ಲಡಾಖ್: ಗಡಿಯಲ್ಲಿ ಉದ್ಭವವಾಗಿರುವ ಆತಂಕವನ್ನು ನಿವಾರಿಸಲು ಭಾರತ ಮತ್ತು ಚೀನಾದ ಉನ್ನತ ಸೇನಾಧಿಕಾರಿಗಳು ನಿರತಂತರವಾಗಿ ಸಭೆ ನಡೆಸುತ್ತಿದ್ದಾರೆ ಎನ್ನಲಾಗಿದೆ. ಕಳೆದ ಮೇ 22 ಮತ್ತು ಮೇ 23 ರಂದು ಸರಣಿ ಸಭೆಗಳನ್ನು ನಡೆಸಿರುವ ಭಾರತ ಮತ್ತು ಚೀನಾದ ಉನ್ನತ ಸೇನಾಧಿಕಾರಿಗಳು, ಉಭಯ ಸೈನಿಕರ ನಡುವಿನ ದ್ವೇಷದ ವಾತಾವರಣವನ್ನು ತಿಳಿಗೊಳಿಸಲು ಪ್ರಯತ್ನಿಸುತ್ತಿದ್ದಾರೆ ಎನ್ನಲಾಗಿದೆ. ಗಡಿಯಲ್ಲಿ ಶಾಂತಿ ಮರುಸ್ಥಾಪನೆಗೆ ಸಾಧ್ಯವಾದ ಎಲ್ಲಾ ಕ್ರಮಗಳನ್ನು ಕೈಗೊಳ್ಳುತ್ತಿರುವುದಾಗಿ ಭಾರತೀಯ ಸೇನೆಯ ಹಿರಿಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಅದಾಗ್ಯೂ ಗಡಿ ಸುರಕ್ಷತೆ ದೃಷ್ಟಿಯಿಂದ ನಮ್ಮ ಮುಂಚೂಣಿ ಸೇನೆ ಸರ್ವ ಸನ್ನದ್ಧವಾಗಿದೆ ಎಂದೂ ಸ್ಪಷ್ಟಪಡಿಸಲಾಗಿದೆ. ಈ ಮಧ್ಯೆ ಲಡಾಖ್ ಗಡಿಯಲ್ಲಿ ಉಂಟಾಗಿರುವ ಉದ್ವಿಗ್ನ ಪರಿಸ್ಥಿತಿಯನ್ನು ತಿಳಿಗೊಳಿಸಲಯ ಉಭಯ ದೇಶಗಳ ನಡುವೆ ರಾಜತಾಂತ್ರಿಕ ಪ್ರಯತ್ನಗಳೂ ನಡೆಯುತ್ತಿವೆ ಎನ್ನಲಾಗಿದೆ. ರಾಜತಾಂತ್ರಿಕ ಶಾಂತಿ ಮಾತುಕತೆಗಳ ಮೂಲಕ ಸಮಸ್ಯೆ ಬಗೆಹರಿಸಲು ಎರಡೂ ದೇಶಗಳು ಪ್ರಯತ್ನ ನಡೆಸುತ್ತಿದ್ದು, ಮಾತುಕತೆ ಫಲಪ್ರದವಾಗುವ ಸಾಧ್ಯತೆಗಳು ದಟ್ಟವಾಗಿವೆ ಎನ್ನಲಾಗಿದೆ. ಒಟ್ಟಿನಲ್ಲಿ ಲಡಾಖ್ ಗಡಿಯಲ್ಲಿ ಉದ್ಭವಿಸಿರುವ ಉದ್ವಿಗ್ನತೆ ತಿಳಿಗೊಳಿಸಲು ಭಾರತ ನಿರಂತರವಾಗಿ ಪ್ರಯತ್ನಿಸುತ್ತಿದ್ದು, ಇದಕ್ಕೆ ಚೀನಾದಿಂದಲೂ ಸೂಕ್ತ ಸ್ಪಂದನೆ ದೊರೆಯುತ್ತಿರುವುದು ಉತ್ತಮ ಬೆಳವಣಿಗೆಯಾಗಿದೆ.
from India & World News in Kannada | VK Polls https://ift.tt/2yFIBbq