ಪಾದರಾಯನಪುರ ಗಲಭೆ: ತಲೆಮರೆಸಿಕೊಂಡಿದ್ದಾನೆ ಪ್ರಕರಣದ ಪ್ರಮುಖ ಆರೋಪಿ

ಬೆಂಗಳೂರು: ಪಾದರಾಯನಪುರದಲ್ಲಿ ವೈದ್ಯಕೀಯ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿ ದಾಂಧಲೆ ನಡೆದ್ದ ಘಟನೆಗೆ ಸಂಬಂಧಿಸಿದಂತೆ ಪ್ರಕರಣದ ಪ್ರಮುಖ ಆರೋಪಿ ಕೆಎಫ್‌ಡಿ ಇರ್ಫಾನ್ ಇನ್ನೂ ತಲೆಮರೆಸಿಕೊಂಡಿದ್ದಾರೆ. ಈತನ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದು, ಸೆರೆ ಸಿಕ್ಕರೆ ಘಟನೆಯ ಕುರಿತಾಗಿ ಮತ್ತಷ್ಟು ಮಾಹಿತಿ ಬಹಿರಂಗವಾಗಲಿದೆ. ಭಾನುವಾರ ರಾತ್ರಿ ಕೊರೊನಾ ಸೋಂಕು ಶಂಕಿತರನ್ನು ಕ್ವಾರಂಟೈನ್‌ ಮಾಡಲು ತೆರಳಿದ್ದ ವೈದ್ಯಕೀಯ ಸಿಬ್ಬಂದಿ ಮೇಲೆ ಕಿಡಿಗೇಡಿಗಳ ತಂಡ ದಾಂಧಲೆ ನಡೆಸಿತ್ತು. ಬಳಿಕ ಪೊಲೀಸ್ ಕ್ಯಾಂಪ್‌ ಮೇಲೂ ದಾಳಿ ನಡೆಸಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಲೇ ಸುಮಾರು 126 ಮಂದಿಯನ್ನು ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ. ಗಲಭೆಯ ಹಿಂದೆ ಕೆಎಫ್‌ಡಿ ಇರ್ಫಾನ್‌ ಪ್ರಮುಖ ಕೈವಾಡವಿದ್ದು ಈತನ ಬಂಧನವಾದರೆ ಪೊಲೀಸರಿಗೆ ಮತ್ತಷ್ಟು ಮಾಹಿತಿ ಸಿಗಲಿದೆ. ಇರ್ಫಾನ್‌ ಸ್ಥಳೀಯವಾಗಿ ಕ್ರಿಮಿನಲ್ ಚಟುವಟಿಕೆಗಳಲ್ಲಿ ಗುರುತಿಸಿಕೊಂಡಿದ್ದ. ಸಂಘಟನೆಯೊಂದರಲ್ಲೂ ಸಕ್ರಿಯವಾಗಿದ್ದ. ಈ ಕಾರಣಕ್ಕಾಗಿಯೇ ಕೆಎಫ್‌ಡಿ ಇರ್ಫಾನ್ ಎಂದು ಸ್ಥಳೀಯವಾಗಿ ಗುರುತಿಸಿಕೊಂಡಿದ್ದ ಎಂಬ ಮಾಹಿತಿ ಇದೆ. ಪ್ರಕರಣದ ಕುರಿತಾಗಿ ತನಿಖೆ ನಡೆದಲು ಪೊಲೀಸರು 18 ತಂಡಗಳನ್ನು ರಚನೆ ಮಾಡಿದ್ದಾರೆ. ಸದ್ಯ ಪಾದರಾಯನಪುರದಲ್ಲಿ ಪರಿಸ್ಥಿತಿ ಸಂಪೂರ್ಣ ನಿಯಂತ್ರಣದಲ್ಲಿದೆ. ಮುಂಜಾಗರೂಕತಾ ಕ್ರಮವಾಗಿ 800 ಕ್ಕೂಅಧಿಕ ಪೊಲೀಸರನ್ನು ಭದ್ರತೆಗಾಗಿ ನಿಯೋಜಿಸಲಾಗಿದೆ.


from India & World News in Kannada | VK Polls https://ift.tt/3bzFGiD

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...