ಯೋಗಿ ಆದಿತ್ಯನಾಥ್ ಅವರನ್ನು ಹಿಟ್ಲರ್ ಎಂದು ಕರೆದ ಶಿವಸೇನೆ ಮುಖವಾಣಿ!

ಮುಂಬೈ: ಕೊರೊನಾ ವೈರಸ್ ಹಾವಳಿಯ ಸಂದರ್ಭದಲ್ಲಿ ರಾಜಕೀಯ ಬೇಡ ಎಂಬುದು ಎಲ್ಲಾ ದೇಶವಾಸಿಗಳ ಬಯಕೆಯಾಗಿದೆ. ಸಂಕಷ್ಟದ ಸಮಯದಲ್ಲಿ ನಾವೆಲ್ಲಾ ಒಂದಾಗಿ ಈ ಮಾರಕ ವೈರಾಣು ವಿರುದ್ಧ ಹೋರಾಡಬೇಕಿರುವುದು ಸತ್ಯ. ಆದರೆ ಮಹಾರಾಷ್ಟ್ರದ ಆಡಳಿತಾರೂಢ ಮಾತ್ರ ಉತ್ತರಪ್ರದೇಶ ಮುಖ್ಯಮಂತ್ರಿ ವಿರುದ್ಧದ ತನ್ನ ರಾಜಕೀಯ ವಾಗ್ದಾಳಿಯನ್ನು ಮುಂದುವರೆಸಿದೆ. ವಲಸೆ ಕಾರ್ಮಿಕರ ವಿಷಯದಲ್ಲಿ ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಜರ್ಮನಿಯ ಮಾಜಿ ಸರ್ವಾಧಿಕಾರಿ ಹಿಟ್ಲರ್‌ನಂತೆ ವರ್ತಿಸುತ್ತಿದ್ದಾರೆ ಎಂದು ಶಿವಸೇನೆ ಆರೋಪ ಮಾಡಿದೆ. ಈ ಕುರಿತು ಶಿವಸೇನೆ ಮುಖವಾಣಿ ಸಾಮ್ನಾದಲ್ಲಿ ಲೇಖನ ಬರೆದಿರುವ ರಾಜ್ಯಸಭಾ ಸಂಸದ ಸಂಜಯ್ ರಾವತ್, ವಲಸೆ ಕಾರ್ಮಿಕರ ವಿರುದ್ಧ ಯೋಗಿ ಆದಿತ್ಯನಾಥ್ ಅಮಾನವೀಯವಾಗಿ ವರ್ತಿಸುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ. ಉತ್ತರಪ್ರದೇಶದಲ್ಲಿರುವ ಹೊರ ರಾಜ್ಯದ ವಲಸೆ ಕಾರ್ಮಿಕರಿಗೆ ಸ್ವ ರಾಜ್ಯಗಳಿಗೆ ಹೋಗಲು ಯೋಗಿ ಸರ್ಕಾರ ಅನುಮತಿ ನೀಡುತ್ತಿಲ್ಲ ಎಂದು ಸಂಜಯ್ ರಾವತ್ ಆಪಾದಿಸಿದ್ದಾರೆ. ಅಲ್ಲದೇ ಹೊರ ರಾಜ್ಯಗಳಿಂದ ಉತ್ತರಪ್ರದೇಶಕ್ಕೆ ಕಾಲ್ನಡಿಗೆಯಲ್ಲಿ, ಸೈಕಲ್‌ಗಳಲ್ಲಿ ಹಾಗೂ ಟ್ರಕ್‌ಗಳಲ್ಲಿ ಆಗಮಿಸುತ್ತಿರುವ ವಲಸೆ ಕಾರ್ಮಿಕರನ್ನು ಒಳಗೆ ಬಿಡದಂತೆ ಯೋಗಿ ಆದಿತ್ಯನಾಥ್ ಜಿಲ್ಲಾಧಿಕಾರಿಗಳಿಗಹೆ ಸೂಚನೆ ನೀಡಿರುವುದು ವರ್ತನೆ ಎಂದು ಸಾಮ್ನಾದಲ್ಲಿ ಕಿಡಿಕಾರಲಾಗಿದೆ.


from India & World News in Kannada | VK Polls https://ift.tt/3bXszHl

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...