ಬಜರಂಗದಳದ ಮಾಜಿ ಮುಖಂಡ ಮಹೇಂದ್ರ ಕುಮಾರ್ ವಿಧಿವಶ

ಬೆಂಗಳೂರು: ಖ್ಯಾತ ಸಾಮಾಜಿಕ ಕಾರ್ಯಕರ್ತ, ಪ್ರಖರ ವಾಗ್ಮಿ, ಬಜರಂಗದಳದ ಮಾಜಿ ಮುಖಂಡ (47) ಶನಿವಾರ ಬೆಳಗಿನ ಜಾವ 5 ಗಂಟೆ ಸುಮಾರಿಗೆ ಹೃದಯಾಘಾತದಿಂದ ಬೆಂಗಳೂರಿನ ಎಂ.ಎಸ್. ರಾಮಯ್ಯ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಬಜರಂಗದಳದ ಮೂಲಕ ತಮ್ಮ ಸಾಮಾಜಿಕ ಜೀವನ ಆರಂಭಿಸಿದ್ದ ಮಹೇಂದ್ರ ಕುಮಾರ್ ಬಳಿಕ ಸಂಘಟನೆಯನ್ನು ಬಿಟ್ಟು ಸರ್ವಧರ್ಮ ಸೌಹಾರ್ದ, ಸಾಮಾರಸ್ಯದ ಕುರಿತು ಕಾಳಜಿಯಿಂದ ದುಡಿಯುತ್ತಿದ್ದರು. ರಾಜ್ಯದಾದ್ಯಂತ ಅಪಾರ ಜನಮನ್ನಣೆ ಗಳಿಸಿದ್ದರು. ಸಿಎಎ, ಎನ್‌ಆರ್‌ಸಿ ವಿರೋಧಿ ಹೋರಾಟದ ಸಂದರ್ಭದಲ್ಲಿ ಮಂಚೂಣಿಯಲ್ಲಿದ್ದು ಜನರಿಗೆ ಧೈರ್ಯ ತುಂಬುವ ಕೆಲಸ ಮಾಡುತ್ತಿದ್ದರು. ಬಜರಂಗದಳದ ರಾಜ್ಯ ಸಂಚಾಲಕರಾಗಿದ್ದ ಅವರು ಅದರಿಂದ ಹೊರಬಂದ ಬಳಿಕ ಸಾಮಾಜಿಕ, ಜಾಗೃತಿಕ ಚಟುವಟಿಕೆಯಲ್ಲಿ ಸಕ್ರಿಯವಾಗಿದ್ದರು. ಬಿಜೆಪಿ, ಸಂಘ ಪರಿವಾರದ ಸಿದ್ಧಾಂತ ವಿರೋಧಿಸಿ ಸಾಕಷ್ಟು ನಿಷ್ಠುರಗಳನ್ನೂ ಕಟ್ಟಿಕೊಂಡಿದ್ದರು. ಮೂಲತ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪದವರಾದ ಮಹೇಂದ್ರ ಕುಮಾರ್ ಬೆಂಗಳೂರು ವಾಸಿಯಾಗಿದ್ದರು. "ನಮ್ಮ ಧ್ವನಿ" ಎಂಬ ಸಂಘಟನೆ ಸಂಸ್ಥಾಪಕರಾಗಿದ್ದ ಅವರು ಯೂಟ್ಯೂಬ್ ಚಾನೆಲ್ ಮೂಲಕ ವಿವಿಧ ವಿಷಯಗಳ ಬಗ್ಗೆ ಮಾತನಾಡಿ ಜನಪ್ರಿಯರಾಗಿದ್ದರು. ಜನಪರ ಹೋರಾಟಗಾರ, ಶಾಂತಿಪ್ರಿಯ, ಸೌಹಾರ್ದಪರ, ಪ್ರಗತಿಪರ ನಿಲುವುಗಳ ಮಹೇಂದ್ರ ಕುಮಾರ್ ಅವರ ನಿಧನ ರಾಜ್ಯಕ್ಕೆ ಬಹು ದೊಡ್ಡ ಆಘಾತವಾಗಿದೆ. ಮಹೇಂದ್ರ ಕುಮಾರ್ ಅವರು ಪತ್ನಿ, ಇಬ್ಬರು ಮಕ್ಕಳು ಮತ್ತು ಅಪಾರ ಅಭಿಮಾನಿಗಳನ್ನು ಅಗಲಿದ್ದಾರೆ.


from India & World News in Kannada | VK Polls https://ift.tt/2zwZAwJ

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...