ಲಾಕ್‌ಡೌನ್‌ ಮುಂದುವರಿದರೆ ನಿರುದ್ಯೋಗ ಸಮಸ್ಯೆ, ಸಿದ್ದರಾಮಯ್ಯ ಎಚ್ಚರಿಕೆ

ಬೆಂಗಳೂರು: ಕೊರೊನಾ ನಿಯಂತ್ರಣ ಮಾಡುವ ನಿಟ್ಟಿನಲ್ಲಿ ಲಾಕ್‌ಡೌನ್ ಮುಂದುವರಿಸಿದರೆ ರಾಜ್ಯದಲ್ಲಿ ನಿರುದ್ಯೋಗ ಸಮಸ್ಯೆ ತೀವ್ರಗೊಳ್ಳಲಿದೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಎಚ್ಚರಿಕೆ ನೀಡಿದ್ದಾರೆ. ಈ ನಿಟ್ಟಿನಲ್ಲಿ ಕೆಲವೊಂದು ಮುನ್ನೆಚ್ಚರಿಕೆಗಳನ್ನು ಕೈಗೊಂಡು ಹಸಿರು, ಆರೆಂಜ್‌ ವಲಯಗಳಲ್ಲಿ ಲಾಕ್‌ಡೌನ್ ವಾಪಸ್‌ ಪಡೆಯುವಂತೆ ಒತ್ತಾಯಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಮುಂಜಾಗರೂಕತಾ ಕ್ರಮವಾಗಿ ಕೆಂಪು ವಲಯಗಳನ್ನು ತೆರವುಗೊಳಿಸುವುದು ಬೇಡ, ಆರೆಂಜ್, ಗ್ರೀನ್ ಜೋನ್‌ಗಳಲ್ಲಿ ಲಾಕ್‌ಡೌನ್ ಸಡಿಲ ಮಾಡಿ ಎಂದು ಸರ್ಕಾರಕ್ಕೆ ಮನವಿ ಮಾಡಿದ್ದಾರೆ. ಲಾಕ್‌ಡೌನ್ ಜಾರಿಯಿಂದ ಕಾರ್ಮಿಕರು, ರೈತರು ಸಂಕಷ್ಟದಲ್ಲಿದ್ದಾರೆ. ಆರ್ಥಿಕ ಚಟುವಟಿಕೆಗಳಿಗೆ ಭಾರೀ ಹಿನ್ನೆಡೆಯಾಗಿದೆ. ಇದನ್ನು ಮತ್ತೆ ಸರಿದಾರಿಗೆ ತರುವ ನಿಟ್ಟಿನಲ್ಲಿ ಲಾಕ್‌ಡೌನ್ ಸಡಿಲಗೊಳಿಸಿ ಎಂದರು. ಆದರೆ ಈ ಸಂದರ್ಭದಲ್ಲಿ ಬಹಳ ಎಚ್ಚರಿಕೆಯ ಕ್ರಮಗಳನ್ನು ಕೈಗೊಳ್ಳಬೇಕು. ಸಾಮಾಜಿಕ ಅಂತರ ಕಾಪಾಡಿಕೊಳ್ಳುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕು ಎಂದರು. ಲಾಕ್‌ಡೌನ್ ಜಾರಿಯ ಪರಿಣಾಮ ಅಸಂಘಟಿತ ಕಾರ್ಮಿಕರು, ಸಾಂಪ್ರಾದಾಯಿಕ ಕೆಲಸಗಾರರು ಸಂಕಷ್ಟದಲ್ಲಿದ್ದಾರೆ. ಈ ನಿಟ್ಟಿನಲ್ಲಿ ಸರ್ಕಾರ ವಿಶೇಷ ಆರ್ಥಿಕ ಪ್ಯಾಕೇಜ್ ಘೋಷಣೆ ಮಾಡಬೇಕು. ಇದರಿಂದ ಜನರಲ್ಲಿ ಕೊಂಡುಕೊಳ್ಳುವ ಶಕ್ತಿ ಬರುತ್ತದೆ, ಪರಿಣಾಮ ಆರ್ಥಿಕ ಚಟುವಟಿಕೆ ಕೂಡಾ ಚೇತರಿಕೆಗೊಳ್ಳುತ್ತದೆ ಎಂದು ಸರ್ಕಾರಕ್ಕೆ ಸಲಹೆ ನೀಡಿದ್ದಾರೆ. ಲಾಕ್‌ಡೌನ್ ಸಂದರ್ಭದಲ್ಲಿ ಜನಪ್ರತಿನಿಧಿಗಳು ಸಂಘ, ಸಂಸ್ಥೆಗಳು ಜನರಿಗೆ ಆಹಾರ, ದಿನಸಿ ನೀಡಿದ್ದರ ಪರಿಣಾಮ ಸಾಕಷ್ಟು ಅನುಕೂಲವಾಗಿದೆ. ಬಡ ಜನರು ಹಸಿವಿನಿಂದ ಪಾರಾಗುವಂತಾಗಿದೆ. ಇಲ್ಲದೇ ಹೋಗಿದ್ದರೆ ಜನರ ಬೀದಿಗಿಳಿಯುತ್ತಿದ್ದರು ಎಂದು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.


from India & World News in Kannada | VK Polls https://ift.tt/2Spre5n

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...