ತುಮಕೂರು: ಕೊರೊನಾದಿಂದ ರೈತರು ಸಂಕಷ್ಟದಲ್ಲಿದ್ದು ಅವರ ಸಮಸ್ಯೆಗೆ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಫಸಲ್ ಭೀಮಾ ಯೋಜನೆ ಅಡಿ ಹಣ ಬಿಡುಗಡೆ ಮಾಡಿದೆ ಎಂದು ಕೃಷಿ ಸಚಿವ ಬಿ.ಸಿ. ಪಾಟೀಲ್ ತಿಳಿಸಿದರು. ಕೊರೊನಾ ಹಿನ್ನೆಲೆಯಲ್ಲಿ ರಾಜ್ಯದ ಕೃಷಿ ಚಟುವಟಿಕೆಗಳಿಗೆ ಬಾಧಕವಾಗದಂತೆ ನಿಗಾ ವಹಿಸಲು ಎಲ್ಲ ಜಿಲ್ಲೆಗಳಲ್ಲಿಯೂ ಪರಿಶೀಲನಾ ಸಭೆ ನಡೆಸುತ್ತಿರುವ ಕೃಷಿ ಸಚಿವರು ಬುಧವಾರ ತುಮಕೂರು ಜಿಲ್ಲಾ ಕೇಂದ್ರದಲ್ಲಿ ಸಭೆ ನಡೆಸಿದರು. ರಾಜ್ಯ ಸರ್ಕಾರವು ತನ್ನ ಪಾಲಿನ ಶೇರುಹಣ 18. 59 ಲಕ್ಷ ರೂಗಳನ್ನು ಬಿಡುಗಡೆ ಮಾಡಿದೆ.ಇದರಿಂದ 1,13, 876 ಮಂದಿ ರೈತ ಫಲಾನುಭವಿಗಳಿಗೆ ಅನುಕೂಲವಾಗುತ್ತದೆ ಎಂದು ವಿವರಿಸಿದರು. ಇದುವರೆಗೂ ತಾವು ತುಮಕೂರು ಸೇರಿದಂತೆ 26 ಜಿಲ್ಲೆಗಳ ಕೃಷಿ ಪರಿಸ್ಥಿಗಳ ಬಗ್ಗೆ ಅಧ್ಯಯನ ಮಾಡಿದ್ದೇನೆ.ಸರಣಿ ಪರಿಶೀಲನಾ ಸಭೆಗಳನ್ನು ನಡೆಸಿದ್ದೇನೆ. 19 ಜಿಲ್ಲೆಗಳ ಕೃಷಿ ಸ್ಥಿತಿಗತಿ - ಪರಿಹಾರ ಕ್ತಮಗಳ ಬಗ್ಗೆ ಮುಖ್ಯಮಂತ್ರಿ ಅವರಿಗೆ ವರದಿ ಸಲ್ಲಿಸಿದ್ದೇನೆ. ಇನ್ನೂ 4 ಜಿಲ್ಲೆಗಳ ಪರಿಶೀಲನೆ ನಂತರ ಮತ್ತೊಮ್ಮೆ ಸಮಗ್ರ ವರದಿ ಸಲ್ಲಿಸುತ್ತೇನೆ ಎಂದು ವಿವರಿಸಿದರು. ಹಣ್ಣು - ತರಕಾರಿಗಳನ್ನು ಹೆಚ್ಚಾಗಿ ಬೆಳೆಯುವ ಪ್ರದೇಶಗಳಲ್ಲಿ ಪ್ರತಿ ತಾಲ್ಲೂಕಿಗೆ ಒಂದರಂತೆ ಶೀತಲ ಶೇಖರಣಾ ಬೃಹತ್ ಘಟಕಗಳನ್ನು ನಿರ್ಮಾಣ ಮಾಡಬೇಕಾಗಿದೆ. ಎಪಿಎಂಸಿಗಳನ್ನು ಮತ್ತಷ್ಟೂ ಬಲಪಡಿಸಬೇಕಾಗಿದೆ ಎಂದು ಅವರು ಅಭಿಪ್ರಾಯಪಟ್ಟರು. ರಾಜ್ಯದಲ್ಲಿ ಅತೀಹೆಚ್ಚಿನ ಪ್ತಮಾಣದಲ್ಲಿ ಗುಣಮಟ್ಟದ ಅನಾನಸ್ - ಕಲ್ಲಂಗಡಿ ಹಣ್ಣುಗಳನ್ನು ಬೆಳೆಯುತ್ತಾರೆ. ಸಮರ್ಪಕ ಪ್ರಮಾಣದಲ್ಲಿ ಮಾರಾಟವಾಗದ ಕಾರಣ ಅವುಗಳು ಕೊಳೆತು ಹೋಗುತ್ತಿವೆ. ಈ ಹಿನ್ನೆಲೆಯಲ್ಲಿ ಕೃಷಿಕರ ಪರಿಶ್ತಮ ವ್ಯರ್ಥವಾಗದಂತೆ ಮೌಲ್ಯವರ್ಧನಾ ಘಟಕಗಳ ಸ್ಥಾಪನೆಗೆ ಉದ್ದೇಶಿಸಲಾಗಿದೆ. ಇದರಿಂದ ಹಣ್ಣುಗಳ ಜ್ಯೂಸ್ ಮಾಡಿ ಹೆಚ್ಚು ಅವಧಿ ಬಾಳಿಕೆ ಬರುವ ಪ್ಯಾಕೇಟುಗಳ ಮೂಲಕ ಮಾರಾಟ ಮಾಡುವುದು ಸೂಕ್ತ ಎಂದರು. ರೈತರಿಗೆ ಉತ್ತಮ ಗುಣಮಟ್ಟದ ಬಿತ್ತನೆಬೀಜ - ಗೊಬ್ಬರಗಳು - ಕೀಟನಾಶಕಗಳು ಇನ್ನಿತರ ಪರಿಕರಗಳನ್ನು ಪೂರೈಸಲು ರಾಜ್ಯ ಸರ್ಕಾರ ಶ್ರಮಿಸುತ್ತಿದೆ. ಎಲ್ಲಿಯಾದರೂ ಇವುಗಳ ಕಳಪೆ ಮಾರಾಟ ಕಂಡು ಬಂದು ರೈತರಿಗೆ ತೊಂದರೆಯಾದರೆ ಆಯಾ ಜಿಲ್ಲೆಯ ಜಂಟಿ ಕೃಷಿ ನಿರ್ದೇಶಕರು, ತಾಲ್ಲೂಕಿನ ಸಹಾಯಕ ಕೃಷಿ ನಿರ್ದೇಶಕರನ್ನು ನೇರ ಹೊಣೆಗಾರರನ್ನಾಗಿ ಮಾಡಲಾಗುವುದು. ಅವರ ಮೇಲೆ ಕಠಿಣ ಶಿಸ್ತುಕ್ತಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು. ಕೃಷಿ ಇಲಾಖೆಯ ಜಾಗೃತ ದಳವನ್ನು ಕಟ್ಟೆಚ್ಚರದ ಸ್ಥಿತಿಯಲ್ಲಿಡಲಾಗಿದೆ. ಈಗಾಗಲೇ ರಾಜ್ಯದ ವಿವಿಧೆಡೆ ಸರಣಿ ದಾಳಿಗಳನ್ನು ನಡೆಸಿ ಕಳಪೆ ಬಿತ್ತನೆಬೀಜ, ಇನ್ನಿತರ ಪರಿಕರಗಳನ್ನು ಜಪ್ತಿ ಮಾಡಲಾಗಿದೆ.ಸಂಬಂಧಿಸಿದ ಅಂಗಡಿಗಳ ಲೈಸನ್ಸ್ ಗಳನ್ನು ಅಮಾನತ್ತಿನಲ್ಲಿಡಲಾಗಿದೆ. ಮಾಲೀಕರ ಮೇಲೆ ಕ್ರಿಮಿನಲ್ ಮೊಕದ್ದಮೆ ಹೂಡಲಾಗಿದೆ ಎಂದು ವಿವರಿಸಿದರು. ತುಮಕೂರು ಜಿಲ್ಲೆಯಲ್ಲಿ ಮುಂಗಾರು ಹಂಗಾಮಿಗೆ ಬೇಕಾದ ಬಿತ್ತನೆಬೀಜಗಳು - ಗೊಬ್ಬರ ಮತ್ತು ಇನ್ನಿತರ ಅವಶ್ಯಕ ಪರಿಕರಗಳ ಪೂರೈಕೆಯಲ್ಲಿ ಯಾವುದೇ ಕೊರತೆಯಿಲ್ಲ. ರೈತರು ನಿಶ್ಚಿಂತೆಯಿಂದ ಕೃಷಿ ಕಾಯಕ ಮುಂದುವರಿಸಲು ಮನವಿ ಮಾಡಿದರು.
from India & World News in Kannada | VK Polls https://ift.tt/2VtvzpU