ಗಂಭೀರ ಕಾಯಿಲೆ, ಗರ್ಭಿಣಿಯರು ಅಗತ್ಯವಿದ್ದರೆ ಮಾತ್ರ ಪ್ರಯಾಣಿಸಿ: ರೈಲ್ವೆ

ಹೊಸದಿಲ್ಲಿ: ಕೊರೊನಾ ವೈರಸ್ ನಾಲ್ಕನೇ ಹಂತದ ಲಾಕ್‌ಡೌನ್ ಹಂತದಲ್ಲಿ ವಲಸೆ ಕಾರ್ಮಿಕರನ್ನು ತಮ್ಮ ತಮ್ಮ ಊರುಗಳಿಗೆ ತಲುಪಿಸಲು ವಿಶೇಷ ಸೇವೆಯನ್ನು ಒದಗಿಸುತ್ತಿದೆ. ಈ ಮಧ್ಯೆ ಗಂಭೀರ ಕಾಯಿಲೆಯಿಂದ ಬಳಲುತ್ತಿರುವ ಜನರು, ಗರ್ಭಿಣಿಯರು, ಮಕ್ಕಳು ಮತ್ತು 65 ವರ್ಷಕ್ಕಿಂತ ಮೇಲ್ಪಟ್ಟವರು ಅಗತ್ಯವಿದ್ದಾಗ ಮಾತ್ರ ಶ್ರಮಿಕ ರೈಲುಗಳಲ್ಲಿ ಪ್ರಯಾಣಿಸಬೇಕೆಂದು ರೈಲ್ವೆ ಸಚಿವ ಮನವಿ ಮಾಡಿದ್ದಾರೆ. "ರೈಲ್ವೆ ಪರಿವಾರವು ಎಲ್ಲ ಪ್ರಯಾಣಿಕರ ಸುರಕ್ಷತೆಯನ್ನು ಖಚಿತಪಡಿಸಲು ಬದ್ಧವಾಗಿದೆ. ಗಂಭೀರ ಕಾಯಿಲೆಯಿಂದ ಬಳಲುತ್ತಿರುವ ಜನರು, ಗರ್ಭಿಣಿಯರು, 65 ವರ್ಷಕ್ಕಿಂತ ಮೇಲ್ಪಟ್ಟವರು ಹಾಗೂ 10 ವರ್ಷಕ್ಕಿಂತ ಕಡಿಮೆ ವಯಸ್ಸಿನವರು ಅಗತ್ಯವಿದ್ದರೆ ಮಾತ್ರ ಪ್ರಯಾಣಿಸಬೇಕು ಎಂದು ಮನವಿ ಮಾಡುತ್ತೇನೆ" ಎಂದರು. ಲಾಕ್‌ಡೌನ್ ನಿಯಮ ಸಡಿಲಗೊಂಡಿರುವುದರಿಂದ ವಲಸೆ ಕಾರ್ಮಿಕರನ್ನು ಸುರಕ್ಷಿತವಾಗಿ ತಲುಪಿಸಲು ಶ್ರಮಿಕ ರೈಲುಗಳ ಓಡಾಟವನ್ನು ಪ್ರಾರಂಭಿಸಲಾಗಿದೆ. ಎಲ್ಲ ರೀತಿಯ ಕೋವಿಡ್ ಸುರಕ್ಷಾ ಮಾನದಂಡಗಳನ್ನು ಪಾಲಿಸಿಕೊಂಡು ರೈಲು ಸಂಚಾರ ನಡೆಸುತ್ತಿದೆ. ಆದರೆ ವೈದ್ಯಕೀಯ ನೆರವು ಅಗತ್ಯವಿರುದ ಜನರು ಇದರ ಸೇವೆ ಪಡೆಯುತ್ತಿದ್ದಾರೆ ಎಂಬುದು ವರದಿಯಾಗಿದೆ. ಇದು ಮತ್ತಷ್ಟು ಅಪಾಯವನ್ನು ಆಹ್ವಾನಿಸುವಂತಾಗಿದೆ. ಕೋವಿಡ್ 19 ರೋಗದಿಂದ ದುರ್ಬಲ ವ್ಯಕ್ತಿಗಳನ್ನು ರಕ್ಷಿಸುವ ಸಲುವಾಗಿ ಅಧಿಕ ರಕ್ತದೊತ್ತಡ, ಮಧುಮೇಹ, ಹೃದಯ ಸಂಬಂಧಿ ಕಾಯಿಲೆ, ಕ್ಯಾನ್ಸರ್, ಗರ್ಭಿಣಿಯರು, 65 ವರ್ಷಕ್ಕಿಂತ ಮೇಲ್ಪಟ್ಟ ವ್ಯಕ್ತಿಗಳು ಹಾಗೂ 10 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳು ಪ್ರಯಾಣವನ್ನು ಕೈಗೊಳ್ಳುವುದನ್ನು ತಪ್ಪಿಸಬೇಕು ಎಂದು ರೈಲ್ವೆ ಸಚಿವಾಲಯ ಪ್ರಕಟಣೆಯಲ್ಲಿ ತಿಳಿಸಿದೆ. ದೇಶದ ಎಲ್ಲ ನಾಗರಿಕರಿಗೆ ಪ್ರಯಾಣ ಸೇವೆ ಖಚಿತಪಡಿಸಲು ಭಾರತೀಯ ರೈಲ್ವೆ 24x7 ಕಾರ್ಯನಿರ್ವಹಿಸುತ್ತಿದೆ. ಆದರೆ ಪ್ರಯಾಣಿಕರ ಸುರಕ್ಷತೆಯು ನಮ್ಮ ದೊಡ್ಡ ಕಾಳಜಿಯಾಗಿದೆ. ಹಾಗಾಗಿ ಎಲ್ಲ ವಿಷಯದಲ್ಲಿ ನಾಗರಿಕರ ಸಹಕಾರವನ್ನು ಬಯಸುತ್ತೇವೆ. ಯಾವುದೇ ತುರ್ತು ಸಂದರ್ಭದಲ್ಲಿ ದಯವಿಟ್ಟು ರೈಲ್ವೆ ಪರಿವಾರ ಸಂಪರ್ಕಿಸಲು ಹಿಂಜರಿಯದಿರಿ. ನಾವು ನಿಮಗೆ ಸದಾ ಸಹಾಯ ಮಾಡಲು ತಯಾರಾಗಿದ್ದೇವೆ (ಸಹಾಯವಾಣಿ ಸಂಖ್ಯೆ 139 ಹಾಗೂ 138) ಎಂದು ಉಲ್ಲೇಖಿಸಲಾಗಿದೆ.


from India & World News in Kannada | VK Polls https://ift.tt/2XcP4UA

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...