ಗಗನಯಾನ: ಭಾರತೀಯ ಗಗನಯಾತ್ರಿಗಳಿಗೆ ರಷ್ಯಾದಲ್ಲಿ ತರಬೇತಿ ಪುನರಾರಂಭ

ಹೊಸದಿಲ್ಲಿ: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ () ಕೈಗೆತ್ತಿಕೊಂಡಿರುವ ಮಹತ್ವಕಾಂಕ್ಷಿ ಮಾನವ ಸಹಿತ ಗಗನಯಾನಕ್ಕೆ ಆಯ್ಕೆಯಾಗಿರುವ ನಾಲ್ಕು ಗಗನಯಾತ್ರಿಗಳ ತರಬೇತಿ ರಷ್ಯಾದ ಮಾಸ್ಕೊದಲ್ಲಿ ಮೇ 12ರಿಂದ ಪುನರಾರಂಭಗೊಂಡಿದೆ. ಇಸ್ರೋ ಹಾಗೂ ರಷ್ಯಾದ ಬಾಹ್ಯಾಕಾಶ ಸಂಸ್ಥೆ ರೋಸ್ಕೊಸ್ಮೋಸ್‌ ನಡುವೆ ನಡೆದ ಒಪ್ಪಂದದ ಪ್ರಕಾರ ಮಾಸ್ಕೊದಲ್ಲಿರುವ ಗಗರಿನ್‌ ರೀಸರ್ಚ್‌ ಆ್ಯಂಡ್‌ ಟೆಸ್ಟ್‌ ಕಾಸ್ಮೊನಾಟ್‌ ಟ್ರೈನಿಂಗ್‌ ಸೆಂಟರ್‌ನಲ್ಲಿ (ಜಿಸಿಟಿಸಿ) ಗಗನಯಾತ್ರಿಗಳಿಗೆ ತರಬೇತಿ ನೀಡಲಾಗುತ್ತಿದೆ. ಕೊರೊನಾ ಸೋಂಕು ವ್ಯಾಪಿಸಲು ಆರಂಭಗೊಂಡ ಬಳಿಕ ತರಬೇತಿಯನ್ನು ಸ್ಥಗಿತಗೊಳಿಸಲಾಗಿತ್ತು. ಈಗ ಜನ ಜೀವನ ಸಹಜ ಸ್ಥಿತಿಗೆ ಮರಳುತ್ತಿರುವ ಕಾರಣ ತರಬೇತಿಯನ್ನು ಶುರು ಮಾಡಲಾಗಿದೆ. ತರಬೇತಿ ಕೇಂದ್ರಗಳಲ್ಲಿ ಸೋಂಕು ತಗುಲದಂತೆ ಎಲ್ಲ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ. ಸಾಮಾಜಿಕ ಅಂತರ, ಸೋಂಕು ನಿವಾರಣೆ ಹಾಗೂ ಆರೋಗ್ಯ ತಪಾಸಣೆ ನಡೆಸಲಾಗುತ್ತಿದೆ ಎಂದು ರೋಸ್ಕೊಸ್ಮೋಸ್‌ ಟ್ವೀಟ್‌ ಮಾಡಿದೆ. ಸ್ವಾತಂತ್ರ್ಯ ದಿನದ ವಜ್ರ ಮಹೋತ್ಸವದ ಅಂಗವಾಗಿ 2022ರಲ್ಲಿ ಮಾನವ ಸಹಿತ ಗಗನಯಾನಕ್ಕೆ ಇಸ್ರೋ ಸಿದ್ಧತೆ ನಡೆಸಿದೆ. ಅಂದಾಜು 10 ಸಾವಿರ ಕೋಟಿ ರೂ. ವೆಚ್ಚದ ಈ ಯೋಜನೆಯಲ್ಲಿ ಬಾಹ್ಯಾಕಾಶಕ್ಕೆ ಹೋಗಲು ಭಾರತೀಯ ವಾಯುಪಡೆಯ ನಾಲ್ವರು ಪೈಲಟ್‌ಗಳು ತರಬೇತಿ ಪಡೆಯುತ್ತಿದ್ದಾರೆ.


from India & World News in Kannada | VK Polls https://ift.tt/3cWUkRz

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...