ಜನರ ಹಣ ಉಳಿತಾಯಕ್ಕೆ ಸರಕಾರ ಮಾರ್ಗೋಪಾಯ ಹುಡುಕಬೇಕಿದೆ: ಎಚ್‌ಡಿಕೆ

ಬೆಂಗಳೂರು: ಕೊರೊನಾ ವೈರಸ್‌ನಿಂದ ಲಾಕ್‌ಡೌನ್ ಆಗಿರುವ ಕಾರಣ ದೇಶದ ಜಿಡಿಪಿ ತೀವ್ರ ಕುಸಿದಿದೆ. ಈ ಸಂದರ್ಭದಲ್ಲಿ ಜನರಿಗೆ ಹಣ ಉಳಿತಾಯ ಮಾಡುವ ಮಾರ್ಗೋಪಾಯಗಳನ್ನು ಹುಡುಕಬೇಕಿದೆ ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಎಚ್ಚರಿಸಿದ್ದಾರೆ. ರಿಸರ್ವ ಬ್ಯಾಂಕ್ ಒಳಗೊಂಡಂತೆ ಅನೇಕ ಸಂಸ್ಥೆಗಳು ಭಾರತದ ಜಿಡಿಪಿ ಬೆಳವಣಿಗೆ ತೀವ್ರ ಕುಸಿತಕ್ಕೆ ಇಳಿಯುವ ಮುನ್ಸೂಚನೆ ಕೊಟ್ಟಿರುವಾಗ ಕೇಂದ್ರ ಮತ್ತು ರಾಜ್ಯ ಸರಕಾರಗಳು ಜನಸಾಮಾನ್ಯನ ಕೈಯಲ್ಲಿ ಹಣ ಉಳಿಸುವ ಮಾರ್ಗೋಪಾಯಗಳನ್ನು ಹುಡುಕಬೇಕಾಗುತ್ತದೆ. ಮುಂಬರುವ ದಿನಗಳಲ್ಲಿ 'ಕಾಸ್ಟ್ ಆಫ್ ಲಿವಿಂಗ್' ಕಡಿಮೆ ಮಾಡುವುದು ಸರಕಾರಗಳ ಆದ್ಯತೆ ಆಗಲಿದೆ ಟ್ವೀಟ್‌ ಮಾಡಿದ್ದಾರೆ. ಲಾಕ್ ಡೌನ್ ತಗೆದ ತಕ್ಷಣವೇ ಆರ್ಥಿಕ ಸ್ಥಿತಿ ಯಥಾಸ್ಥಿತಿಗೆ ಮರಳಲಾರದು. ಜಿಡಿಪಿ ಬೆಳವಣಿಗೆ ಈ ಹಿಂದೆ ಇದ್ದ ಸ್ಥಿತಿಗೆ ಮರಳಲು ವರ್ಷಗಳೇ ಬೇಕಾಗಬಹುದು ಎಂದು ಕಳವಳ ವ್ಯಕ್ತಪಡಿಸಿದ್ದಾರೆ. ಈ ಹಠಾತ್ ಶಾಕ್ ನಿಂದ ಜನಸಾಮಾನ್ಯರು ಸುಧಾರಿಸಿಕೊಳ್ಳಲು ಅನುವಾಗುವಂತೆ ಬಾಡಿಗೆ ಮುಂದೂಡಿಕೆ ಬದಲಾಗಿ ಭಾಗಶಃ ಬಾಡಿಗೆ ವಿನಾಯಿತಿ, ಖಾಸಗಿ ಸ್ಕೂಲು/ಕಾಲೇಜುಗಳ ಫೀಸ್ ಕಡಿತ, ವಿದ್ಯುತ್ ಬಿಲ್ ಕಡಿತ, ಪೆಟ್ರೋಲ್/ಡೀಸೆಲ್ ದರ ಕಡಿತ ಘೋಷಣೆ ಮಾಡುವುದು ಸೂಕ್ತ ಎಂದಿದ್ದಾರೆ.


from India & World News in Kannada | VK Polls https://ift.tt/35fUXms

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...