ಲಾಕ್‌ಡೌನ್ ಸಡಿಲ: ಬೆಂಗಳೂರಿನಲ್ಲಿ ಟ್ರಾಫಿಕ್ ಜಾಮ್ !

ಬೆಂಗಳೂರು: ಕೊರೊನಾ ನಿಯಂತ್ರಣ ಮಾಡಲು ಜಾರಿಯಲ್ಲಿದ್ದ ಲಾಕ್‌ಡೌನ್ ಸಡಿಲಗೊಂಡ ಬೆನ್ನಲ್ಲೇ ಬೆಂಗಳೂರಿನಲ್ಲಿ ಟ್ರಾಫಿಕ್ ಜಾಮ್‌ ಉಂಟಾಗಿದೆ. ಬುಧವಾರ ಮಧ್ಯರಾತ್ರಿಯಿಂದ ಲಾಕ್‌ಡೌನ್ ಸಡಿಲಿಸಿ ಸರ್ಕಾರ ಆದೇಶ ಹೊರಡಿಸಿದೆ. ಪರಿಣಾಮ ಹೆಚ್ಚಿನ ಸಂಖ್ಯೆಯ ವಾಹನಗಳು ರಸ್ತೆಗಿಳಿದಿವೆ.ಹಲವು ಕಡೆಗಳಲ್ಲಿ ವಾಹನ ದಟ್ಟಣೆಯನ್ನು ನಿಯಂತ್ರಣ ಮಾಡುವುದು ಪೊಲೀಸರಿಗೂ ಸವಾಲಾಗಿ ಪರಿಣಮಿಸಿದೆ. ಬೆಂಗಳೂರಿನ ಟೌನ್‌ಹಾಲ್‌ ಬಳಿಯಲ್ಲೂ ಹೆಚ್ಚಿನ ಸಂಖ್ಯೆಯ ವಾಹನಗಳು ರಸ್ತೆಯಲ್ಲಿ ಕಾಣಿಸಿಕೊಂಡಿವೆ. ಅಲ್ಲೂ ಟ್ರಾಫಿಕ್ ಜಾಮ್ ಉಂಟಾಗಿದೆ. ಬೆಳ್ಳಂದೂರು ಐಟಿ ಪಾರ್ಕ್‌, ಮಾರತಹಳ್ಳಿಯಲ್ಲೂ ವಾಹನಗಳು ಹೆಚ್ಚಿನ ಸಂಖ್ಯೆಯಲ್ಲಿ ರಸ್ತೆಗಿಳಿದಿವೆ. ಹೆಬ್ಬಾಳ, ಸಿಲ್ಕ್‌ ಬೋರ್ಡ್‌, ಎಲೆಕ್ಟ್ರಾನಿಕ್‌ ಸಿಟಿ, ಜೆಸಿ ರೋಡ್‌ಗಳಲ್ಲಿ ವಾಹನ ಸಂಚಾರ ಹೆಚ್ಚಿನ ಪ್ರಮಾಣದಲ್ಲಿದೆ. ಪರಿಣಾಮ ಟ್ರಾಫಿಕ್ ಜಾಮ್‌ ಉಂಟಾಗುತ್ತಿದೆ. ರಸ್ತೆಗಳಲ್ಲಿ ವಾಹನ ಸಂಚಾರ ಸುಗಮವಾಗಿರಲು ಸಂಚಾರಿ ಪೊಲೀಸನ್ನು ಹೆಚ್ಚಿನ ಸಂಖ್ಯೆಯಲ್ಲಿ ನಿಯೋಜಿಸಲಾಗಿದೆ. ಐಟಿ- ಬಿಟಿ ಕಂಪನಿಗಳು ಸೇರಿದಂತೆ ಕೃಷಿ, ಕೊರಿಯರ್, ರಿಯಲ್‌ ಎಸ್ಟೇಟ್‌ ಒಳಗೊಂಡು ಕೆಲವೊಂದು ಅಗತ್ಯ ಕೈಗಾರಿಕೆಗಳಿಗೆ ಲಾಕ್‌ಡೌನ್‌ ವಿನಾಯಿತಿ ನೀಡಲಾಗಿದೆ. ಪರಿಣಾಮ ಜನರು ಕಚೇರಿಗಳಿಗೆ ತೆರಳುತ್ತಿದ್ದಾರೆ. ಬಹುತೇಕ ಜನರು ತಮ್ಮ ವಾಹನಗಳ ಮೂಲಕ ರಸ್ತೆಗಿಳಿದಿದ್ದಾರೆ. ಇದೇ ಸಂದರ್ಭವನ್ನು ದುರುಪಯೋಗ ಪಡಿಸಿಕೊಳ್ಳುತ್ತಿರುವ ಜನರು ವಾಹನಗಳೊಂದಿಗೆ ರಸ್ತೆಗಿಳಿದಿದ್ದು ಇದನ್ನು ತಡೆಯೋದು ಪೊಲೀಸರ ಪಾಲಿಗೂ ತಲೆನೋವಾಗಿ ಪರಿಣಮಿಸಿದೆ.


from India & World News in Kannada | VK Polls https://ift.tt/2Kt7Pfm

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...