ಕೊರೊನಾ ಬಿಕ್ಕಟ್ಟು ತಂದ ಬಿರುಕು: ಮಿತ್ರಪಕ್ಷಗಳ ಸಭೆ ಕರೆದ ಉದ್ಧವ್ ಠಾಕ್ರೆ!

ಮುಂಬೈ: ಮಹಾರಾಷ್ಟ್ರದ ಮಹಾ ವಿಕಾಸ್ ಅಘಾಡಿ ಸಮ್ಮಿಶ್ರ ಸರ್ಕಾರದಲ್ಲಿ ಬಿರುಕು ಮೂಡಿದೆ ಎಂಬ ವರದಿಗಳ ಮಧ್ಯೆಯೇ, ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಕರೆದಿದ್ದಾರೆ. ಶಿವಸೇನೆ, ಎನ್‌ಸಿಪಿ-ಕಾಂಗ್ರೆಸ್ ಸಮ್ಮಿಶ್ರ ಸರ್ಕಾರದ ಪ್ರಮುಖರ ಸಭೆ ಕರೆದಿರುವ ಉದ್ಧವ್ ಠಾಕ್ರೆ, ಬಿಕ್ಕಟ್ಟು ಶಮನಕ್ಕೆ ಪ್ರಯತ್ನ ನಡೆಸಲಿದ್ದಾರೆ ಎನ್ನಲಾಗಿದೆ. ಕೊರೊನಾ ವೈರಸ್ ಹಾವಳಿ ಹಾಗೂ ರಾಜ್ಯದಲ್ಲಿ ಲಾಕ್‌ಡೌನ್ ವಿಸ್ತರಣೆ ಕುರಿತು ಶಿವಸೇನೆ ಹಾಗೂ ಎನ್‌ಸಿಪಿ ನಡುವೆ ಒಮ್ಮತ ಮೂಡಿತ್ತಿಲ್ಲ ಎಂಬ ಮಾತುಗಳು ಕೇಳಿ ಬರುತ್ತಿದ್ದು, ಈ ಕಾರಣಕ್ಕೆ ಸಮ್ಮಿಶ್ರ ಸರ್ಕಾರದ ಭವಿಷ್ಯ ಡೋಲಾಯಮಾನವಾಗಿದೆ ಎಂದು ಅಂದಾಜಿಲಸಾಗಿದೆ. ಆದರೆ ಸರ್ಕಾರ ಸುಭದ್ರವಾಗಿದೆ ಎಂದು ಪದೇ ಪದೇ ಹೇಳುತ್ತಿರುವ ಉಭಯ ಪಕ್ಷಗಳ ಹಿರಿಯ ನಾಯಕರು, ಪ್ರತಿಪಕ್ಷ ಬಿಜೆಪಿ ಸಮ್ಮಿಶ್ರ ಸರ್ಕಾರ ಪತನವಾಗುವ ಹಗಲುಗನಸು ಕಾಣುತ್ತಿದೆ ಎಂದು ಕಿಡಿಕಾರಿದ್ದಾರೆ. ಈಗಾಗಲೇ ಮುಖ್ಯಮಂತ್ರಿ ಹಾಗೂ ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ಭೇಟಿ ಮಾಡಿ ಚರ್ಚೆ ನಡೆಸಿದ್ದು, ಇದರ ಮುಂದುವರಿದ ಭಾಗವಾಗಿ ಇಂದು ಉದ್ಧವ್ ಠಾಕ್ರೆ ನೇತೃತ್ವದಲ್ಲಿ ಮಿತ್ರಪಕ್ಷಗಳ ಸಭೆ ನಡೆಯಲಿದೆ. ಇನ್ನು ಮಹಾರಾಷ್ಟ್ರದಲ್ಲಿ ಕಾಂಗ್ರೆಸ್ ಪ್ರಮುಖ ನಿರ್ಧಾರಗಳನ್ನು ತೆಗೆದೆಕೊಳ್ಳುವಷ್ಟು ಶಕ್ತರಾಗಿಲ್ಲ ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತಿರಸ್ಕರಿಸಿರುವ ಶಿವಸೇನೆ-ಎನ್‌ಸಿಪಿ ನಾಯಕರು, ಸಮ್ಮಿಶ್ರ ಸರ್ಕಾರದಲ್ಲಿ ನಾವೆಲ್ಲರೂ ಸಮಾನರು ಎಂದು ಸ್ಪಷ್ಟಪಡಿಸಿದ್ದಾರೆ.


from India & World News in Kannada | VK Polls https://ift.tt/36yVXCT

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...