ಆಗಸ್ಟ್‌ ಒಳಗೆ ಅಂತಾರಾಷ್ಟ್ರೀಯ ವಿಮಾನ ಸಂಚಾರ ಆರಂಭ ಸಾಧ್ಯತೆ: ಹರ್‌ದೀಪ್‌ ಸಿಂಗ್‌ ಪುರಿ

ಹೊಸದಿಲ್ಲಿ: ಕೊರೊನಾ ಲಾಕ್‌ಡೌನ್‌ನಿಂದಾಗಿ ಸ್ಥಗಿತಗೊಂಡಿದ್ದ ಸಂಚಾರವನ್ನು ಆಗಸ್ಟ್‌ ತಿಂಗಳಿಗೂ ಮುನ್ನ ಆರಂಭಿಸುವ ಸಾಧ್ಯತೆ ಇದೆ. ಈ ವಿಷಯವನ್ನು ನಾಗರಿಕ ವಿಮಾನಯಾನ ಸಚಿವ ಹರ್‌ದೀಪ್‌ ಸಿಂಗ್‌ ಪುರಿ ತಿಳಿಸಿದ್ದಾರೆ. ಆಗಸ್ಟ್‌ ಅಥವಾ ಸೆಪ್ಟೆಂಬರ್‌ ಒಳಗೆ ಅಂತಾರಾಷ್ಟ್ರೀಯ ವಿಮಾನ ಹಾರಾಟವನ್ನು ಪುನಾರಂಭಿಸುವ ಬಗ್ಗೆ ಚಿಂತನೆ ನಡೆದಿದೆ. ಇದು ಸೋಂಕು ಹೆಚ್ಚಳ ಅಥವಾ ಕಡಿಮೆಯಾಗುವ ಪರಿಸ್ಥಿತಿಯ ಮೇಲೆ ಅವಲಂಬಿತವಾಗಿರುತ್ತದೆ ಎಂದು ಸಚಿವರು ತಿಳಿಸಿದರು. ಎಂದಿನಿಂದ ವಿಮಾನ ಸಂಚಾರ ಆರಂಭವಾಗಲಿದೆ ಎಂಬುದನ್ನು ಈಗಲೇ ಹೇಳಲಾಗದು. ಪರಿಸ್ಥಿತಿ ಆಧರಿಸಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ಹರ್‌ದೀಪ್‌ ಸಿಂಗ್‌ ಪುರಿ ವಿವರಿಸಿದರು. ಕೊರೊನಾ ವೈರಸ್ ಹರಡುವಿಕೆ ತಡೆಗಟ್ಟುವುದಕ್ಕಾಗಿ ದೇಶಾದ್ಯಂತ ಲಾಕ್‌ಡೌನ್‌ ಘೋಷಿಸಲಾಗಿದ್ದು, ಕಳೆದ ಎರಡು ತಿಂಗಳಿನಿಂದ ವಿಮಾನ ಸಂಚಾರ ರದ್ದಾಗಿದೆ. ಮೇ 25ರಿಂದ ದೇಶೀಯ ವಿಮಾನ ಸಂಚಾರಕ್ಕೆ ಕೇಂದ್ರ ಸರಕಾರ ಅನುಮತಿ ನೀಡಿದೆ.


from India & World News in Kannada | VK Polls https://ift.tt/2Xrxk6Z

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...