ನವದೆಹಲಿ: ಕಳೆದ ವಾರ ಲಡಾಖ್ ಗಡಿಯಲ್ಲಿ ಭಾರತೀಯ ಸೈನಿಕರನ್ನು ಚೀನಾ ವಶಕ್ಕೆ ಪಡೆದಿತ್ತು ಎಂಬುದು ಕೇವಲ ವದಂತಿ ಎಂದು ಸ್ಪಷ್ಟಪಡಿಸಿದೆ. ಈ ಕುರಿತು ಪ್ರಕಟಣೆ ಹೊರಡಿಸಿರುವ ಭಾರತೀಯ ಸೇನೆ, ಗಡಿಯಲ್ಲಿ ಭಾರತೀಯ ಸೈನಿಕರನ್ನು ಚೀನಾ ವಶಕ್ಕೆ ಪಡೆದಿಲ್ಲ ಎಂದು ಸ್ಪಷ್ಟಪಡಿಸಿದೆ. ಅಲ್ಲದೇ ಈ ಕುರಿತು ಮಾಧ್ಯಮಗಳಲ್ಲಿ ಪ್ರಕಟವಾದ ವರದಿಗಳು ಸತ್ಯಕ್ಕೆ ದೂರವಾದವು ಎಂದು ಹೇಳಿದೆ. ಈ ಕುರಿತು ಪ್ರತಿಕ್ರಿಯೆ ನೀಡಿರುವ ಭಾರತೀಯ ಸೇನೆಯ ವಕ್ತಾರ ಕರ್ನಲ್ ಅಮನ್ ಆನಂದ್, ಕಳೆದ ವಾರ ಲಡಾಖ್ ಗಡಿಯಲ್ಲಿ ಯಾವುದೇ ಭಾರತೀಯ ಸೈನಿಕರನ್ನು ಚೀನಾ ವಶಕ್ಕೆ ಪಡೆದಿಲ್ಲ ಎಂದು ಹೇಳಿದ್ದಾರೆ. ಈ ಕುರಿತು ಮಾಧ್ಯಮಗಳಲ್ಲಿ ಪ್ರಕಟವಾದ ಸುದ್ದಿಗಳನ್ನು ವದಂತಿ ಎಂದು ಕರೆದಿರುವ ಕರ್ನಲ್ ಅಮನ್ ಆನಂದ್, ಇಂತಹ ಯಾವುದೇ ಘಟನೆ ನಡೆದಿಲ್ಲ ಎಂದು ನಾನು ಸ್ಪಷ್ಟವಾಗಿ ಹೇಳಬಲ್ಲೆ ಎಂದು ನುಡಿದಿದ್ದಾರೆ. ಲಡಾಖ್ ಗಡಿಯಲ್ಲಿ ಭಾರೀ ಸಂಖ್ಯೆಯಲ್ಲಿ ಸೈನ್ಯ ಜಮಾವಣೆ ಮಾಡಿರುವ ಚೀನಾ, ಕಳೆದ ವಾರ ಭಾರತೀಯ ಸೇನೆ ಮತ್ತು ಐಟಿಬಿಪಿ ಯೋಧರನ್ನು ವಶಕ್ಕೆ ಪಡೆದು ಕೆಲವು ಗಂಟೆಗಳ ಬಳಿಕ ಬಿಡುಗಡೆ ಮಾಡಿತ್ತು ಎಂದು ಈ ಮೊದಲು ವರದಿಯಾಗಿತ್ತು.
from India & World News in Kannada | VK Polls https://ift.tt/2AXc5Cm