'ಆಪರೇಷನ್‌ ಕಮಲ'ದ ಪ್ರಮುಖ ರೂವಾರಿ ಸಂತೋಷ್‌ ಇನ್ನು ಸಿಎಂ ರಾಜಕೀಯ ಕಾರ್ಯದರ್ಶಿ!

ಬೆಂಗಳೂರು: ಮುಖ್ಯಮಂತ್ರಿ ಅವರ ಸಂಬಂಧಿ ಹಾಗೂ ಆಪರೇಷನ್ ಕಮಲದ ಪ್ರಮುಖ ರೂವಾರಿಯಾಗಿ ಕೆಲಸ ಮಾಡಿದ್ದ ಎನ್ ಆರ್‌.ಸಂತೋಷ್‌ ಅವರು ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿಯಾಗಿ ನೇಮಕಗೊಳ್ಳಲಿದ್ದಾರೆ. ಈ ಸಂಬಂಧ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಸಹಿ ಮಾಡಿರುವ ಟಿಪ್ಪಣಿಯಲ್ಲಿನ ಮುಖ್ಯ ಕಾರ್ಯದರ್ಶಿಗೆ ಕಳುಹಿಸಿಕೊಡಲಾಗಿದೆ. ತುಮಕೂರು ಜಿಲ್ಲೆ ತಿಪಟೂರು ತಾಲೂಕಿನ ಹೊಣವಿನ ಕೆರೆ ಎನ್ ಆರ್‌. ಸಂತೋಷ್‌ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ರಾಜ್ಯ ಸಚಿವ ಸಂಪುಟ ದರ್ಜೆಯ ಸ್ಥಾನಮಾನದೊಂದಿಗೆ ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿಯಾಗಿ ನೇಮಿಸುವಂತೆ ಸೂಚಿಸಲಾಗಿದೆ. ಆದರೆ ಈ ಸಂಬಂಧ ಸರಕಾರಿ ಆದೇಶ ಹೊರಬೀಳಬೇಕಿದೆ. ಕುಮಾರಸ್ವಾಮಿ ನೇತೃತ್ವದ ಜೆಡಿಎಸ್‌-ಕಾಂಗ್ರೆಸ್‌ ಸಮ್ಮಿಶ್ರ ಸರಕಾರ ಪತ್ರ ಹಾಗೂ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರಕಾರ ರಚನೆಯಲ್ಲಿ ಸಂತೋಷ್‌ ಪ್ರಮುಖ ಪಾತ್ರಧಾರಿಯಾಗಿದ್ದರು. ಬಿಜೆಪಿ ಸರಕಾರ ಅಧಿಕಾರಕ್ಕೆ ಬಂದ ಬಳಿಕ ಯಡಿಯೂರಪ್ಪ ಅವರೊಂದಿಗೆ ಸದಾ ಜತೆಯಲ್ಲಿರುತ್ತಿದ್ದರು. ಆ ನಂತರ ದೂರ ಸರಿದಿದ್ದರು. ಮಾತ್ರವಲ್ಲ ಕೆಲವು ತಿಂಗಳಿಂದ ಬಹಿರಂಗವಾಗಿ ಎಲ್ಲಿಯೂ ಕಾಣಿಸಿಕೊಂಡಿರಲಿಲ್ಲ. ಈಗ ದಿಢೀರ್ ಸಿಎಂ ರಾಜಕೀಯ ಕಾರ್ಯದರ್ಶಿಯಾಗಿ ನೇಮಕಗೊಳ್ಳುತ್ತಿರುವುದು ಬಿಜೆಪಿಯಲ್ಲಿ ಚರ್ಚೆಗೆ ಗ್ರಾಸ ಒದಗಿಸಿದೆ.


from India & World News in Kannada | VK Polls https://ift.tt/2zHoMkf

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...