ಆಶಾ ಕಾರ್ಯಕರ್ತೆ ಮೇಲೆ ಹಲ್ಲೆ; ತಪ್ಪಿತಸ್ಥರನ್ನು, ಮಾಹಿತಿ ಕೊಡಬೇಡ ಎಂದು ಪ್ರಚೋದಿಸಿದವರನ್ನು ಬಂಧಿಸಿ ಎಂದ ಡಿಸಿಎಂ

ಬೆಂಗಳೂರು: ಕೊರೊನಾ ನಿಯಂತ್ರಣ ಮಾಡುವ ಹಿನ್ನೆಲೆಯಲ್ಲಿ ಜನರ ಆರೋಗ್ಯ ಪರಿಸ್ಥಿತಿಯ ಮಾಹಿತಿಯನ್ನು ಸಂಗ್ರಹಿಸಲು ಹೋಗಿದ್ದ ಆಶಾ ಕಾರ್ಯಕರ್ತೆಯರು ಹಾಗೂ ಶುಶ್ರೂಷಕಿಯರ ಮೇಲೆ ದುಷ್ಕರ್ಮಿಗಳ ಗುಂಪು ಹಲ್ಲೆ ಮಾಡಿದ ಘಟನೆಯನ್ನು ತೀವ್ರವಾಗಿ ಖಂಡಿಸಿರುವ ಉಪ ಮುಖ್ಯಮಂತ್ರಿ ಡಾ. , ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಪೊಲೀಸ್‌ ವರಿಷ್ಠಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಹಲ್ಲೆಗೊಳಗಾದ ನಿವಾಸಕ್ಕೆ ಭೇಟಿ ನೀಡಿದ ಉಪ ಮುಖ್ಯಮಂತ್ರಿ ಅಶ್ವತ್ಥ ನಾರಾಯಣ ಸಾಂತ್ವನ ಹೇಳಿದರು. ನಿಮಗೆ ಎಲ್ಲ ರೀತಿಯ ಸಹಕಾರ, ಬೆಂಬಲ ನೀಡುತ್ತೇವೆ. ನೀವು ಧೈರ್ಯವಾಗಿರಿ. ಎದೆಗುಂದ ಬೇಡಿ ಎಂದು ಅಶ್ವತ್ಥನಾರಾಯಣ ತಿಳಿಸಿದರು. ಕೂಡಲೇ ಡಿಸಿಪಿ ಜತೆ ಮಾತನಾಡಿದ ಅಶ್ವತ್ಥನಾರಾಯಣ, ಹಲ್ಲೆ ಮಾಡಿದವರ ಮೇಲೆ ಕಠಿಣ ಕ್ರಮ ತೆಗೆದುಕೊಳ್ಳಬೇಕು ಎಂದು ಸೂಚನೆ ನೀಡಿದರು. ಅಲ್ಲದೇ ದೂರು ಸ್ವೀಕರಿಸಿದ ಪೊಲೀಸರ ವಿರುದ್ಧವೂ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದರು. ಬ್ಯಾಟರಾಯನಪುರದ ಸಾಧಿಕ್‌ನಗರದಲ್ಲಿ ಮಹಿಳೆಯೊಬ್ಬರಿಗೆ ಸೋಂಕು ಇರುವ ಮಾಹಿತಿ ಇತ್ತು. ಈ ಬಗ್ಗೆ ಮಾಹಿತಿ ಪಡೆಯಲು ಸೂಚನೆ ನೀಡಲಾಗಿತ್ತು. ಅದರಂತೆ ಕಾರ್ಯಕರ್ತೆಯರು ತೆರಳಿದ್ದರು. ಆದರೆ ಮಸೀದಿಯಿಂದ ಮೈಕ್‌ನಲ್ಲಿ ಕೆಲವರು ಘೋಷಣೆ ಕೂಗಿ, ಅವರಿಗೆ ಮಾಹಿತಿ ಕೊಡಬೇಡಿ. ಅವರ ಬಳಿ ಇರುವ ದಾಖಲೆಗಳನ್ನು ಕಿತ್ತುಕೊಂಡು ಹರಿದುಹಾಕಿ, ಓಡಿಸಿ ಎಂದಿದ್ದಾರೆ. ಈ ಬಗ್ಗೆ ಕೂಡಲೇ ಪ್ರಕರಣ ದಾಖಲಿಸಿ, ಕ್ರಮ ಕೈಗೊಳ್ಳುವಂತೆ ಹಾಗೂ ಪ್ರಚೋದನಕಾರಿಯಾಗಿ ಘೋಷಣೆ ಮಾಡಿದವರನ್ನು ಹಾಗೂ ಹಲ್ಲೆ ಮಾಡಿದವರನ್ನು ಬೆಂಗಳೂರಿನ ಬ್ಯಾಟರಾಯನಪುರದ ಸಾದಿಕ್‌ ಲೇಔಟ್‌ನಲ್ಲಿ ಆಶಾ ಕಾರ್ಯಕರ್ತೆಯರು ಹಾಗೂ ಶುಶ್ರೂಷಕಿಯರು ಕೊರೊನಾ ಕುರಿತಾದ ಮಾಹಿತಿ ಸಂಗ್ರಹಕ್ಕೆ ತೆರಳಿದ್ದರು. ಆದರೆ ಇವರಿಗೆ ಮಾಹಿತಿಯನ್ನು ನೀಡಲು ಸ್ಥಳೀಯ ಮುಸ್ಲಿಮರು ನಿರಾಕರಣೆ ಮಾಡಿದ್ದಲ್ಲದೇ ಕಾರ್ಯಕರ್ತೆಯರ ಮೇಲೆ ಹಲ್ಲೆ ನಡೆಸಿದ್ದಾರೆ.


from India & World News in Kannada | VK Polls https://ift.tt/3dT8Wmb

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...