ವುಹಾನ್‌ನಲ್ಲಿ ಮತ್ತೆ ಕೊರೊನಾ: 11 ಮಿಲಿಯನ್ ಜನರ ಪರೀಕ್ಷೆಗೆ ಮುಂದಾದ ಚೀನಾ!

ವುಹಾನ್: ಆಘಾತಕಾರಿ ಬೆಳವಣಿಗೆಯೊಂದರಲ್ಲಿ ಚೀನಾದ ವುಹಾನ್‌ನಲ್ಲಿ ಮತ್ತೆ ಕೊರೊನಾ ವೈರಸ್ ಪ್ರಕರಣಗಳು ಪತ್ತೆಯಾಗಿದ್ದು, ಮಾರಕ ವೈರಾಣುವಿನ ಜನ್ಮಸ್ಥಾನವಾದ ವುಹಾನ್‌ನಲ್ಲಿ ಆತಂಕ ಮನೆ ಮಾಡಿದೆ. ಪ್ರಾಂತ್ಯದಲ್ಲಿ ಹೊಸ ಕೊರೊನಾ ವೈರಸ್ ಪ್ರಕರಣಗಳು ದಾಖಲಾಗುತ್ತಿದ್ದು, ಇದರಿಂದ ಬೆಚ್ಚಿರುವ ಸ್ಥಳೀಯ ಆಡಳಿತ ಇಡೀ ಪ್ರಾಂತ್ಯದ ಸಂಪೂರ್ಣ ಜನಸಂಖ್ಯೆಯನ್ನು ಪರೀಕ್ಷೆಗೆ ಒಳಪಡಿಸಲು ಸಿದ್ಧತೆ ನಡೆಸಿದೆ. ಹೌದು, ವುಹಾನ್‌ನಲ್ಲಿ ನೆಲೆಸಿರುವ ಸುಮಾರು 1.1 ಕೋಟಿ ಜನರನ್ನು ಕೊರೊನಾ ಪರೀಕ್ಷೆಗೆ ಗುರಿಪಡಿಸಲು ಸ್ಥಳಿಯ ಆಡಳಿತ ಸಿದ್ಧತೆ ನಡೆಸಿದ್ದು, ಇದಕ್ಕಾಗಿ ಯೋಜನೆ ರೂಪಿಸುವಲ್ಲಿ ನಿರತವಾಗಿದೆ. 3-10 ದಿನಗಳ ಒಳಗಾಗಿ ಜಿಲ್ಲಾವಾರು ಕೊರೊನಾ ಪರೀಕ್ಷೆಗಳನ್ನು ಪೂರ್ಣಗೊಳಿಸಬೇಕು ಎಂದು ಆದೇಶ ನಿಡಲಾಗಿದ್ದು, ಬರೋಬ್ಬರಿ 1.1 ಕೋಟಿ ಜನರನ್ನು ಪರೀಕ್ಷೆಗೆ ಗುರಿಪಡಿಸುವ ಬೃಹತ್ ಕಾರ್ಯಕ್ಕೆ ಸಜ್ಜಾಗುತ್ತಿದೆ. ವುಹಾನ್‌ನಲ್ಲಿ ಕೊರೊನಾ ವೈರಸ್ ಮಾಯವಾದ ಹಿನ್ನೆಲೆಯಲ್ಲಿ ಪ್ರಾಂತ್ಯವನ್ನು ಮರಳಿ ತೆರೆಯಲಗಿತ್ತು. ವಾಣಿಜ್ಯ ಚಟುವಟಿಕೆಗಳೂ ಸೇರಿದಂತೆ ಜನಜೀವನ ಸಾಮಾನ್ಯ ಸ್ಥಿತಿಗೆ ಮರಳಿತ್ತು. ಆದರೆ ಭಾನುವಾರ ಮತ್ತು ಸೋಮವಾರ ಮತ್ತೆ 6 ಕೊರೊನಾ ವೈರಸ್ ಪ್ರಕರಣಗಳು ಪತ್ತೆಯಾದ ಹಿನ್ನೆಲೆಯಲ್ಲಿ ಇದೀಗ ಇಡೀ ಪ್ರಾಂತ್ಯದ ಸಂಪೂರ್ಣ ಜನಸಂಖ್ಯೆಯನ್ನು ಕೊರೊನಾ ವೈರಸ್ ಪರೀಕ್ಷೆಗೆ ಗುರಿಪಡಿಸಲು ಚೀನಾ ಸಜ್ಜಾಗಿದೆ.


from India & World News in Kannada | VK Polls https://ift.tt/3fA2UHI

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...