ಬೆಂಗಳೂರು: ಕೊರೊನಾ ಮಹಾಮಾರಿಯನ್ನು ನಿರ್ವಹಿಸುಲ್ಲಿ ರಾಜ್ಯ ಹಾಗೂ ಕೇಂದ್ರ ಸರ್ಕಾರ ಎಡವಿದೆ ಎಂದು ಆರೋಪಿಸಿ ಭಾರತದ ಧ್ವನಿಯಾಗಿ ಎಂಬ ಅಭಿಯಾನವನ್ನು ಹಮ್ಮಿಕೊಂಡಿದೆ. ಸಾಮಾಜಿಕ ಜಾಲತಾಣಗಳ ಮೂಲಕ ಸರ್ಕಾರದ ತಪ್ಪುಗಳನ್ನು ಹಾಗೂ ಆಗಬೇಕಾಗಿರುವ ಕೆಲಸಗಳ ಕುರಿತಾಗಿ ಪ್ರಮುಖ ಬೇಡಿಕೆಗಳನ್ನು ಆನ್ಲೈನ್ ಹಾಗೂ ಸಾಮಾಜಿಕ ಜಾಲತಾಣಗಳ ಮೂಲಕ ಸರ್ಕಾರದ ಮುಂದಿಡಲಿದೆ. ಕೊರೊನಾ ಲಾಕ್ ಡೌನ್ನಿಂದ ಸಂಕಷ್ಟದಲ್ಲಿರುವ ಬಡ ಕುಟುಂಬಗಳಿಗೆ ಕೂಡಲೇ 10,000 ಪರಿಹಾಋ ನೀಡಬೇಕು. ಹಣಕಾಸಿನ ಸಹಾಯವನ್ನು ನೀಡುವ ಮೂಲಕ ಬಡ ಹಾಗೂ ಮಧ್ಯಮ ವರ್ಗದ ಜನರ ಕೈಯಲ್ಲಿ ಹಣ ಇರುವಂತೆ ನೋಡಿಕೊಳ್ಳಬೇಕು. ತಮ್ಮ ಊರುಗಳಿಗೆ ತೆರಳುವ ವಲಸೆ ಕಾರ್ಮಿಕರಿಗೆ ಸಾರಿಗೆ ವ್ಯವಸ್ಥೆ ಉಚಿತವಾಗಿ ಕಲ್ಪಿಸಬೇಕು. ಹಾಗೂ ಅವರು ಸುರಕ್ಷಿತವಾಗಿ ತಮ್ಮ ಊರುಗಳಿಗೆ ತೆರಳುವಂತೆ ನೋಡಿಕೊಳ್ಳಬೇಕು. ಜನರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ನರೇಗಾ ಯೋಜನೆಯ ವಾರ್ಷಿಕ ಕೆಲಸದ ದಿನಗಳನ್ನು 200 ದಿನಗಳಿಗೆ ಹೆಚ್ಚಿಸಬೇಕು ಎಂಬಿತ್ಯಾದಿ ಬೇಡಿಕೆಗಳನ್ನು ಕಾಂಗ್ರೆಸ್ ಸರ್ಕಾರದ ಮುಂದಿಟ್ಟಿದೆ. ಈ ಬೇಡಿಕೆಗಳೊಂದಿಗೆ ಫೇಸ್ ಬುಕ್, ಟ್ವಿಟ್ಟರ್ ಹಾಗೂ ಯೂಟ್ಯೂಬ್ಗಳ ಮೂಲಕ ಭಾರತದ ಧ್ವನಿಯಾಗಿ ಎಂಬ ಅಭಿಯಾನವನ್ನು ನಡೆಸಲಿದೆ. ಪೋಸ್ಟರ್, ಬ್ಯಾನರ್ ಹಾಗೂ ವಿಡಿಯೋಗಳ ಮೂಲಕ ಕಾಂಗ್ರೆಸ್ ಕಾರ್ಯಕರ್ತರು ಅಭಿಯಾನದಲ್ಲಿ ಸಕ್ರಿಯವಾಗಿ ಭಾಗಿಯಾಗಬೇಕು ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ತಿಳಿಸಿದ್ದಾರೆ. ಗುರುವಾರ ಬೆಳಗ್ಗೆ 11 ಗಂಟೆಗೆ ಈ ಅಭಿಯಾನ ಆರಂಭಗೊಳ್ಳಲಿದೆ.
from India & World News in Kannada | VK Polls https://ift.tt/2ZPDHUt