ಚೀನಾದ ವುಹಾನ್ ನಲ್ಲಿ ಮೊದಲು ಪತ್ತೆಯಾಗಿದ್ದ ವಿಶ್ವಾದ್ಯಂತ 3ಲಕ್ಷದ 62 ಸಾವಿರಕ್ಕೂ ಹೆಚ್ಚು ಮಂದಿಯನ್ನು ಬಲಿಪಡೆದಿದೆ. ಭಾರತದಲ್ಲಿ ಪಾಸಿಟಿವ್ ಪ್ರಕರಣ 1 ಲಕ್ಷದ 73ಸಾವಿರ ದಾಟಿದೆ. ಮೇ 30ರ ಕ್ಷಣಕ್ಷಣದ ಮಾಹಿತಿ ಇಲ್ಲಿದೆ:- -ಕರ್ನಾಟಕದಲ್ಲಿ ಸೋಂಕಿತ ಪ್ರಕರಣಗಳ ಸಂಖ್ಯೆ 2,781ಕ್ಕೆ ಏರಿಕೆಯಾಗಿದೆ. 48ಮಂದಿಯ ಸಾವಾಗಿದ್ದು, 894ಮಂದಿ ಗುಣಮುಖರಾಗಿದ್ದಾರೆ. ಸೋಂಕಿತ ಪ್ರಕರಣಗಳ ಪಟ್ಟಿಯಲ್ಲಿ ರಾಜ್ಯ 12ನೇ ಸ್ಥಾನದಲ್ಲಿದೆ.
-ಭಾರತದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆ ಕಾಣುತ್ತಿದ್ದು, ಸೋಂಕಿತರ ಸಂಖ್ಯೆ 1,73,491ಕ್ಕೆ ಏರಿಕೆಯಾಗಿದೆ. 82,627ಮಂದಿ ಗುಣಮುಖರಾಗಿದ್ದು, 4,980 ಮಂದಿ ಸಾವನ್ನಪ್ಪಿದ್ದಾರೆ. ಸೋಂಕಿತ ಪ್ರಕರಣದ ದೇಶಗಳ ಪಟ್ಟಿಯಲ್ಲಿ ಭಾರತ 9ನೇ ಸ್ಥಾನದಲ್ಲಿದೆ. ಒಂದೇ ದಿನ 7,258 ಪ್ರಕರಣ ದಾಖಲಾಗಿದೆ.
-ವಿಶ್ವದಾದ್ಯಂತ 3 ಲಕ್ಷದ 66ಸಾವಿರಕ್ಕೂ ಹೆಚ್ಚು ಜನರನ್ನು ಬಲಿ ಪಡೆದಿದೆ. 60 ಲಕ್ಷದ 30 ಸಾವಿರಕ್ಕೂ ಹೆಚ್ಚು ಜನರಲ್ಲಿ ಕೊರೊನಾ ಇರುವುದು ದೃಢಪಟ್ಟಿದೆ. ಇದರಲ್ಲಿ 26ಲಕ್ಷದ 59 ಸಾವಿರಕ್ಕೂ ಹೆಚ್ಚು ಮಂದಿ ಗುಣಮುಖರಾಗಿದ್ದಾರೆ. -ಅಮೆರಿಕದಲ್ಲಿ ಅತೀ ಹೆಚ್ಚು ಮಂದಿ ಸೋಂಕಿಗೆ ಒಳಗಾಗಿದ್ದು. ಸೋಂಕಿತ ಪ್ರಕರಣಗಳಲ್ಲಿ ಮೊದಲ ಸ್ಥಾನದಲ್ಲಿದೆ. ಇಲ್ಲಿ 17 ಲಕ್ಷದ 93ಸಾವಿರಕ್ಕೂ ಹೆಚ್ಚು ಮಂದಿ ಸೋಂಕಿತರಿದ್ದು, 1 ಲಕ್ಷದ 04ಸಾವಿರಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದಾರೆ. ಮೃತಪಟ್ಟವರ ಪಟ್ಟಿಯಲ್ಲಿ ಕೂಡ ಮೊದಲನೇ ಸ್ಠಾನದಲ್ಲಿದೆ. -ಬ್ರೆಜಿಲ್ ಸೋಂಕಿತರ ಪಟ್ಟಿಯಲ್ಲಿ 2ನೇ ಸ್ಥಾನಕ್ಕೆ ಏರಿದ್ದು, ಇಲ್ಲಿ 4 ಲಕ್ಷದ 68 ಸಾವಿರಕ್ಕೂ ಹೆಚ್ಚು ಸೋಂಕಿತ ಪ್ರಕರಣ ಬೆಳಕಿಗೆ ಬಂದಿದೆ. 27,900 ಕ್ಕೂ ಹೆಚ್ಚು ಮಂದಿ ಇಲ್ಲಿ ಸಾವನ್ನಪ್ಪಿದ್ದಾರೆ. ಮೃತಪಟ್ಟವರ ಚಾರ್ಟ್ ನಲ್ಲಿ 5ನೇ ಸ್ಥಾನದಲ್ಲಿದೆ. -ರಷ್ಯ ಸೋಂಕಿತರ ಪಟ್ಟಿಯಲ್ಲಿ 3ನೇ ಸ್ಥಾನಕ್ಕೆ ಕುಸಿದಿದೆ. 3 ಲಕ್ಷದ 87 ಸಾವಿರ ಮಂದಿ ಇಲ್ಲಿ ಸೋಂಕಿತರಿದ್ದಾರೆ. 4,300ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ.
-ಸೋಂಕಿತ ಪ್ರಕರಣಗಳಲ್ಲಿ 4ನೇ ಸ್ಥಾನದಲ್ಲಿರುವ ಸ್ಪೇನ್ ನಲ್ಲಿ 2 ಲಕ್ಷದ 85ಸಾವಿರಕ್ಕೂ ಹೆಚ್ಚು ಮಂದಿಗೆ ಕೊರೊನಾ ಪಾಸಿಟಿವ್ ಎಂದು ವರದಿ ಬಂದಿದೆ. 27,100ಕ್ಕೂ ಹೆಚ್ಚು ಮಂದಿ ಕೊರೊನಾಗೆ ಇಲ್ಲಿ ಸಾವನ್ನಪ್ಪಿದ್ದಾರೆ. ಮೃತಪಟ್ಟವರ ಚಾರ್ಟ್ ನಲ್ಲಿ 6ನೇ ಸ್ಥಾನದಲ್ಲಿದೆ. - ಯುಕೆ ಸೋಂಕಿತರ ಪಟ್ಟಿಯಲ್ಲಿ 5ನೇ ಸ್ಥಾನಕ್ಕೆ ಇಳಿದಿದೆ. ಇಲ್ಲಿ 2ಲಕ್ಷದ 71ಸಾವಿರಕ್ಕೂ ಹೆಚ್ಚು ಮಂದಿಗೆ ಕೊರೊನಾ ಇರುವುದು ದೃಢಪಟ್ಟಿದೆ. 38,100ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿರುವ ಬಗ್ಗೆ ವರದಿ ತಿಳಿಸಿದೆ. ಮೃತಪಟ್ಟವರ ಪಟ್ಟಿಯಲ್ಲಿ 2ನೇ ಸ್ಥಾನದಲ್ಲಿದೆ. -ಸೋಂಕಿತರ ಪಟ್ಟಿಯಲ್ಲಿ ಇಟಲಿ 6ನೇ ಸ್ಥಾನಕ್ಕೆ ಇಳಿದಿದ್ದು, ಮೃತಪಟ್ಟವರ ಚಾರ್ಟ್ ನಲ್ಲಿ 3ನೇ ಸ್ಥಾನದಲ್ಲಿದೆ. ಇಲ್ಲಿ 2ಲಕ್ಷದ 32ಸಾವಿರಕ್ಕೂ ಹೆಚ್ಚು ಮಂದಿಗೆ ಕೊರೊನಾ ಇರುವುದು ದೃಢಪಟ್ಟಿದೆ. 33,200ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿರುವ ಬಗ್ಗೆ ವರದಿ ತಿಳಿಸಿದೆ. -ಫ್ರಾನ್ಸ್ ಸೋಂಕಿತರ ಪಟ್ಟಿಯಲ್ಲಿ 7ನೇ ಸ್ಥಾನದಲ್ಲಿದ್ದು, ಇಲ್ಲಿ 1 ಲಕ್ಷದ 86 ಸಾವಿರ ಸೋಂಕಿತ ಪ್ರಕರಣ ಬೆಳಕಿಗೆ ಬಂದಿದೆ. 28,700ಕ್ಕೂ ಹೆಚ್ಚು ಮಂದಿ ಇಲ್ಲಿ ಸಾವನ್ನಪ್ಪಿ, ಮೃತಪಟ್ಟವರ ಚಾರ್ಟ್ ನಲ್ಲಿ 4ನೇ ಸ್ಥಾನದಲ್ಲಿದೆ.
from India & World News in Kannada | VK Polls https://ift.tt/2TPePIE