ನವದೆಹಲಿ: ರಾಷ್ಟ್ರ ರಾಜಧಾನಿ ನವದೆಹಲಿಯ ಮರ್ಕಜ್ ನಿಜಾಮುದ್ದೀನ್ ಮಸೀದಿಯಲ್ಲಿ ನಡೆದ ತಬ್ಲಿಘಿ ಜಮಾತ್ ಧಾರ್ಮಿಕ ಸಭೆಯಲ್ಲಿ ಪಾಲ್ಗೊಂಡವರ ಹುಡುಕಾಟ ಮುಂದುವರೆದಿದೆ. 9 ಸಾವಿರಕ್ಕೂ ಅಧಿಕ ಜನ ಪಾಲ್ಕೊಂಡಿದ್ದ ಧಾರ್ಮಿಕ ಸಭೆ ಹಾಗೂ ನಂತರದ ಬೆಳವಣಿಗೆಗಳು ಸದ್ಯ ಇಡೀ ವಿಶ್ವದ ಗಮನ ಸೆಳೆದಿದ್ದು, ಸಭೆಯಲ್ಲಿ ಭಾಗವಹಿಸಿರುವವರಿಗಾಗಿ ತೀವ್ರ ಶೋಧ ಕಾರ್ಯ ಮುಂದುವರೆದಿದೆ. ಇದೇ ವೇಳೆ ತಬ್ಲಿಘಿ ಜಮಾತ್ ಸಭೆಯಲ್ಲಿ ಭಾಗವಹಿಸಿರಬಹುದಾದ ಶಂಕೆ ಇರುವ ಸದಸ್ಯರ ಮಾಹಿತಿಯನ್ನು ದೆಹಲಿ ಪೊಲೀಸರು ಹೆಕ್ಕಿ ತೆಗೆಯುತ್ತಿದ್ದಾರೆ. ಧಾರ್ಮಿಕ ಸಭೆ ನಡೆದ ದಿನದಂದು ಸದಸ್ಯರ ಜಿಪಿಎಸ್ ಡಾಟಾ ಅವರಿದ್ದ ಸರಿಯಾದ ಸ್ಥಳದ ಮಾಹಿತಿ ನೀಡುತ್ತದೆ. ಈ ಹಿನ್ನೆಲೆಯಲ್ಲಿ ಧಾರ್ಮಿಕ ಸಭೆಯಲ್ಲಿ ಭಾಗವಹಿಸಿರಬಹುದಾದ ಶಂಕೆ ಇರುವ ವ್ಯಕ್ತಿಗಳ ಮೊಬೈಲ್ ಡಾಟಾ ಮಾಹಿತಿಯನ್ನು ದೆಹಲಿ ಕ್ರೈಂಬ್ರ್ಯಾಂಚ್ ಪೊಲೀಸರು ಶೇಖರಿಸುತ್ತಿದ್ದಾರೆ. ದೇಶದ ಎಲ್ಲಾ ರಾಜ್ಯಗಳ ಪೊಲೀಸ್ ಇಲಾಖೆಯೊಂದಿಗೆ ನಿರಂತರ ಸಂಪರ್ಕದಲ್ಲಿರುವ ಇಲಾಖೆ, ಶಂಕಿತ ವ್ಯಕ್ತಿಗಳ ಮೊಬೈಲ್ ಡಾಟಾ ಮಾಹಿತಿಯನ್ನು ಹಂಚಿಕೊಳ್ಳುವಂತೆಯೂ ಮನವಿ ಮಾಡಿದೆ. ಸದ್ಯ ದೇಶದಲ್ಲಿ ಪತ್ತೆಯಾದ 1,000ಕ್ಕೂ ಅಧಿಕ ಕೊರೊನಾ ವೈರಸ್ ಪ್ರಕರಣಗಳಿಗೆ ತಬ್ಲಿಘಿ ಜಮಾತ್ ಧಾರ್ಮಿಕ ಸಭೆಯ ಸಂಪರ್ಕ ಇರುವುದನ್ನು ಪತ್ತೆ ಹಚ್ಚಿರುವ ಪೊಲೀಸರು, ಸ ಭೆಯಲ್ಲಿ ಭಾಗವಹಿಸಿರುವವರ ಮೇಲೆ ತೀವ್ರ ನಿಗಾ ಇರಿಸಿದ್ದಾರೆ.
from India & World News in Kannada | VK Polls https://ift.tt/2V1hZsy