ಚಿಕ್ಕಬಳ್ಳಾಪುರ: ತಾಲೂಕಿನ ಪಟ್ರೇನಹಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಪಟ್ರೇನಹಳ್ಳಿಯಲ್ಲಿ ಗರ್ಭಿಣಿ ಹಾಗೂ ಬಾಣಂತಿಯರಿಗೆ ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯನಿರ್ವಹಣಾಕಾರಿ ಬಿ.ಫೌಜಿಯಾ ತರನ್ನುಮ್ ಅವರು ಪಡಿತರ ವಿತರಿಸಿದರು. ಈ ವೇಳೆ ಮಾತನಾಡಿದ ಅವರು, ದೇಶಾದ್ಯಂತ ವ್ಯಾಪಕವಾಗಿ ದಿನದಿಂದ ದಿನಕ್ಕೆ ಹರಡುತ್ತಿರುವ ತಡೆಗಟ್ಟುವ ನಿಟ್ಟಿನಲ್ಲಿ ಜಿಲ್ಲಾಡಳಿತ ಹಲವು ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಂಡಿದೆ. ಆ ನಿಟ್ಟಿನಲ್ಲಿ ಸಂಬಂಧಪಟ್ಟ ಅಧಿಕಾರಿಗಳು ಹೇಳುವ ಸೂಚನೆಗಳನ್ನು ಪಾಲಿಸಬೇಕು. ಈ ಸಾಂಕ್ರಾಮಿಕ ರೋಗದ ಬಗ್ಗೆ ಭಯಪಡುವ ಅವಶ್ಯಕತೆ ಇಲ್ಲ. ನಾವು ಮತ್ತೆ ನಮ್ಮ ಮನೆಯ ಸುತ್ತಲಿನ ಪರಿಸರದ ಬಗ್ಗೆ ಕಟ್ಟೆಚ್ಚರ ವಹಿಸಬೇಕು ಎಂದು ತಿಳಿಸಿದರು. ಸೂಚನೆ ಪಾಲಿಸಿ: ಮಹಾಮಾರಿ ಕೊರೊನಾ ವೈರಸ್ ತಡೆಗಟ್ಟಬೇಕಾದರೆ ಈಗಾಗಲೇ ದೇಶದಾದ್ಯಂತ ಜಾರಿಯಲ್ಲಿರುವ ಸೂಚನೆಗಳನ್ನು ಎಲ್ಲರೂ ಪಾಲಿಸಬೇಕು. ಈಗಾಗಲೇ ಜಿಲ್ಲಾದ್ಯಂತ 144 ಸೆಕ್ಷನ್ ಜನತಾ ಕಫ್ರ್ಯೂ ಜಾರಿ ಇರುವುದನ್ನು ಗಮನದಲ್ಲಿ ಇಟ್ಟುಕೊಂಡು ಈ ಸೋಂಕು ಹರಡದಂತೆ ಗ್ರಾಮದ ಎಲ್ಲವಾಸಿಗಳು ಕಟ್ಟುನಿಟ್ಟಾಗಿ ಪಾಲಿಸಬೇಕು ಮತ್ತು ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳಬೇಕಾಗಿದೆ ಎಂದು ಹೇಳಿದರು. ಲಾಕ್ಡೌನ್ ಹಿನ್ನೆಲೆಯಲ್ಲಿ ಎಲ್ಲ ಅಂಗನವಾಡಿ, ಶಾಲಾ ಕಾಲೇಜುಗಳಿಗೆ ರಜೆ ನೀಡಲಾಗಿದೆ. ಇದರಿಂದ ಅಂಗನವಾಡಿ ಮೂಲಕ ಮಕ್ಕಳು, ಗರ್ಭಿಣಿ-ಬಾಣಂತಿಯರಿಗೆ ವಿತರಣೆ ನೀಡುತ್ತಿದ್ದ ಪಡಿತರವನ್ನು ಅವರ ಮನೆಗಳಿಗೆ ತಲುಪಿಸಲಾಗುತ್ತಿದೆ. ಅರ್ಹರು ಅದರ ಸದುಪಯೋಗಪಡಿಸಿಕೊಳ್ಳಬೇಕು ಎಂದು ಮನವಿ ಮಾಡಿದರು. ಜಿಲ್ಲಾ ಪಂಚಾಯಿತಿ ಮತ್ತು ಗ್ರಾಮ ಪಂಚಾಯಿತಿಯ ಅಧಿಕಾರಿ, ಸಿಬ್ಬಂದಿ ವರ್ಗ ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.
from India & World News in Kannada | VK Polls https://ift.tt/345s63m