WHO ಸರಿಯಾಗಿ ಕೆಲಸ ಮಾಡಿದರೆ ನೆರವು ಸ್ಥಗಿತದ ನಿರ್ಣಯ ಮರುಪರಿಶೀಲನೆ: ಅಮೆರಿಕ!

ವಾಷಿಂಗ್ಟನ್: ಒಂದು ವೇಳೆ ವಿಶ್ವ ಆರೋಗ್ಯ ಸಂಸ್ಥೆ() ಸರಿಯಾಗಿ ಕೆಲಸ ಮಾಡಿದರೆ, ಸದ್ಯ ಕೈಗೊಂಡಿರುವ ಸ್ಥಗಿತದ ನಿರ್ಣಯವನ್ನು ಮರುಪರಿಶೀಲನೆ ಮಾಡಲಾಗುವುದು ಎಂದು ಹೇಳಿದೆ. ಈ ಕುರಿತು ಮಾತನಾಡಿರುವ ಯುನೈಟೆಡ್ ಸ್ಟೇಟ್ಸ್ ಏಜೆನ್ಸಿ ಫಾರ್ ಇಂಟರ್ನ್ಯಾಷನಲ್ ಡೆವಲಪ್ಮೆಂಟ್(USAID) ಮುಖ್ಯಸ್ಥ ಜಾನ್ ಬರ್ಸಾ, ಕೊರೊನಾ ವೈರಸ್ ಹಾವಳಿ ತಡೆಗಟ್ಟುವ ನಿಟ್ಟಿನಲ್ಲಿ WHO ಮತ್ತಷ್ಟು ಪರಿಣಾಮಕಾರಿಯಾಗಿ ಕೆಲಸ ಮಾಡಬೇಕಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ. ಒಂದು ವೇಳೆ WHO ಸರಿಯಾದ ಮಾರ್ಗದಲ್ಲಿ ನಡೆದರೆ ಹಣಕಾಸು ನೆರವು ಸ್ಥಗಿತದ ನಿರ್ಣಯವನ್ನು ಮರುಪರಿಶೀಲನೆ ನಡೆಸಲಾಗುವುದು ಎಂದು ಬರ್ಸಾ ಸ್ಪಷ್ಟಪಡಿಸಿದ್ದಾರೆ. ಇದೇ ವೇಳೆ WHO ಹೊರತುಪಡಿಸಿ ಕೊರೊನಾ ವೈರಸ್‌ಗಾಗಿ ಲಸಿಕೆ ಕಂಡುಹಿಡಿಯಬಲ್ಲ ಸಾಮರ್ಥ್ಯವಿರುವ ಯಾವುದೇ ಕಂಪನಿಯೊಂದಿಗೆ ಒಪ್ಪಂದ ಮಾಡಿಕೊಳ್ಳಲು ಅಮೆರಿಕ ಸಿದ್ಧವಿದೆ ಎಂದೂ ಬರ್ಸಾ ಹೇಳಿದ್ದಾರೆ. ಕೊರೊನಾ ವೈರಸ್‌ ಹಾವಳಿಯನ್ನು ಸಮರ್ಥವಾಗಿ ನಿಭಾಯಿಸುತ್ತಿಲ್ಲ ಮತ್ತು ವೈರಸ್ ಹರಡುವಿಕೆಗೆ ಕಾರಣವಾದ ಚೀನಾದ ಮೇಲೆ ಮೃದು ಧೋರಣೆ ಅನುಸರಿಸುತ್ತಿದೆ ಎಂಬ ಆರೋಪದ ಮೇಲೆ ಅಮರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ WHO ಗೆ ನೀಡುತ್ತಿದ್ದ ಹಣಕಾಸು ನೆರವಿನ ಮೇಲೆ ತಾತ್ಕಾಲಿಕ ತಡೆ ನೀಡಿದ್ದನ್ನು ಇಲ್ಲಿ ಸ್ಮರಿಸಬಹುದು.


from India & World News in Kannada | VK Polls https://ift.tt/2XYUQtW

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...