ಗುವಾಹಟಿ: ಭಾರೀ ಮಳೆಯ ಪರಿಣಾಮ ಅಸ್ಸಾಂನಲ್ಲಿ ಬ್ರಹ್ಮಪುತ್ರ ನದಿಯ ನೀರಿನ ಮಟ್ಟದಲ್ಲಿ ಭಾರೀ ಏರಿಕೆ ಕಂಡುಬರುತ್ತಿದೆ. ಅಸ್ಸಾಂನಲ್ಲಿ ಕಳೆದ ಕೆಲವು ದಿನಗಳಿಂದ ಭಾರೀ ಮಳೆಯಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಬ್ರಹ್ಮಪುತ್ರ ನದಿಯ ನೀರಿನ ಮಟ್ಟದಲ್ಲಿ ಏರಿಕೆಯಾಗುತ್ತಿದೆ. ಈ ಕುರಿತು ಪ್ರತಿಕ್ರಿಯೆ ನೀಡಿರುವ ಕೇಂದ್ರ ಜಲ ಆಯೋಗದ ಅಧಿಕಾರಿ ಶರತ್ ಚಂದ್ರ ಕಲಿತಾ, ಪ್ರತಿ ಗಂಟೆಗೆ ಬ್ರಹ್ಮಪುತ್ರ ನದಿಯ ನೀರಿನ ಮಟ್ಟದಲ್ಲಿ 2 ಸೆ.ಮೀ ಏರಿಕೆಯಾಗುತ್ತಿದೆ ಎಂದು ಸ್ಪಷ್ಟಪಡಿಸಿದ್ದಾರೆ. ಗಂಟೆಗೆ 2 ಸೆ.ಮೀ ಏರಿಕೆಯಾಗುತ್ತಿದ್ದು, ಈ ಕುರಿತು ಇಲಾಖೆ ಅಧಿಕಾರಿಗಳು ತೀವ್ರ ನಿಗಾ ಇರಿಸಿದ್ದಾರೆ ಎಂದು ಶರತ್ ಚಂದ್ರ ಕಲಿತಾ ಸ್ಪಷ್ಟಪಡಿಸಿದ್ದಾರೆ. ಇತ್ತೀಚಿಗೆ ಪಶ್ಚಿಮ ಬಂಗಾಳದಲ್ಲಿ ಸಂಭವಿಸಿದ ಅಂಫಾನ್ ಚಂಡಮಾರುತದ ಪ್ರಭಾವ ಮತ್ತು ಅದಕ್ಕೂ ಮೊದಲೇ ಸಂಭವಿಸುತ್ತಿರುವ ಭಾರೀ ಮಳೆಯಿಂದಾಗಿ ಬ್ರಹ್ಮಪುತ್ರ ನದಿಯ ನೀರಿನ ಮಟ್ಟದಲ್ಲಿ ಭಾರೀ ಏರಿಕೆಯಾಗುತ್ತಿದೆ. ಬ್ರಹ್ಮಪುತ್ರ ನದಿ ಪ್ರವಾಹ ಅಸ್ಸಾಂನಲ್ಲಿ ಈ ಹಿಂದೆ ಅನೇಕ ಬಾರಿ ಭಾರೀ ಅವಾಂತವನ್ನೇ ಸೃಷ್ಟಿಸಿದ್ದು, ಈ ಹಿನ್ನೆಲೆಯಲ್ಲಿ ನೀರಿನ ಏರಿಕೆ ಪ್ರಮಾಣದ ಮೇಲೆ ಅಧಿಕಾರಿಗಳು ನಿಗಾ ಇರಿಸಿದ್ದಾರೆ.
from India & World News in Kannada | VK Polls https://ift.tt/2TCkEc3