ಬೆಂಗಳೂರು: ಖ್ಯಾತ ಸಾಮಾಜಿಕ ಕಾರ್ಯಕರ್ತ, ಪ್ರಖರ ವಾಗ್ಮಿ, ಬಜರಂಗದಳದ ಮಾಜಿ ಮುಖಂಡ ಮಹೇಂದ್ರ ಕುಮಾರ್ (47) ಶನಿವಾರ ಹೃದಯಾಘಾತದಿಂದ ನಿಧನರಾಗಿರುವ ಹಿನ್ನೆಲೆಯಲ್ಲಿ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರ ಸ್ವಾಮಿ ಸೂಚಿಸಿದ್ದಾರೆ. ಸಾಮಾಜಿಕ ಹೋರಾಟಗಾರ ಮಹೇಂದ್ರ ಕುಮಾರ್ ಅವರ ಹಠಾತ್ ನಿಧನದ ಸುದ್ದಿ ಕೇಳಿ ದಿಗ್ಬ್ರಮೆಯಾಗಿದೆ. ವ್ಯವಸ್ಥೆಯ ತಲ್ಲಣಗಳಿಗೆ ಮಿಡಿಯುತ್ತಿದ್ದ ಜೀವ ಕಮರಿ ಹೋದಂತಾಗಿದೆ ಎಂದು ಟ್ವೀಟ್ ಮಾಡಿದ್ದಾರೆ. ಹಿಂದೂಪರ ಸಂಘಟನೆಗಳ ಮೂಲಕ ಗುರುತಿಸಿಕೊಂಡಿದ್ದ ಮಹೇಂದ್ರಕುಮಾರ್ ಇದ್ದಕ್ಕಿದ್ದಂತೆ ಬದಲಾಗಿ ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾದರು. ನನ್ನೊಂದಿಗೆ ಮುಕ್ತವಾಗಿ ಸಮಾಜದ ತಲ್ಲಣಗಳ ಬಗ್ಗೆ ಚರ್ಚಿಸುತ್ತಿದ್ದರು. ಆನಂತರ ಪಕ್ಷ ರಾಜಕೀಯದಿಂದ ದೂರ ಸರಿದ ಅವರು ವ್ಯವಸ್ಥೆಯ ವಿರುದ್ಧ ಸಿಡಿದೇಳುವ ಪ್ರಗತಿಪರ ಚಿಂತಕ ಗುಣವನ್ನು ಬಿಡಲೇ ಇಲ್ಲ. ಆದರೆ ಸಿದ್ಧಾಂತಗಳು ಬದಲಾಗಿದ್ದನ್ನು ನಾನು ಹತ್ತಿರದಿಂದ ಕಂಡಿದ್ದೆ ಎಂದು ಅವರನ್ನು ಎಚ್‌ಡಿಕೆ ಸ್ಮರಿಸಿದ್ದಾರೆ. 'ನಮ್ಮ ಧ್ವನಿ' ಸಂಘಟನೆ ಹುಟ್ಟುಹಾಕಿದ್ದ ಮಹೇಂದ್ರಕುಮಾರ್ ಈ ಮೂಲಕ ರಾಜ್ಯದಾದ್ಯಂತ ಜೀವಪರ ನಿಲುವನ್ನು ಜಾಗೃತಗೊಳಿಸುವ ಕ್ರಿಯೆಯಲ್ಲಿ ಸಕ್ರಿಯರಾಗಿದ್ದರು. ಅಕಾಲಿಕ ಸಾವನ್ನಪ್ಪಿದ ಮಹೇಂದ್ರ ಕುಮಾರ್ ಅವರ ಅಗಲಿಕೆಯ ನೋವನ್ನು ತಡೆದುಕೊಳ್ಳುವ ಶಕ್ತಿ ಅವರ ಕುಟುಂಬ ಸದಸ್ಯರಿಗೆ ಭಗವಂತ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ. ಅವರ ಆತ್ಮಕ್ಕೆ ಶಾಂತಿ ದಕ್ಕಲಿ ಎಂದು ಕಂಬನಿ ಮಿಡಿದಿದ್ದಾರೆ.
from India & World News in Kannada | VK Polls https://ift.tt/2S4maCY