ಬೆಂಗಳೂರು: ಕೊರೊನಾ ಸೋಂಕು ವಿರುದ್ಧ ಹೋರಾಟದಲ್ಲಿ ಜನರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಆಪ್ತ ಮಿತ್ರ ಸಹಾಯವಾಣಿಗೆ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಬುಧವಾರ ಗೃಹ ಕಚೇರಿ ಕೃಷ್ಣಾದಲ್ಲಿ ಚಾಲನೆ ನೀಡಿದರು. ಈ ಸಹಾಯವಾಣಿ ಮೂಲಕ ಕೊರೊನಾ ಸೋಂಕು ಲಕ್ಷಣಗಳು ಕಂಡುಬಂದವರಿಗೆ ಸೂಕ್ತ ಹಾಗೂ ಅಗತ್ಯ ಮಾಹಿತಿಗಳನ್ನು ನೀಡುವುದು ಇದರ ಉದ್ದೇಶವಾಗಿದೆ. ಜ್ವರ, ಒಣಕೆಮ್ಮು, ಉಸಿರಾಟದ ತೊಂದರೆ ಕಂಡುಬಂದರೆ ಆಪ್ತಮಿತ್ರ ಸಹಾಯವಾಣಿ 14410 ಕರೆ ಮಾಡಿ ಸಲಹೆ ಹಾಗೂ ಮಾರ್ಗದರ್ಶನ ಪಡೆಯಬಹುದಾಗಿದೆ ಸಹಾಯವಾಣಿಯನ್ನು ಉದ್ಘಾಟಿಸಿ ಮಾತನಾಡಿದ ಸಿಎಂ ಬಿಎಸ್‌ವೈ “ಕೋವಿಡ್- 19 ಸೋಂಕಿನ ಲಕ್ಷಣ ಇರುವ ವ್ಯಕ್ತಿಗಳಿಗೆ ಸಹಾಯವಾಣಿ ಮೂಲಕ ಸಲಹೆ ಹಾಗೂ ಮಾರ್ಗದರ್ಶನ ನೀಡಿ ಸೂಕ್ತ ಚಿಕಿತ್ಸೆಗೆ ನೆರವಾಗುವುದು ಇದರ ಉದ್ದೇಶವಾಗಿದೆ. ಕೊರೊನಾ ಸೋಂಕು ಲಕ್ಷಣ ಇರುವ ವ್ಯಕ್ತಿಗಳು ಆಸ್ಪತ್ರೆಗೆ ಭೇಟಿ ನೀಡುವುದನ್ನು ತಪ್ಪಿಸುವ ಮೂಲಕ ರೋಗ ಹರಡುವುದನ್ನು ತಡೆಗಟ್ಟಬಹುದು” ಎಂದರು. ಕರ್ನಾಟಕದ ಎಲ್ಲಾ ನಿವಾಸಿಗಳಿಗೆ, ವಿಶೇಷವಾಗಿ ಕೊರೊನಾ ಹಾಟ್ ಸ್ಪಾಟ್ ಪ್ರದೇಶಗಳಲ್ಲಿ ವಾಸಿಸುವವರಿಗೆ ಈ ಸಹಾಯವಾಣಿ ಮೂಲಕ ತಲುಪಿ ರೋಗ ಲಕ್ಷಣ ಗುರುತಿಸುವುದು ಸರ್ಕಾರದ ಉದ್ದೇಶವಾಗಿದೆ ಎಂದು ಬಿಎಸ್‌ವೈ ಮಾಹಿತಿ ನೀಡಿದರು. ಆಪ್ತ ಮಿತ್ರ ಸಹಾಯವಾಣಿ ಬೆಳಗ್ಗೆ 8 ರಿಂದ ರಾತ್ರಿ 8 ವ ವರೆಗೆ ಕಾರ್ಯ ನಿರ್ವಹಿಸುತ್ತದೆ. ಬೆಂಗಳೂರಿನಲ್ಲಿ ನಾಲ್ಕು ಕೇಂದ್ರ, ಮೈಸೂರು, ಮಂಗಳೂರು ಹೀಗೆ 6 ಸ್ಥಳಗಳಲ್ಲಿ 300 ಸಿಬ್ಬಂದಿ ಹೊಂದಿರುವ ಸಹಾಯವಾಣಿ ಕೇಂದ್ರವನ್ನು ಸ್ಥಾಪಿಸಲಾಗುತ್ತಿದೆ.
from India & World News in Kannada | VK Polls https://ift.tt/3eFAv2D