ಚೀನಾದ ವುಹಾನ್ ನಲ್ಲಿ ಮೊದಲು ಪತ್ತೆಯಾಗಿದ್ದ ವಿಶ್ವಾದ್ಯಂತ 2ಲಕ್ಷದ 28 ಸಾವಿರಕ್ಕೂ ಹೆಚ್ಚು ಮಂದಿಯನ್ನು ಬಲಿಪಡೆದಿದೆ. ಭಾರತದಲ್ಲಿ 37,000ಕ್ಕೂ ಹೆಚ್ಚು ಪಾಸಿಟಿವ್ ಪ್ರಕರಣ ಬೆಳಕಿಗೆ ಬಂದಿದೆ. ಮೇ 2ರ ಕ್ಷಣಕ್ಷಣದ ಮಾಹಿತಿ ಇಲ್ಲಿದೆ:- -ಕರ್ನಾಟಕದಲ್ಲಿ ಸೋಂಕಿತರ ಸಂಖ್ಯೆ 589ಕ್ಕೆ ಏರಿಕೆಯಾಗಿದೆ. 216 ಮಂದಿ ಗುಣಮುಖರಾಗಿದ್ದು 22 ಮಂದಿ ಮೃತಪಟ್ಟಿದ್ದಾರೆ. ಸೋಂಕಿತ ಪ್ರಕರಣಗಳ ಪಟ್ಟಿಯಲ್ಲಿ ರಾಜ್ಯ 12ನೇ ಸ್ಥಾನದಲ್ಲಿದೆ. -ಭಾರತದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆ ಕಾಣುತ್ತಿದ್ದು, ಸೋಂಕಿತರ ಸಂಖ್ಯೆ 37,262ಕ್ಕೆ ಏರಿಕೆಯಾಗಿದೆ. 10,021 ಮಂದಿ ಗುಣಮುಖರಾಗಿದ್ದು, 1,223 ಮಂದಿ ಸಾವನ್ನಪ್ಪಿದ್ದಾರೆ. -ವಿಶ್ವದಾದ್ಯಂತ ಕೊರೊನಾ ವೈರಸ್ 2 ಲಕ್ಷ 39 ಸಾವಿರಕ್ಕೂ ಹೆಚ್ಚು ಜನರನ್ನು ಬಲಿ ಪಡೆದಿದೆ. 34ಲಕ್ಷಕ್ಕೂ ಹೆಚ್ಚು ಜನರಲ್ಲಿ ಕೊರೊನಾ ಇರುವುದು ದೃಢಪಟ್ಟಿದೆ. ಇದರಲ್ಲಿ 10ಲಕ್ಷದ 81 ಸಾವಿರ ಮಂದಿ ಗುಣಮುಖರಾಗಿದ್ದಾರೆ. -ಇಟಲಿ ಮೃತಪಟ್ಟವರ ಚಾರ್ಟ್ ನಲ್ಲಿ ಎರಡನೇ ಸ್ಥಾನದಲ್ಲಿದೆ. ಇಲ್ಲಿ 2ಲಕ್ಷದ 07ಸಾವಿರಕ್ಕೂ ಹೆಚ್ಚು ಮಂದಿಗೆ ಕೊರೊನಾ ಇರುವುದು ದೃಢಪಟ್ಟಿದೆ. 28,200ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿರುವ ಬಗ್ಗೆ ವರದಿ ತಿಳಿಸಿದೆ. ಸೋಂಕಿತರ ಪಟ್ಟಿಯಲ್ಲಿ ಇಟಲಿ ಮೂರನೇ ಸ್ಥಾನದಲ್ಲಿದೆ. -ಸೋಂಕಿತ ಪ್ರಕರಣಗಳಲ್ಲಿ ಎರಡನೇ ಸ್ಥಾನದಲ್ಲಿ ಸ್ಪೇನ್ ಇದ್ದು 2 ಲಕ್ಷದ 42 ಸಾವಿರಕ್ಕೂ ಹೆಚ್ಚು ಮಂದಿಗೆ ಕೊರೊನಾ ಪಾಸಿಟಿವ್ ಎಂದು ವರದಿ ಬಂದಿದೆ. 24,800ಕ್ಕೂ ಹೆಚ್ಚು ಮಂದಿ ಕೊರೊನಾಗೆ ಇಲ್ಲಿ ಸಾವನ್ನಪ್ಪಿದ್ದಾರೆ. ಮೃತಪಟ್ಟವರ ಚಾರ್ಟ್ ನಲ್ಲಿ ಮೂರನೇ ಸ್ಥಾನದಲ್ಲಿದೆ. -ಅಮೆರಿಕದಲ್ಲಿ ಅತೀ ಹೆಚ್ಚು ಮಂದಿ ಕೊರೊನಾ ವೈರಸ್ ಸೋಂಕಿಗೆ ಒಳಗಾಗಿದ್ದು. ಸೋಂಕಿತ ಪ್ರಕರಣಗಳಲ್ಲಿ ಮೊದಲ ಸ್ಥಾನದಲ್ಲಿದೆ. ಇಲ್ಲಿ 11 ಲಕ್ಷದ 13 ಸಾವಿರಕ್ಕೂ ಹೆಚ್ಚು ಮಂದಿ ಸೋಂಕಿತರಿದ್ದು, 65,700ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದಾರೆ. ಮೃತಪಟ್ಟವರ ಪಟ್ಟಿಯಲ್ಲಿ ಕೂಡ ಮೊದಲನೇ ಸ್ಠಾನದಲ್ಲಿದೆ.
from India & World News in Kannada | VK Polls https://ift.tt/35nqFOB