ಮುರಿದ ಸಂಪ್ರದಾಯ; ಪಾಕಿಸ್ತಾನಕ್ಕಿಲ್ಲ ಈದ್ ಸಿಹಿ

ಹೊಸದಿಲ್ಲಿ: ಕೆಲವು ವಿಶೇಷ ಸಂದರ್ಭಗಳಲ್ಲಿ ಅಟ್ಟಾರಿ-ವಾಘಾ ಗಡಿಯಲ್ಲಿ ಭಾರತದ ಗಡಿ ಭದ್ರತಾ ಪಡೆ () ಹಾಗೂ ಪಾಕಿಸ್ತಾನದ ರೇಂಜರ್ಸ್ ನಡುವೆ ಸಿಹಿತಿಂಡಿ ಹಂಚಿಕೊಳ್ಳುವುದು ವಾಡಿಕೆಯಾಗಿದೆ. ಆದರೆ ಈ ಬಾರಿ ಹಬ್ಬದ ಸಂಭ್ರಮದಲ್ಲಿ ಪಾಕಿಸ್ತಾನಕ್ಕೆ ಸಿಹಿ ನೀಡುವ ಸಂಪ್ರದಾಯವನ್ನು ಮುರಿಯಲಾಗಿದೆ. ಈ ಬಗ್ಗೆ ಬಿಎಸ್‌ಎಫ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಜಮ್ಮುವಿನಿಂದ ಹಿಡಿದು ಗುಜರಾತ್ ವರೆಗೆ ಗಡಿ ಪ್ರದೇಶದಲ್ಲಿ ಶುಭಾಶಯ ವಿನಿಮಯ ಮಾಡಿಕೊಳ್ಳುವ ಸಂಪ್ರದಾಯ ನಡೆದಿಲ್ಲ ಎಂದು ಬಿಎಸ್‌ಎಫ್ ಅಧಿಕಾರಿಗಳು ತಿಳಿಸಿದ್ದಾರೆ. ಗಡಿಯಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿರುವುದು ಮತ್ತು ಪಾಕಿಸ್ತಾನದಿಂದ ಅಪ್ರಚೋದಿತ ದಾಳಿ ಮುಂದುವರಿಯುತ್ತಿರುವ ಹಿನ್ನೆಲೆಯಲ್ಲಿ ಇಂತಹದೊಂದು ಬೆಳವಣಿಗೆ ನಡೆದಿದೆ ಎನ್ನಲಾಗಿದೆ. ಹಾಗಿದ್ದರೂ ನೆರೆಯ ಬಾಂಗ್ಲಾದೇಶದ ಬಾರ್ಡರ್ ಗಾರ್ಡ್ ಬಾಂಗ್ಲಾದೇಶ (ಬಿಜಿಬಿ) ಸೈನಿಕರಿಗೆ ಸಿಹಿ ಹಂಚುವ ಮೂಲಕ ಬಿಎಸ್‌ಎಫ್ ಗಮನ ಸೆಳೆದಿದೆ. ಹಾಗೂ ಬಾಂಗ್ಲಾದೇಶ 4,096 ಕೀ.ಮೀ. ಉದ್ದದ ಗಡಿ ಪ್ರದೇಶವನ್ನು ಹಂಚಿಕೊಳ್ಳುತ್ತಿದೆ. ಕಳೆದ ವರ್ಷ ದೀಪಾವಳಿ, ರೈಸಿಂಗ್ ಡೇ ಮತ್ತು ಈ ವರ್ಷ ಗಣರಾಜ್ಯೋತ್ಸವದಂದು ಭಾರತ ಸಿಹಿ ತಿಂಡಿ ವಿತರಿಸುವ ಸಂಪ್ರದಾಯಕ್ಕೆ ಮುಂದಾಗಿದ್ದಾಗ ಅದನ್ನು ನಿರಾಕರಿಸಿತ್ತು. ಭಾರತವು ಜಮ್ಮು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡಿದ ಸಂವಿಧಾನದ 370ನೇ ವಿಧಿ ರದ್ದುಗೊಳಿಸಿರುವುದು ಪಾಕಿಸ್ತಾನ ಆಕ್ರೋಶಕ್ಕೆ ಕಾರಣವಾಗಿತ್ತು. ಅಲ್ಲಿಂದ ಬಳಿಕ ಉಭಯ ದೇಶಗಳ ನಡುವಣ ಬಾಂಧವ್ಯ ಕಡಿದುಕೊಂಡಿದೆ.


from India & World News in Kannada | VK Polls https://ift.tt/2TKaBC1

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...