ಕೊರೊನಾ ಕಾರಣ: ಸಾವರ್ಕರ್ ಮೇಲ್ಸೆತುವೆ ಉದ್ಘಾಟನಾ ಸಮಾರಂಭ ಮುಂದೂಡಿಕೆ!

ಬೆಂಗಳೂರು: ಮಹತ್ವದ ಬೆಳವಣಿಗೆಯೊಂದರಲ್ಲಿ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ನಿರ್ಮಿಸಲಾಗಿರುವ ನೂತನ ವೀರ ಸಾವರ್ಕರ್ ಮೇಲ್ಸೆತುವೆ ಉದ್ಘಾಟನೆ ಸಮಾರಂಭವನ್ನು ಕೊರೊನಾ ವೈರಸ್ ಕಾರಣಕ್ಕೆ ಮುಂದೂಡಲಾಗಿದೆ. ಇಂದು ಯಲಂಹಕದಲ್ಲಿ ಉದ್ಘಾಟನೆಗೊಳ್ಳಬೇಕಿದ್ದ ವಿ.ಡಿ. ಸಾವರ್ಕರ್ ಮೇಲ್ಸೆತುವೆ ಉದ್ಘಾಟನೆ ಸಮಾರಂಭದಲ್ಲಿ ಭಾರೀ ಸಂಖ್ಯೆಯಲ್ಲಿ ಜನ ಸೇರುವುದನ್ನು ತಪ್ಪಿಸುವ ಉದ್ದೇಶದಿಂದ ಸಮಾರಂಭವನ್ನು ಮುಂದೂಡಲಾಗಿದೆ. ಈ ಕುರಿತು ರಾಜ್ಯ ಸರ್ಕಾರ ಸ್ಪಷ್ಟನೆ ನೀಡಿದ್ದು, ನಿಯಮಾವಳಿಗಳನ್ನು ಪಾಲಿಸುವ ದೃಷ್ಟಿಯಿಂದ ಯಲಂಹಕ ಸಾವರ್ಕರ್ ಮೇಲ್ಸೆತುವೆ ಉದ್ಘಾಟನೆ ಸಮಾರಂಭವನ್ನು ಮುಂದಿನ ತಿಂಗಳಿಗೆ ಮುಂದೂಡಲಾಗಿದೆ ಎಂದು ಸ್ಪಷ್ಟಪಡಿಸಿದೆ. ಇಂದು ಸ್ವಾತಂತ್ರ್ಯವೀರ ವಿ.ಡಿ. ಸಾರ್ವಕರ್ ಅವರ 137 ನೇ ಜನ್ಮ ಜಯಂತಿಯಾಗಿದ್ದು, ಈ ಹಿನ್ನೆಲೆಯಲ್ಲಿ ನಗರದ ಯಲಂಹಕದಲ್ಲಿ ನಿರ್ಮಿಸಲಾಗಿರುವ ಸಾವರ್ಕರ್ ಮೇಲ್ಸೆತುವೆಯನ್ನು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಉದ್ಘಾಟಿಸುವವರಿದ್ದರು. ಯಲಹಂಕದಲ್ಲಿ ನಿರ್ಮಿಸಲಾಗಿರುವ ಮೇಲ್ಸೆತುವೆಗೆ ಸಾವರ್ಕರ್ ನಾಮಕರಣ ಮಾಡಿದ್ದಕ್ಕೆ ಪ್ರತಿಪಕ್ಷಗಳ ನಾಯಕರು ವಿರೋಧ ವ್ಯಕ್ತಪಡಿಸಿದ್ದರು. ರಾಜ್ಯದ ಮಹನೀಯರ ಹೆಸರು ಇಡುವುದನ್ನು ಬಿಟ್ಟು ಸಾವರ್ಕರ್ ಹೆಸರೇಕೆ ಎಂದು ಮಾಜಿ ಮುಖ್ಯಮಂತ್ರಿಗಳಾದ ಹೆಚ್‌ಡಿ. ಕುಮಾರಸ್ವಾಮಿ ಹಾಗೂ ಸಿದ್ದರಾಮಯ್ಯ ಪ್ರಶ್ನಿಸಿದ್ದರು. ಇದಕ್ಕೆ ಸೂಕ್ತ ತಿರುಗೇಟು ನೀಡಿದ್ದ ಬಿಜೆಪಿ ನಾಯಕರು ಇಂದಿರಾ ಕ್ಯಾಂಟೀನ್ ಹೆಸರು ಇಡುವಾಗ ರಾಜ್ಯದ ಮಹನೀಯರು ನೆನಪಾಗಲಿಲ್ಲವೇ ಎಂದು ಮರು ಪ್ರಶ್ನೆ ಹಾಕಿದ್ದನ್ನು ಇಲ್ಲಿ ಸ್ಮರಿಸಬಹುದು.


from India & World News in Kannada | VK Polls https://ift.tt/3dacP5h

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...