡಿಸಿ ಉಳಿದ ಕಡೆಗಳಲ್ಲಿ ಮಾರಾಟಕ್ಕೆ ಅವಕಾಶ ಕಲ್ಪಿಸಲಾಗುತ್ತಿದೆ. ರಾಜ್ಯಾದ್ಯಂತ ಕೆಎಂಎಫ್ ಹಾಗೂ 14 ಜಿಲ್ಲಾ ಹಾಲು ಒಕ್ಕೂಟ ಸೇರಿ 1500 ಕ್ಕಿಂತ ಹೆಚ್ಚು ಮಳಿಗೆಗಳಿವೆ. ರೈತರು ಈ ಸ್ಥಳಗಳಲ್ಲಿ ಹಣ್ಣು, ತರಕಾರಿಗಳನ್ನು ನೇರವಾಗಿ ಮಾರಾಟ ಮಾಡಬಹುದು. ಹೀಗೆ ಮಾರಾಟಕ್ಕೆ ಬಂದ ರೈತರಿಗೆ ಕೆಎಮ್‌ಎಫ್ ವತಿಯಿಂದ ಪ್ರತಿನಿತ್ಯ ಉಚಿತವಾಗಿ ನೀರು, ಮಜ್ಜಿಗೆ, ಸ್ಯಾನಿಟೈಸರ್, ಕೈಗವಚ, ಮಾಸ್ಕ್ ಗಳನ್ನ ನೀಡಲಾಗುತ್ತದೆ. ಬೆಳಿಗ್ಗೆ 6 ಗಂಟೆಯಿಂದ ರಾತ್ರಿ 8 ಗಂಟೆ ವರೆಗೆ ಮಾರಾಟ ಮಾಡಲು ಅವಕಾಶ ಕಲ್ಪಿಸಲಾಗಿದೆ. ತೂಕದ ಯಂತ್ರ ಸೇರಿದಂತೆ ಹಣ್ಣು, ತರಕಾರಿ ಮಾರಾಟಕ್ಕೆ ಬೇಕಾದ ಇತರೆ ಸಾಮಗ್ರಿಗಳನ್ನು ರೈತರೆ ತರಬೇಕು. ಮಾರಾಟಕ್ಕೆ ಬರುವ ರೈತರಿಗೆ ಯಾವುದೇ ಸಮಸ್ಯೆ ಆಗದಂತೆ ನೋಡಿಕೊಳ್ಳಲು ಪ್ರತಿ ಹತ್ತು ಮಳಿಗೆಗೆ ಒಬ್ಬರನ್ನ ಮೇಲ್ವಿಚಾರಕರನ್ನು ನೇಮಿಸಲು ತೋಟಗಾರಿಕೆ ಇಲಾಖೆ ನಿರ್ಧರಿಸಿದೆ.


from India & World News in Kannada | VK Polls https://ift.tt/2yK7ja6

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...